ಆಧುನಿಕ ‘ಆಫ್ ಸೆಟ್‌’ ತಂತ್ರಜ್ಞಾನ ಮೊದಲಿಗೆ ಬಳಸಿದ ಕೀರ್ತಿ ಉದಯವಾಣಿಯದು

ಪತ್ರಿಕಾ ದಿನದ ಗೌರವ ಸ್ವೀಕರಿಸಿ ಟಿ. ಸತೀಶ್‌ ಯು. ಪೈ

Team Udayavani, Jul 1, 2019, 6:00 AM IST

300619Astro03

ಉಡುಪಿ: ಭಾರತದ ಪತ್ರಿಕಾ ರಂಗದಲ್ಲಿ ಮೊದಲಿಗೆ ಆಧುನಿಕ ‘ಆಫ್ಸೆಟ್’ ತಂತ್ರಜ್ಞಾನ ಬಳಸಿ ದಿನಪತ್ರಿಕೆಯನ್ನು ಮುದ್ರಣ ಮಾಡಿದ ಕೀರ್ತಿ ಉದಯವಾಣಿ ದಿನಪತ್ರಿಕೆಗೆ ಸಲ್ಲುತ್ತದೆ. ಇದರ ಹಿಂದೆ ಸಾಕಷ್ಟು ಸಿಬಂದಿ ಕೆಲಸ ಮಾಡಿದ್ದಾರೆ ಎಂದು ಮಣಿಪಾಲ ಮೀಡಿಯಾ ನೆಟ್ವರ್ಕ್‌ ಲಿ.ನ ಆಡಳಿತ ನಿರ್ದೇಶಕ ಟಿ. ಸತೀಶ್‌ ಯು. ಪೈ ತಿಳಿಸಿದರು.

ಬೆಂಗಳೂರು ಪತ್ರಕರ್ತರ ವೇದಿಕೆ ಪತ್ರಿಕಾ ದಿನಾಚರಣೆ ಅಂಗವಾಗಿ ರವಿವಾರ ಮಣಿಪಾಲದಲ್ಲಿ ಆಯೋಜಿಸಿದ್ದ ‘ಹಿರಿಯರೆಡೆಗೆ ನಮ್ಮ ನಡೆ’ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಸಮ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ತರಂಗ ವಾರ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ| ಸಂಧ್ಯಾ ಪೈ ಮಾತನಾಡಿ, ಉದಯವಾಣಿ ಪ್ರತಿಕೆ ಪ್ರಾರಂಭದಲ್ಲಿ ಇಂದಿನಷ್ಟು ತಂತ್ರಜ್ಞಾನ ಮುಂದುವರಿದಿರಲಿಲ್ಲ. ಸಂಪಾದಕೀಯ ವಿಭಾಗ ಸೇರಿದಂತೆ ವಿವಿಧ ವಿಭಾಗದವರ ಪರಿಶ್ರಮದಿಂದ ಪತ್ರಿಕೆ ಕರಾವಳಿಯಲ್ಲಿ ಬಹಳಷ್ಟು ಓದುಗರನ್ನು ಹೊಂದಿದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್‌ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಮಾತನಾಡಿ, ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಪತ್ರಿಕೆಗಳು ಮುಖ್ಯ ಪಾತ್ರ ವಹಿಸುತ್ತವೆ. ಉದಯವಾಣಿ ಪತ್ರಿಕೆ 50ರ ಸಂಭ್ರಮ ಆಚರಿಸುತ್ತಿದೆ. ಆರೋಗ್ಯಪೂರ್ಣ ಸಮಾಜ ನಿರ್ಮಾಣದಲ್ಲಿ ಉದಯವಾಣಿ ಪತ್ರಿಕೆ ಕೊಡುಗೆ ಅಪಾರ ಎಂದರು.

ತರಂಗ ವಾರ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ| ಸಂಧ್ಯಾ ಪೈ ಅವರನ್ನು ಈ ಸಂದರ್ಭ ಗೌರವಿಸಲಾಯಿತು. ಪತ್ರಕರ್ತರ ವೇದಿಕೆಯ ಜಿಲ್ಲಾಧ್ಯಕ್ಷ ಶೇಖರ್‌ ಅಜೆಕಾರ್‌ ಅಧ್ಯಕ್ಷತೆ ವಹಿಸಿದ್ದರು. ಮಣಿಪಾಲ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಟಿ. ಗೌತಮ್‌ ಪೈ, ಉದ್ಯಮಿ ಪ್ರಶಾಂತ ಕಾಮತ್‌, ವಿಶ್ವನಾಥ್‌ ಶೆಣೈ, ಸಂಗೀತ ತಜ್ಞ ನಾದವೈಭವಂ ವಾಸುದೇವ ಭಟ್, ಸಾಹಿತಿ ಕು.ಗೋ., ಪಿ.ಎನ್‌. ಆಚಾರ್ಯ, ಎ. ನರಸಿಂಹಮೂರ್ತಿ ಬೊಮ್ಮರಬೆಟ್ಟು ಉಪಸ್ಥಿತರಿದ್ದರು.

ಸಂಘಟಕ ಭುವನ ಪ್ರಸಾದ್‌ ಹೆಗ್ಡೆ ಸ್ವಾಗತಿಸಿದರು, ರಾಘವೇಂದ್ರ ಕರ್ವಾಲು ಅವರು ವಂದಿಸಿದರು.

ಸುವರ್ಣ ಸಂಭ್ರಮದಲ್ಲಿ ಉದಯವಾಣಿ

ಮೂರು ತಿಂಗಳಿಗಿಂತ ಹೆಚ್ಚು ಕಾಲ ನಮ್ಮ ಪತ್ರಿಕೆ ಬದುಕುವುದಿಲ್ಲ ಎಂದು ಹಲವರು ಹೇಳಿದ್ದರು. ಓದುಗರು, ತಂತ್ರಜ್ಞರು ಹಾಗೂ ಅಂದಿನಿಂದ ಇಂದಿನವರೆಗೆ ದುಡಿದ ನಿಷ್ಠಾವಂತರಿಂದ ಉದಯವಾಣಿ ಸುವರ್ಣ ಸಂಭ್ರಮ ಆಚರಿಸುತ್ತಿದೆ. ದಿನಪತ್ರಿಕೆಯನ್ನು ಕಟ್ಟುವಲ್ಲಿ ಟಿ. ಮೋಹನ್‌ದಾಸ್‌ ಪೈಅವರ ಪಾತ್ರ ಪ್ರಮುಖವಾಗಿದೆ. ರಾಮಾಚಾರ್ಯ, ಗೋವಿಂದಾಚಾರ್ಯ ಅವರು ಉದಯವಾಣಿ ಪತ್ರಿಕೆಯ ಬಲಿಷ್ಠವಾದ ಆಧಾರ ಸ್ತಂಭಗಳಾಗಿದ್ದರು. ಅವರನ್ನು ಈ ಸಂದರ್ಭದಲ್ಲಿ ನೆನಪಿಸುವುದು ಅಗತ್ಯವಾಗಿದೆ ಎಂದು ಟಿ. ಸತೀಶ್‌ ಯು. ಪೈ ಅವರು ತಿಳಿಸಿದರು.

ಟಾಪ್ ನ್ಯೂಸ್

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

1-gopal

Maharashtra polls: ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮೃತರ ಕುಟುಂಬಸ್ಥರು ಪಾರದರ್ಶಕ ತನಿಖೆಗೆ ಒತ್ತಾಯಿಸಿ ಮನವಿ ಸಲ್ಲಿಸಿದರು

AjekarCase: ತನಿಖೆ ದಿಕ್ಕು ತಪ್ಪುತ್ತಿದೆ: ದಿಲೀಪ್ ತಂದೆ ವಿರುದ್ದ ಬಾಲಕೃಷ್ಣ ಮನೆಯವರ ಆರೋಪ

8

Katpadi: ಭತ್ತದ ತೆನೆಯಿಂದಲೇ ಆಟೋ ರಿಕ್ಷಾ ಅಲಂಕರಿಸಿ ಸಂಭ್ರಮಿಸಿದ ಚಾಲಕ

Udupi: ಗೀತಾರ್ಥ ಚಿಂತನೆ-83: ಅಪೇಕ್ಷಿತ-ಅನಪೇಕ್ಷಿತ ವಂಶವಾಹಿಗಳು

Udupi: ಗೀತಾರ್ಥ ಚಿಂತನೆ-83: ಅಪೇಕ್ಷಿತ-ಅನಪೇಕ್ಷಿತ ವಂಶವಾಹಿಗಳು

ರಾಜ್ಯ ಸರಕಾರದ ವಿರುದ್ಧ ಮೂರು ಹಂತದ ಪ್ರತಿಭಟನೆ: ಕಿಶೋರ್‌

Congress Govt.,: ರಾಜ್ಯ ಸರಕಾರದ ವಿರುದ್ಧ ಮೂರು ಹಂತದ ಪ್ರತಿಭಟನೆ: ಕಿಶೋರ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-wqqwewq

Australia ಗೆಲುವಿಗೆ ಕಮಿನ್ಸ್‌  ನೆರವು: ಪಾಕಿಸ್ಥಾನ 203; ಆಸೀಸ್‌  8 ವಿಕೆಟಿಗೆ 204

crime

Trasi: ಕಾರು ಢಿಕ್ಕಿಯಾಗಿ ಗಾಯ; ಪ್ರಕರಣ ದಾಖಲು

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.