ಧರ್ಮ ಸಂಸತ್‌ ಹಿಂದೂ ಧರ್ಮದ ದಿಕ್ಸೂಚಿಯಾಗಲಿ


Team Udayavani, Sep 10, 2017, 7:50 AM IST

darmasamsat.jpg

ಉಡುಪಿ: ಉಡುಪಿಯಲ್ಲಿ ನಡೆಯಲಿರುವ ಧರ್ಮ ಸಂಸತ್‌ ಸಮಾವೇಶವು ಹಿಂದೂ ಧರ್ಮದ ದಿಕ್ಸೂಚಿಯಾಗಲಿದೆ. ಭಾರತ ಸಾಕಷ್ಟು ಅಭಿವೃದ್ಧಿ ಹೊಂದಿದ್ದರೂ ಮೂಲಭೂತವಾದಿಗಳಿಂದ ಘಾಸಿಯಾಗುತ್ತಿದ್ದು, ಅದರ ನಿವಾರಣೆಗೆ ಈ ಅಧಿವೇಶನ ಮುನ್ನುಡಿಯಾಗಲಿ ಎಂದು ಮಣಿಪಾಲ ಮೀಡಿಯಾ ನೆಟ್‌ವರ್ಕ್‌ ಲಿ. ನ ಕಾರ್ಯನಿರ್ವಾಹಕ ನಿರ್ದೇಶಕ ಟಿ. ಗೌತಮ್‌ ಎಸ್‌.ಪೈ ಹೇಳಿದರು.

ಪರ್ಯಾಯ ಶ್ರೀ ಪೇಜಾವರ ಮಠದ ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷತ್‌ ನೇತೃತ್ವದಲ್ಲಿ ನ. 24ರಿಂದ 26ರ ವರೆಗೆ ನಡೆಯುವ ಧರ್ಮ ಸಂಸತ್‌ ಅಧಿವೇಶನದ ಕಾರ್ಯಾಲಯವನ್ನು ಶನಿವಾರ ಅದಮಾರು ಛತ್ರದ ಬಳಿಯ
ವಿಜಯಧ್ವಜದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.

ಧರ್ಮ ಸಂಸತ್‌ ಕಾರ್ಯಾಲಯ ಉದ್ಘಾಟಿಸುವ ಅವಕಾಶ ಸಿಕ್ಕಿದ್ದು ಹೆಮ್ಮೆಯ ಕ್ಷಣ. ಈ ಧರ್ಮ ಸಂಸತ್‌ ಸಮಾವೇಶವು ದೇಶದಲ್ಲಿ ಶಾಂತಿ, ಸಾಮರಸ್ಯ ನೆಲೆಸುವಂತೆ ಮಾಡಲಿ ಎಂದು ಅವರು ಶುಭ ಹಾರೈಸಿದರು.

ಸಂಸದ ನಳಿನ್‌ ಕುಮಾರ್‌ ಕಟೀಲು ಮಾತನಾಡಿ, ಧರ್ಮ ಸಂಸತ್‌ ದೇಶದ ಇತಿಹಾಸದಲ್ಲಿ ನಕ್ಷತ್ರವಾಗಿ ಬೆಳಗಲಿ. ನಮ್ಮ ದೇಶ ತ್ಯಾಗಭೂಮಿಯಾಗಿ ಹೆಸರುವಾಸಿಯಾಗಿದ್ದು, ಸಂತರಿಗೆ ಶ್ರೇಷ್ಠ ಸ್ಥಾನ ನೀಡಿದೆ. ವೈಚಾರಿಕ ದಾಳಿ, ಲವ್‌ ಜೆಹಾದ್‌ ಹೆಸರಲ್ಲಿ ಸಾಂಸ್ಕೃತಿಕ ದಾಳಿ, ಅಹಿಂದದ ಮೂಲಕ ಹಿಂದೂ ಧರ್ಮವನ್ನು ಒಡೆಯುವ ಅಧಿಕಾರದ ದಾಳಿ ಹೀಗೆ ಹಿಂದೂ ಧರ್ಮದ ಮೇಲೆ 3 ದಾಳಿಗಳಾಗುತ್ತಿದ್ದು, ಇದಕ್ಕೆ ಈ ಸಮಾವೇಶ ಪರಿಹಾರ ಕಂಡುಕೊಳ್ಳಬೇಕಿದೆ ಎಂದರು.
ಆರ್‌ಎಸ್‌ಎಸ್‌  ವಿಭಾಗೀಯ ಕಾರ್ಯಕಾರಣಿ ಸದಸ್ಯ ಶಂಭು ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ವಿಎಚ್‌ಪಿ ಪ್ರಾಂತ ಸಂಘಟನಾ ಕಾರ್ಯದರ್ಶಿ ಬಸವರಾಜು ಪ್ರಸ್ತಾವನೆ ಗೈದು, 2,500 ಶ್ರೀಗಳು ಪಾಲ್ಗೊಳ್ಳಲ್ಲಿರುವ ಧರ್ಮ ಸಂಸತ್‌ ಭಾರತಕ್ಕೆ ಹೊಸ ಶಕ್ತಿ ತುಂಬಲಿದೆ. ಈ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ, ಮತಾಂತರನಿಲ್ಲಬೇಕು. ಹಿಂದೂ ಸಮಾಜದಲ್ಲಿ ಸಾಮರಸ್ಯ ನೆಲೆಸಬೇಕು ಹಾಗೂ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಈ 4 ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗುವುದು ಎಂದರು.

ವಿಶ್ವ ಹಿಂದೂ ಪರಿಷತ್‌ ಉಪಾಧ್ಯಕ್ಷ ಎಂ.ಬಿ. ಪುರಾಣಿಕ್‌ ಸ್ವಾಗತಿಸಿದರು. ಪ್ರಾಂತ ಸಹ ಕಾರ್ಯದರ್ಶಿ ಕೃಷ್ಣಮೂರ್ತಿ ಕಾರ್ಯಕ್ರಮ ನಿರೂಪಿಸಿದರು. ವಿಎಚ್‌ಪಿ ಜಿಲ್ಲಾಧ್ಯಕ್ಷ ವಿಲಾಸ್‌ ನಾಯಕ್‌ ವಂದಿಸಿದರು.

“ಶಾಂತಿ, ಸಾಮರಸ್ಯ ಸ್ಥಾಪನೆ’
ಧರ್ಮ ಸಂಸ್ಥಾಪನೆಗಾಗಿ ಅವತರಿಸಿರುವ ಶ್ರೀಕೃಷ್ಣ ನೆಲೆಯಾಗಿರುವ ಉಡುಪಿಯಲ್ಲಿ ನಡೆಯುವ ಧರ್ಮ ಸಂಸತ್‌ ಗೋಹತ್ಯೆ, ಮತಾಂತರ, ಸಾಮರಸ್ಯದ ಕೊರತೆ ಹಾಗೂ ರಾಮಮಂದಿರ ನಿರ್ಮಾಣದಂತಹ ಮಹಣ್ತೀದ
ನಿರ್ಣಯಕ್ಕೆ ಸಾಕ್ಷಿಯಾಗಲಿ. ಈ ಸಮಾವೇಶದಿಂದ ಸಮಾಜದಲ್ಲಿ ಶಾಂತಿ, ಸಾಮರಸ್ಯ ಸ್ಥಾಪನೆಯಾಗಲಿದೆ. ಕೈಗೊಂಡ ನಿರ್ಣಯ ಕಾರ್ಯರೂಪಕ್ಕೆ ಬರುವಂತೆ, ಕಾರ್ಯಕ್ರಮ ಸುಸೂತ್ರವಾಗಿ ನಡೆಸಲು ಬೇಕಾದ ಶಕ್ತಿ – ಸಾಮರ್ಥ್ಯವನ್ನು ಶ್ರೀ ಕೃಷ್ಣನು ನೀಡುತ್ತಾನೆ ಎಂದು ಪರ್ಯಾಯ ಶ್ರೀ ಪೇಜಾವರ ಮಠದ ಕಿರಿಯ ಯತಿ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹೇಳಿದರು.

ಟಾಪ್ ನ್ಯೂಸ್

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Karkala: ಬೈಕ್‌ ಢಿಕ್ಕಿ; ಗಾಯ

Karkala: ಬೈಕ್‌ ಢಿಕ್ಕಿ; ಗಾಯ

ನ. 26 : ಕಾಪುವಿನಲ್ಲಿ ಸಂವಿಧಾನ ಉಳಿಸಿ ಬೃಹತ್ ಆಂದೋಲನ ಮತ್ತು ಜಾಗೃತಿ ಜಾಥಾ ಆಯೋಜನೆ

ನ. 26 : ಕಾಪುವಿನಲ್ಲಿ ಸಂವಿಧಾನ ಉಳಿಸಿ ಬೃಹತ್ ಆಂದೋಲನ ಮತ್ತು ಜಾಗೃತಿ ಜಾಥಾ ಆಯೋಜನೆ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.