“ಮಕ್ಕಳಿಗೆ ಧಾರ್ಮಿಕತೆಯ ಅರಿವು ಮೂಡಿಸುವ ಕಾರ್ಯವಾಗಲಿ’


Team Udayavani, Feb 28, 2017, 5:09 PM IST

karyavagali.jpg

ಸಿದ್ದಾಪುರ: ಗುಡಿಯೊಳಗಿನ ದೇವರಲ್ಲಿನ ನಂಬಿಕೆಯಂತೆ ದೇಹದ ಆತ್ಮದೊಳಗಿನ ನಂಬಿಕೆಯು ಪವಿತ್ರವಾದದ್ದು. ಧಾರ್ಮಿಕ ಆಚರಣೆಗಳಲ್ಲಿ ಪರಿಶುದ್ಧತೆ ಆವಶ್ಯ. ಮಕ್ಕಳಿಗೆ ಶಿಕ್ಷಣದ ಆವಶ್ಯಕತೆಯಂತೆ ಧಾರ್ಮಿಕತೆಯ ಅರಿವು ಮೂಡಿಸುವ ಕಾರ್ಯವಾಗಬೇಕು ಎಂದು ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಈಶ ವಿಟಲದಾಸ ಸ್ವಾಮೀಜಿ ಅವರು ಹೇಳಿದರು.

ಅವರು ಕೊಂಜಾಡಿ ಶ್ರೀ ದುರ್ಗಾಪರಮೇಶ್ವರೀ ದೇಗುಲದ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಪ್ರವಚನ ನೀಡಿ ಮಾತನಾಡಿದರು.

ಹಿಂದೂ ಧರ್ಮ ಶ್ರೇಷ್ಠವಾದದ್ದು. ಮಕ್ಕಳಲ್ಲಿ ಧಾರ್ಮಿಕತೆಯ ವಾಸ್ತವದ ವಿಚಾರಗಳ ಅರಿವಿನ  ಕೊರತೆಯಿಂದ, ಧರ್ಮಕ್ಕೆ ಹಿನ್ನಡೆಯಾಗುತ್ತಿದೆ. ಹಿಂದೆ ವೃದ್ಧಾಶ್ರಮಗಳಿರಲಿಲ್ಲ. ಇತ್ತೀಚಿನ ದಿನಗಳಲ್ಲಿ  ಜನತೆಯಲ್ಲಿ ಸಂಸ್ಕಾರ ಹಾಗೂ ಜೀವನ ಮೌಲ್ಯಗಳ ಕೊರತೆಯಿಂದಾಗಿ ಹಿರಿಯರ ಬಗ್ಗೆ ಗೌರವವಿಲ್ಲದೆ. ಇದರ ಪರಿಣಾಮ ಹಿರಿಯರನ್ನು ವೃದ್ಧಾಶಮಕ್ಕೆ ಸೇರಿಸುತ್ತಿರುವುದು ವಿಷಾದನೀಯ. ದೇವಸ್ಥಾನಗಳು ಕೇವಲ ಪೂಜೆ ಹಾಗೂ ಧಾರ್ಮಿಕ ಆಚರಣೆಗಳಿಗೆ ಸಿಮೀತವಾಗದೆ, ಸಾಮಾಜಿಕ ಕ್ಷೇತ್ರಗಳ ಅಭಿವೃದ್ಧಿಯ ಚಟುವಟಿಕೆಗಳೊಂದಿಗೆ ಸಮಾಜದ ಕುಂದು ಕೊರತೆಗಳಿಗೆ ಸ್ವಂದಿಸುವ ಕೇಂದ್ರಗಳಾಗಬೇಕು ಎಂದು ಹೇಳಿದರು.

ಕೊಂಜಾಡಿ ಶ್ರೀ ದುರ್ಗಾಪರಮೇಶ್ವರೀ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಟಿ. ಪ್ರಶಾಂತ ಶೆಟ್ಟಿ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ವೆ ಉದ್ಯಮಿ ಬಿ. ಗಣೇಶ ಕಿಣಿ ಬೆಳ್ವೆ, ನಿವೃತ್ತ ಶಿಕ್ಷಕ ಪ್ರಭಾಕರ ಶೆಟ್ಟಿ ಕೊಂಜಾಡಿ, ಬೆಳ್ವೆ ಶ್ರೀ ಶಂಕರನಾರಾಯಣ ದೇಗುಲದ ಮೊಕ್ತೇಸರ ಶಂಕರ ಶೆಟ್ಟಿ ಬೆಳ್ವೆ, ಧಾರ್ಮಿಕ ಮುಖಂಡ ವಿಜಯ ಕುಮಾರ್‌ ಶೆಟ್ಟಿ ಗೋಳಿಯಂಗಡಿ, ಆಡಳಿತ ಅಧಿಕಾರಿ ಆನಂದ, ವ್ಯವಸ್ಥಾಪನಾ ಸಮಿತಿ, ಗ್ರಾಮಸ್ಥರು, ತಂತ್ರಿಗಳು, ಅರ್ಚಕರು, ಕೊಂಜಾಡಿ ಶ್ರೀ ದುರ್ಗಾಪರಮೇಶ್ವರೀ ಭಜನ ಮಂಡಳಿ, ಮಹಿಳಾ ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದರು.

ಈ ಸಂದರ್ಭದಲ್ಲಿ ರಾಷ್ಟ್ರ ಮಟ್ಟದ ಕ್ರೀಡಾಪಟು ಬೆಳ್ವೆ ಶಾಲೆಯ ವಿದ್ಯಾರ್ಥಿನಿ ಅನಿತಾ ಆರ್‌., ಭಗವದ್ಗೀತ ಪ್ರಶಸ್ತಿ ವಿಜೇತೆ ಅಶ್ವಿ‌ನಿ ಕೊಂಜಾಡಿ, ಪ್ರಗತಿಪರ ಕೃಷಿಕ ಮೋಹನ ನಾಯ್ಕ ಹಾಡಿಮನೆ, ಪ್ರಗತಿಪರ ಹೈನುಗಾರ ಕರುಣಾಕರ ಶೆಟ್ಟಿ ಕಲ್ಮಕ್ಕಿ, ಸೇವಾ ಕ್ಷೇತ್ರದಲ್ಲಿ ಬೇಬಿ ಗಂಟುಬೀಳು, ನಾಟಿ ವೈದ್ಯ ರಾಜು ಕೊಠಾರಿ ಕೊಂಜಾಡಿ ಅವರುಗಳನ್ನು ದೇಗುಲದ ಪರವಾಗಿ ಈಶ ವಿಟuಲದಾಸ ಸ್ವಾಮೀಜಿ ಸಮ್ಮಾನಿಸಿದರು. ದೇಗುಲದ ಬ್ರಹ್ಮಕಲಶೋತ್ಸವದಲ್ಲಿ ಸೇವೆ ಸಲ್ಲಿಸಿದ ಆನಂದ, ಪ್ರವೀಣ ಶೆಟ್ಟಿ, ಸತೀಶ್ಚಂದ್ರ ಹೆಗ್ಡೆ, ನರಸಿಂಹ ಆಚಾರ್ಯ, ಸೇವಾ ಪ್ರತಿನಿಧಿ ಸುಶ್ಮಿತಾ, ದಯಾನಂದ ಕಬ್ಬಿನಾಲೆ ಅವರುಗಳನ್ನು ಅಭಿನಂದಿಸಲಾಯಿತು. ವೇ| ಮೂ| ಸದಾಶಿವ ಭಟ್‌ ಬೇಳಂಜೆ ಹಾಗೂ ಅರ್ಚಕ ಅರುಣಾಚಲ ಜೋಯಿಸ್‌ ನೇತೃತ್ವದಲ್ಲಿ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ ವಿಧಿ ವಿಧಾನ ಕಾರ್ಯಕ್ರಮಗಳು ನಡೆದವು.

ಸುದರ್ಶನ ಶೆಟ್ಟಿ ಆರ್ಡಿ ಸ್ವಾಗತಿಸಿ, ಧಾರ್ಮಿಕ ಮುಖಂಡ ವೈ. ವಿಜಯ ಕುಮಾರ್‌ ಶೆಟ್ಟಿ ಪ್ರಸ್ತಾವಿಸಿದರು. ಗಣೇಶ್‌ ಅರಸಮ್ಮಕಾನು ಕಾರ್ಯಕ್ರಮ ನಿರೂಪಿಸಿ, ಗಣೇಶ್‌ ಆಚಾರ್ಯ ಆರ್ಡಿ ವಂದಿಸಿದರು.

ಟಾಪ್ ನ್ಯೂಸ್

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

13

Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್‌

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.