ಪುರಸಭೆ ವ್ಯಾಪ್ತಿಯ ಮದ್ದುಗುಡ್ಡೆಯಿಂದ ಚರ್ಚ್‌ ರಸ್ತೆ ಸೇತುವೆ ಸಂಪರ್ಕ

 ರಿಂಗ್‌ರೋಡ್‌ ಕಾಮಗಾರಿ ಪೂರ್ಣಗೊಳಿಸಲು ಮನವಿ

Team Udayavani, Mar 9, 2020, 5:59 AM IST

ಪುರಸಭೆ ವ್ಯಾಪ್ತಿಯ ಮದ್ದುಗುಡ್ಡೆಯಿಂದ ಚರ್ಚ್‌ ರಸ್ತೆ ಸೇತುವೆ ಸಂಪರ್ಕ

ಕುಂದಾಪುರ: ಇಲ್ಲಿನ ಪುರಸಭೆ ವ್ಯಾಪ್ತಿಯ ಮದ್ದುಗುಡ್ಡೆಯಿಂದ ಚರ್ಚ್‌ ರಸ್ತೆ ಸೇತುವೆ ಸಂಪರ್ಕ ಕಲ್ಪಿಸುವ ವರ್ತುಲ ರಸ್ತೆ ಕಾಮಗಾರಿ ಆರ್ಧಕ್ಕೆ ನಿಂತಿದ್ದು ಅದನ್ನು ಪೂರ್ಣಗೊಳಿಸಬೇಕು ಎಂದು ಪುರಸಭೆ ವ್ಯಾಪ್ತಿ ಯವರು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಮನವಿ ನೀಡಿದ್ದಾರೆ.

ಈ ಭಾಗದಲ್ಲಿರುವ ರೈಸ್‌ ಮಿಲ್‌, ಸಾಮಿಲ್‌ ಸಮೀಪ ಜಾಗದ ಸಮಸ್ಯೆಯಿದ್ದು ಕಾಮಗಾರಿ ಸ್ಥಗಿತಗೊಂಡಿದೆ. ಸ್ಥಳೀಯರೊಂದಿಗೆ ಚರ್ಚಿಸಿದಾಗ ವರ್ತುಲ ರಸ್ತೆ ಮೊದಲಿನ ನೀಲಿನಕ್ಷೆಯಂತೆ ಹೋಗುವುದಿದ್ದರೆ ನಮಗೆ ಯಾವುದೇ ಅಭ್ಯಂತರವಿಲ್ಲ. ಆದರೆ ಒಬ್ಬರಿಗೋಸ್ಕರ ರಿಂಗ್‌ ರಸ್ತೆಯ ನೀಲಿನಕ್ಷೆಯನ್ನೇ ಬದಲಾಯಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದೇವೆ.

ನಮಗೆ ಮೊದಲಿನ ಮಾದರಿಯಂತೆ ರಸ್ತೆ ನಿರ್ಮಾಣಗೊಳ್ಳಬೇಕೆಂದು ಸ್ಥಳೀಯರ ಬೇಡಿಕೆಯಿಟ್ಟರು.ಬಂದರು ಅಧಿಕಾರಿ ಅವರು ಬಂದರು ಸ್ಥಳವನ್ನು ಪ್ರತಿ ವರ್ಷ ಮರದ ದಿನ್ನೆ ಹಾಕಲು 11 ತಿಂಗಳಿಗೆ ಗುತ್ತಿಗೆ ನೀಡಿದ್ದು, ಈ ಪ್ರಕ್ರಿಯೆ ಹಲವು ವರ್ಷಗಳಿಂದ ಚಾಲ್ತಿಯಲ್ಲಿದೆ. ಸಾರ್ವಜನಿಕರಿಗೆ ಉಪಯೋಗ ಆಗುವುದಾದರೆ ಮಿಲ್‌ನವರಿಗೂ ತೊಂದರೆಯಾಗದ ರೀತಿ ಅಲ್ಲಿಯೇ ಪರ್ಯಾಯ ಸ್ಥಳ ಇದ್ದಲ್ಲಿ ಅವರಿಗೆ ತಿಳಿವಳಿಕೆ ಹೇಳಿ ಸಾರ್ವ ಜನಿಕರಿಗೆ ಅನುಕೂಲ ಮಾಡಿಕೊಡುವ ಭರವಸೆ ನೀಡಿದ್ದಾರೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.

ಪುರಸಭೆ ವ್ಯಾಪ್ತಿಯ ಈ ವರ್ತುಲ ರಸ್ತೆ ಸಂಪೂರ್ಣವಾದಲ್ಲಿ ನಾಗರಿಕರಿಗೆ ತುಂಬಾ ಅನುಕೂಲವಾಗುತ್ತದೆ. ಇದೇ ಮಾರ್ಗವಾಗಿ ಕೋಡಿಯ ಸೀವಾಕ್‌ ಕಡೆಗೆ ಹೋಗಲು ಅತೀ ಹತ್ತಿರದ ರಸ್ತೆ ಕೂಡ ಆಗಿದೆ. ಮದ್ದುಗುಡ್ಡೆಯಿಂದ ಚರ್ಚ್‌ ರಸ್ತೆ ಸೇತುವೆ ಸಂಪರ್ಕ ಆಗುವ ವರ್ತುಲ ರಸ್ತೆಯನ್ನು ಆದಷ್ಟು ಬೇಗ ಸಂಪೂರ್ಣಗೊಳಿಸಿ ಡಾಮರೀಕರಣ ಮಾಡಿ ಸೂಕ್ತ ಚರಂಡಿ ವ್ಯವಸ್ಥೆಯನ್ನು ಕಲ್ಪಿಸಿ ಮದ್ದುಗುಡ್ಡೆ ಸಾರ್ವಜನಿಕರ ಅಹವಾಲನ್ನು ಪರಿಗಣಿಸಿ ಸೂಕ್ತ ಪರಿಹಾರ ನೀಡಬೇಕೆಂದು ಶಾಸಕರಿಗೆ ನೀಡಿದ ಮನವಿಯಲ್ಲಿ ವಿವರಿಸಲಾಗಿದೆ.

ಟಾಪ್ ನ್ಯೂಸ್

ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Nagpur: ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

Karkala: ಅರುಣೋದಯ ವಿಶೇಷ ಶಾಲೆ ಮುಖ್ಯಸ್ಥೆ ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

Manipal ದಾಳಿ: 15 ಬುಟ್ಟಿ ಮರಳು ವಶಕ್ಕೆ

Manipal ದಾಳಿ: 15 ಬುಟ್ಟಿ ಮರಳು ವಶಕ್ಕೆ

Udupi: ಗೀತಾರ್ಥ ಚಿಂತನೆ-87: ಎದೆಗಾರಿಕೆಗೆ ಮಾದರಿ ಮಹಿಳೆ ಕುಂತಿ

Udupi: ಗೀತಾರ್ಥ ಚಿಂತನೆ-87: ಎದೆಗಾರಿಕೆಗೆ ಮಾದರಿ ಮಹಿಳೆ ಕುಂತಿ

sand

Kaup: ಕೈಪುಂಜಾಲು; ಅಕ್ರಮ ಮರಳು ಸಂಗ್ರಹ; ಪ್ರಕರಣ ದಾಖಲು

Karkala: ಮಾನಸಿಕ ಖಿನ್ನತೆಯಿಂದ ಮಹಿಳೆ ಆತ್ಮಹ*ತ್ಯೆ

Karkala: ಮಾನಸಿಕ ಖಿನ್ನತೆಯಿಂದ ಮಹಿಳೆ ಆತ್ಮಹ*ತ್ಯೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Nagpur: ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Dinesh-gundurao

Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.