‘ದೇಶ ಕಾಯುವ ಯೋಧರಿಗೆ ನಮ್ಮ ಹಾರೈಕೆಯೆ ಶ್ರೀರಕ್ಷೆ’: ಸದಾನಂದ ಪ್ರಭು
Team Udayavani, Feb 21, 2019, 12:08 PM IST
ಉಡುಪಿ: ಕಳೆದ ಗುರುವಾರ ಕಣಿವೆ ರಾಜ್ಯದ ಪುಲ್ವಾಮದಲ್ಲಿ ಆತ್ಮಾಹುತಿ ಉಗ್ರ ದಾಳಿಗೆ ಹುತಾತ್ಮರಾದ ಯೋಧರಿಗೆ ದೇಶಕ್ಕೆ ದೇಶವೇ ಕಂಬನಿ ಮಿಡಿಯುತ್ತಿದೆ. ಮತ್ತು ದೇಶ ಸೇವೆಯ ಕರ್ತವ್ಯದಲ್ಲಿರುವಾಗಲೇ ವೀರಮರಣವನ್ನಪ್ಪಿದ ನಮ್ಮ ಯೋಧರ ಆತ್ಮಕ್ಕೆ ಶಾಂತಿ ಸಿಗಲೆಂದು ದೇಶದ ನಾಗರಿಕರು ‘ಯೋಧ ನಮನ’ ಕಾರ್ಯಕ್ರಮಗಳನ್ನು ನಡೆಸಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿಯನ್ನು ಸಲ್ಲಿಸುತ್ತಿದ್ದಾರೆ.
ಇತ್ತ ಉಡುಪಿ ಜಿಲ್ಲೆಯ ಪೆರ್ಣಂಕಿಲ – ಕುದಿ ಗ್ರಾಮದ ಜನತಾನಗರದಲ್ಲಿ ನಾಗರಿಕರು ಬುಧವಾರದಂದು ಹುತಾತ್ಮ ಯೋಧರಿಗೆ ವಿಶಿಷ್ಟ ರೀತಿಯಲ್ಲಿ ಶ್ರದ್ಧಾಂಜಲಿಯನ್ನು ಸಲ್ಲಿಸಿದರು. ಪುಲ್ವಾಮ ಉಗ್ರ ದಾಳಿಯಲ್ಲಿ ಹುತಾತ್ಮರಾದ ಯೋಧರ ಬಾವಚಿತ್ರಗಳ ಎದುರಿನಲ್ಲಿ ಹಣತೆಗಳನ್ನು ಭಾರತದ ಭೂಪಟ ಮಾದರಿಯಲ್ಲಿ ಇರಿಸಿ ಮಧ್ಯದಲ್ಲಿ ಕಾಲುದೀಪವನ್ನು ಇಟ್ಟು ಆರಿ ಹೋದ ಮಹಾನ್ ಚೇತನಗಳಿಗೆ ಭಾವಪೂರ್ಣ ನಮನಗಳನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಉದ್ಯಮಿ ಸದಾನಂದ ಪ್ರಭು ಅವರು, ‘ನಾವಿಲ್ಲಿ ನೆಮ್ಮದಿಯ ಜೀವನವನ್ನು ಸಾಗಿಸುತ್ತಿರುವುದಕ್ಕೆ ಅಲ್ಲಿ ಗಡಿಯಲ್ಲಿ ನಮ್ಮ ವೀರಯೋಧರು ತಮ್ಮ ಭವಿಷ್ಯವನ್ನು ಪಣಕ್ಕಿಟ್ಟು ಪ್ರಾಣವನ್ನು ಒತ್ತೆಯಿಟ್ಟು ದೇಶ ಕಾಯುತ್ತಿರುವುದೇ ಕಾರಣ. ಅಂತಹ ಯೋಧರು ತಮ್ಮ ಕುಟುಂಬ ಪರಿವಾರವನ್ನು ತೊರೆದು ಅಲ್ಲೆಲ್ಲೋ ದೂರದ ಊರಿನಲ್ಲಿ ಪ್ರಾಣತ್ಯಾಗ ಮಾಡುತ್ತಾರೆಂದಾದರೆ ಅವರನ್ನು ಒಂದು ಕ್ಷಣ ನೆನಪಿಸಿಕೊಳ್ಳುವುದು ಈ ದೇಶದ ನಾಗರಿಕರಾಗಿ ನಮ್ಮ ಕರ್ತವ್ಯ’ ಎಂದು ಅವರು ಹೇಳಿದರು.
ಅರುಣ್ ಕುಲಾಲ್ ಅವರು ಒಟ್ಟು ಕಾರ್ಯಕ್ರಮವನ್ನು ವಿಶಿಷ್ಟ ರೀತಿಯಲ್ಲಿ ಸಂಯೋಜಿಸಿದ್ದರು. ಗೃಹಿಣಿಯರು, ಮಕ್ಕಳು, ವೃದ್ಧರು, ಯುವಕರು ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ನಮ್ಮ ವೀರಯೋಧರಿಗೆ ನಮನವನ್ನು ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.