August ಅಂತ್ಯದವರೆಗೂ ಕರಾವಳಿಯ ಪ್ರವಾಸಿ ತಾಣ ಭೇಟಿಗೆ ನಿರ್ಬಂಧ
Team Udayavani, Aug 16, 2023, 7:30 AM IST
ಉಡುಪಿ: ಜಿಲ್ಲೆಯಲ್ಲಿ ಪ್ರವಾಸೋದ್ಯಮ ಸ್ಥಳಗಳಿಗೆ ಪ್ರವಾಸಿಗರು ಹಾಗೂ ಸಾರ್ವಜನಿಕರ ಭೇಟಿಗೆ ಜಿಲ್ಲಾಡಳಿತ ವಿಧಿಸಿರುವ ನಿರ್ಬಂಧವನ್ನು ಆಗಸ್ಟ್ ಅಂತ್ಯದವರೆಗೂ ವಿಸ್ತರಿಸಿದೆ.
ಕೊಲ್ಲೂರು ಸಮೀಪದ ಅರಶಿನ ಗುಂಡಿ ಜಲಪಾತದಲ್ಲಿ ನಡೆದ ದುರ್ಘಟನೆಯ ಅನಂತರದಲ್ಲಿ ಬೀಚ್ ಸಹಿತ ಜಲಪಾತ ಹಾಗೂ ಮಳೆಗಾಲದಲ್ಲಿ ಅಪಾಯಕಾರಿಯಾಗಿ ಪರಿಣಮಿಸುವ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಮತ್ತು ಸಾರ್ವಜನಿಕರ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿತ್ತು. ಇದೀಗ ಜಿಲ್ಲಾದ್ಯಂತ ಮಳೆ ಕಡಿಮೆಯಾಗಿದ್ದರೂ ನಿರ್ಬಂಧವನ್ನು ವಾಪಸ್ ಪಡೆದಿಲ್ಲ. ಈ ತಿಂಗಳ ಅಂತ್ಯದವರೆಗೂ ನಿರ್ಬಂಧ ಇರಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಮಳೆಗಾಲದಲ್ಲಿ ಯಾವಾಗ ಬೇಕಾದರೂ ಮಳೆಯ ಪ್ರಮಾಣ ಹೆಚ್ಚಾಗಬಹುದು. ನಿರ್ಬಂಧ ವಾಪಸ್ ಪಡೆದ ಅನಂತರದಲ್ಲಿ ಪುನಃ ಪರಿಸ್ಥಿತಿ ನಿಯಂತ್ರಿಸುವುದು ತತ್‌ಕ್ಷಣದಲ್ಲಿ ಕಷ್ಟವೂ ಆಗಬಹುದು. ಹೀಗಾಗಿ ಮಾಸಾಂತ್ಯದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ ನಿರ್ಬಂಧ ತೆರವುಗೊಳಿಸುವ ಬಗ್ಗೆ ತೀರ್ಮಾನಿಸಲಿದ್ದೇವೆ ಎಂದು ಜಿಲ್ಲಾಧಿಕಾರಿ ಡಾ| ವಿದ್ಯಾ ಕುಮಾರಿ “ಉದಯವಾಣಿ’ಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.