ಶಿಕ್ಷಣ ಪ್ರೇಮಿ, ನಿವೃತ್ತ ಮುಖ್ಯ ಶಿಕ್ಷಕ ಶಿರ್ವ ನಡಿಬೆಟ್ಟು ಸೀತಾರಾಮ ಹೆಗ್ಡೆ ನಿಧನ
Team Udayavani, Jun 18, 2022, 7:08 PM IST
ಶಿರ್ವ : ಶಿಕ್ಷಣ ಪ್ರೇಮಿ, ನಿವೃತ್ತ ಮುಖ್ಯ ಶಿಕ್ಷಕ ಶಿರ್ವ ನಡಿಬೆಟ್ಟು ಸೀತಾರಾಮ ಹೆಗ್ಡೆ (84) ಅವರು ಜೂ. 18ರಂದು ನಡಿಬೆಟ್ಟುವಿನ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ,ಓರ್ವ ಪುತ್ರ ಮತ್ತು 5 ಮಂದಿ ಪುತ್ರಿಯರನ್ನು ಅಗಲಿದ್ದಾರೆ.
ಅವರು ಶಿರ್ವ ವಿದ್ಯಾವರ್ಧಕ ಸಂಘದ ಆಡಳಿತಕ್ಕೊಳಪಟ್ಟ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಸುಮಾರು 36 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿ ಶಿರ್ವ ಹಿಂದೂ.ಹಿ.ಪ್ರಾ.ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ನಿವೃತ್ತರಾಗಿದ್ದರು.
ಶಿರ್ವ ವಿದ್ಯಾವರ್ಧಕ ಸಂಘದ ಆಡಳಿತಕ್ಕೊಳಪಟ್ಟ ಶಿಕ್ಷಣ ಸಂಸ್ಥೆಗಳ ಸ್ಥಾಪನೆ ಮತ್ತು ಏಳಿಗೆಗಾಗಿ ಶ್ರಮಿಸಿದ್ದರು. ಶಿರ್ವ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ನ್ಯಾರ್ಮ ಶ್ರೀ ಧರ್ಮ ಜಾರಂದಾಯ ದೈವಸ್ಥಾನ,ನಡಿಬೆಟ್ಟು ಶ್ರೀಬಬ್ಬುಸ್ವಾಮಿ ದೈವಸ್ಥಾನಗಳ ಜೀರ್ಣೋದ್ಧಾರ ಕಾರ್ಯಗಳಲ್ಲಿ ಶ್ರಮಿಸಿದ್ದರು. ಶಿಕ್ಷಣ ಪ್ರೇಮಿಯಾಗಿದ್ದ ಅವರು ಬಡ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಿದ್ದರು.
ಇದನ್ನೂ ಓದಿ : ಕೋಮು ರಾಜಕಾರಣ ವಿಭಜನೆಗೆ ಕಾರಣವಾಯಿತು : ಕೇರಳ ರಾಜ್ಯಪಾಲ ಎ.ಎಂ. ಖಾನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.