MGM ಕಾಲೇಜಿನ ವಿಶ್ರಾಂತ ಪ್ರಾಚಾರ್ಯ ಪ್ರೊಫೆಸರ್ ರಾಮದಾಸ್ ಭಟ್ ನಿಧನ
Team Udayavani, Aug 27, 2020, 8:14 PM IST
ಉಡುಪಿ: ಇಲ್ಲಿನ MGM ಕಾಲೇಜಿನ ನಿವೃತ್ತ ಪ್ರಾಚಾರ್ಯ ಪ್ರೊಫೆಸರ್ ಕೆ. ರಾಮದಾಸ್ ಭಟ್ ಅವರು ಇಂದು ನಿಧನ ಹೊಂದಿದ್ದಾರೆ.
ಅವರಿಗೆ 90 ವರ್ಷ ಪ್ರಾಯವಾಗಿತ್ತು. ಭಟ್ ಅವರು ಬೆಳಗಾವಿಯಲ್ಲಿರುವ ತಮ್ಮ ಪುತ್ರನ ಮನೆಯಲ್ಲಿ ನಿಧನ ಹೊಂದಿದ್ದಾರೆ. ಅವರು ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.
ರಾಮದಾಸ್ ಭಟ್ ಅವರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ತಮ್ಮ ಅಪಾರ ಶಿಷ್ಯವರ್ಗವನ್ನು ಅಗಲಿದ್ದಾರೆ.
MGM ಕಾಲೇಜಿನಲ್ಲಿ ಭೌತಶಾಸ್ತ್ರ ವಿಭಾಗದಲ್ಲಿ ಬೋಧನೆ ಮಾಡುತ್ತಿದ್ದ ರಾಮದಾಸ್ ಭಟ್ ಅವರು ವಿಭಾಗ ಮುಖ್ಯಸ್ಥರಾಗಿಯೂ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದರು.
ಕಾಲೇಜು ಪ್ರಾರಂಭಗೊಂಡ ದಿನಗಳಲ್ಲೇ ಉಪನ್ಯಾಸಕರಾಗಿ ಸೇವೆಗೆ ಸೇರ್ಪಡೆಗೊಂಡಿದ್ದ ಪ್ರೊಫೆಸರ್ ಭಟ್ ಅವರು ದಿವಂಗತ ಕು.ಶಿ.ಹರಿದಾಸ ಭಟ್ಟರ ನಿಕಟವರ್ತಿಯಾಗಿ ಕಾಲೇಜಿನ ಸರ್ವತೋಮುಖ ಬೆಳವಣಿಗೆಯಲ್ಲಿ ಮಹತ್ತರ ಪಾತ್ರವನ್ನು ವಹಿಸಿದ್ದರು.
ಕಾಲೇಜಿನ NCC ನೌಕಾದಳದ ಮುಖ್ಯಸ್ಥರಾಗಿಯೂ ಇವರು ಕಾರ್ಯನಿರ್ವಹಿಸಿದ್ದರು. ತಮ್ಮ ಸೇವಾ ನಿವೃತ್ತಿಯ ಬಳಿಕ ಇವರು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಸಹನಿರ್ದೇಶಕರಾಗಿಯೂ ಹಲವಾರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.
ರಾಮದಾಸ್ ಅವರು ಮೂಲತಃ ಕರಂಬಳ್ಳಿಯವರಾಗಿದ್ದರು. ಅವರ ನಿಧನಕ್ಕೆ ನಾಗಾಲ್ಯಾಂಡ್‌ನ ಮಾಜಿ ರಾಜ್ಯಪಾಲ ಪಿ.ಬಿ. ಆಚಾರ್ಯ, ಶಾಸಕ ಕೆ. ರಘುಪತಿ ಭಟ್, ಎಂಜಿಎಂ ಕಾಲೇಜಿನ ಪ್ರಾಚಾರ್ಯ ಡಾ| ಎಂ.ಜಿ. ವಿಜಯ್, ಪ್ರೊ| ಹೆರಂಜೆ ಕೃಷ್ಣ ಭಟ್, ಪ್ರೊ| ಎಂ.ಎಲ್. ಸಾಮಗ, ಪ್ರೊ| ಎನ್. ಟಿ. ಭಟ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.