Road Mishap; ರಿಕ್ಷಾ, ಬಸ್ಗೆ ಢಿಕ್ಕಿ ಹೊಡೆದ ಕಾರು; ವೃದ್ಧೆ ಸಾವು
Team Udayavani, Jan 28, 2024, 11:28 PM IST
ಹೆಬ್ರಿ: ನಾಡ್ಪಾಲು ಗ್ರಾಮದ ಜಕ್ಕನಮಕ್ಕಿಯಲ್ಲಿ ಸರಕಾರಿ ಬಸ್ ಹಾಗೂ ರಿಕ್ಷಾವೊಂದಕ್ಕೆ ಇನ್ನೋವಾ ಕಾರು ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ವೃದ್ಧೆ ಮೃತಪಟ್ಟ ಘಟನೆ ರವಿವಾರ ನಡೆದಿದೆ.
ಶಾಂತಮ್ಮ (77) ಮೃತಪಟ್ಟವರು. ಕಾರಿನ ಚಾಲಕ ಶ್ರೀಕಾಂತ್ ಅವರು ಹೆಬ್ರಿ ಕಡೆಯಿಂದ ಆಗುಂಬೆ ಕಡೆಗೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿ ತನ್ನ ಮುಂದಿನಿಂದ ಅಂದರೆ ಆಗುಂಬೆ ಕಡೆಗೆ ಹೋಗುತಿದ್ದ ಆಟೋ ರಿಕ್ಷಾವನ್ನು ಹಿಂದಿಕ್ಕುವಾಗ ರಿಕ್ಷಾದ ಬಲಭಾಗಕ್ಕೆ ಢಿಕ್ಕಿ ಹೊಡೆದು ಎದುರಿನಿಂದ ಬರುತ್ತಿದ್ದ ಸರಕಾರಿ ಬಸ್ಸಿಗೆ ಢಿಕ್ಕಿ ಹೊಡೆದಿತ್ತು. ಪರಿಣಾಮ ಶಾಂತಮ್ಮ ತೀವ್ರ ಗಾಯಗೊಂಡು ಹೆಬ್ರಿ ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಡವಾಗಿ ಬಂದ ಆ್ಯಂಬುಲೆನ್ಸ್
ಅಪಘಾತ ನಡೆದ ಕೂಡಲೇ ಆ್ಯಂಬುಲೆನ್ಸ್ಗೆ ಕರೆ ಮಾಡಿದರೆ ತಡವಾಗಿ ಬಂದಿದೆ.ಕೂಡಲೇ ತನ್ನ ಕಾರಿನಲ್ಲಿ ವೃದ್ಧೆಯನ್ನು ಕರೆದುಕೊಂಡು ಹೋಗುವಾಗ ದಾರಿ ಮಧ್ಯೆ ಆ್ಯಂಬುಲೆನ್ಸ್ಗೆ ಹಾಕಿ ಆಸ್ಪತ್ರೆ ಸೇರಿಸಲಾಗಿದೆ. ಕೂಡಲೇ ಆ್ಯಂಬುಲೆನ್ಸ್ ಸೇವೆ ದೊರೆತು ತುರ್ತು ಚಿಕಿತ್ಸೆ ದೊರಕಿದ್ದರೆ ವೃದ್ಧೆ ಬದುಕಬಹುದಿತ್ತು ಎಂದು ಸ್ಥಳೀಯರಾದ ಪ್ರಮೋದ್ ಶೆಟ್ಟಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.