Road Mishap: ಇಳಿಯುವ ವೇಳೆ ಚಲಿಸಿದ ಬಸ್… ಬಸ್ ನಿಂದ ಬಿದ್ದು ಮಹಿಳೆಗೆ ಗಾಯ
Team Udayavani, Oct 12, 2023, 7:42 PM IST
ಕಾಪು : ರಾಷ್ಟ್ರೀಯ ಹೆದ್ದಾರಿ 66ರ ಉಳಿಯಾರಗೋಳಿಯಲ್ಲಿ ಬಸ್ ಇಳಿಯುತ್ತಿದ್ದ ಮಹಿಳೆಯೊಬ್ಬರು ಆಯತಪ್ಪಿ ಕೆಳಗೆ ಬಿದ್ದು ಗಾಯಗೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.
ಉಳಿಯಾರಗೋಳಿ ಕೋತಲಕಟ್ಟೆ ನಿವಾಸಿ ಸುಲೋಚನಾ ಶೆಟ್ಟಿ (61) ಗಾಯಾಳು ಮಹಿಳೆ.
ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರು – ಉಡುಪಿ ರಸ್ತೆಯಲ್ಲಿ ಉಡುಪಿ ಕಡೆಗೆ ಹೋಗುತ್ತಿದ್ದ ಸರ್ವೀಸ್ ಬಸ್ ಉಳಿಯಾರಗೋಳಿಯಲ್ಲಿ ನಿಂತಿದ್ದು ಈ ವೇಳೆ ಪ್ರಯಾಣಿಕರು ಬಸ್ಸಿನಿಂದ ಕೆಳಗೆ ಇಳಿಯುತ್ತಿರುವಾಗಲೇ ಬಸ್ ಚಾಲಕ ಬಸ್ಸನ್ನು ಮುಂದಕ್ಕೆ ಚಲಾಯಿಸಿದ್ದನು. ಈ ಪರಿಣಾಮ ಬಸ್ಸಿನಿಂದ ಕೆಳಗೆ ಇಳಿಯುತ್ತಿದ್ದ ಸುಲೋಚನಾ ಶೆಟ್ಟಿ ಅವರು ರಸ್ತೆಗೆ ಬಿದ್ದು, ಅವರ ಮುಖಕ್ಕೆ ಗಂಭೀರ ಗಾಯಗಳುಂಟಾಗಿವೆ.
ಗಾಯಾಳು ಮಹಿಳೆಯನ್ನು ಬಸ್ ಚಾಲಕ ಮತ್ತು ಸಾರ್ವಜನಿಕರು ಉಡುಪಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದು, ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Tragedy: ಮೊಬೈಲ್ ನಲ್ಲಿ ಮಾತನಾಡುವುದನ್ನು ಪ್ರಶ್ನಿಸಿದ್ದಕ್ಕೆ ತಾಯಿ ಮೇಲೆ ಮಾರಣಾಂತಿಕ ಹಲ್ಲೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ
Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Malpe: ಮೀಟಿಂಗ್ ರೂಮ್‌ಗೆ ಬೆಂಕಿ, ಭಸ್ಮವಾದ ಕಚೇರಿ ಕಡತಗಳು
Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ
MUST WATCH
ಹೊಸ ಸೇರ್ಪಡೆ
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.