Road Mishap ಕಾಪು: ನಿಂತಿದ್ದ ಲಾರಿಗೆ ಕಾರು ಢಿಕ್ಕಿ ; ಚಾಲಕ ಸಾವು
Team Udayavani, Feb 28, 2024, 9:50 PM IST
ಕಾಪು: ನಿಂತಿದ್ದ ಲಾರಿಗೆ ಕಾರು ಹಿಂದಿನಿಂದ ಢಿಕ್ಕಿ ಹೊಡೆದು ಕಾರು ಚಾಲಕ ಮೃತಪಟ್ಟ ಘಟನೆ ಪಾಂಗಾಳದಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.
ಕಾಪು ಮೆಸ್ಕಾಂನಲ್ಲಿ ಗುತ್ತಿಗೆ ಆಧಾರಿತವಾಗಿ ಉಪಯೋಗಿಸುತ್ತಿದ್ದ ಕಾರು ಚಾಲಕ, ಭಾರತ್ ನಗರ ನಿವಾಸಿ ನಾಗೇಶ್ ಕಾಮತ್ (70) ಮೃತರು.
ಕಾಪುವಿನ ಮೆಸ್ಕಾಂಗೆ ಗುತ್ತಿಗೆ ಆಧಾರಿತ ಕಾರನ್ನು ಚಲಾಯಿಸುತ್ತಿದ್ದ ಅವರು ಎಇಇ ಅವರನ್ನು ಮನೆಗೆ ಬಿಟ್ಟು ಕಾಪು ಕಡೆಗೆ ಆಗಮಿಸುತ್ತಿದ್ದಾಗ ಪಾಂಗಾಳದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಹಾಳಾಗಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅಪಘಾತದಿಂದಾಗಿ ಕೆಲವು ಹೊತ್ತು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಕಾಪು ಎಸ್‌ಐ ಅಬ್ದುಲ್ ಖಾದರ್, ಕ್ರೈಂ ಎಸ್‌ಐ ಪುರುಷೋತ್ತಮ್ ಮತ್ತು ಪೊಲೀಸರು ಹಾಗೂ ಹೆದ್ದಾರಿ ಗಸ್ತು ಪಡೆ ಸ್ಥಳಕ್ಕೆ ಭೇಟಿ ನೀಡಿದ್ದು ಕಾರು ಹಾಗೂ ಲಾರಿಯನ್ನು ತೆರವುಗೊಳಿಸಿದ್ದಾರೆ.
ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನೆರವಿಗೆ ಧಾವಿಸಿದ ಸ್ಥಳೀಯರು
ಕಾರಿನೊಳಗೆ ಸಿಲುಕಿದ್ದ ಚಾಲಕನನ್ನು ಹೊರತೆಗೆಯಲು ಸ್ಥಳೀಯರು ಹರಸಾಹಸ ಪಟ್ಟರು. ಕಬ್ಬಿಣದ ರಾಡ್ ಬಳಸಿ ಚಾಲಕನನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ತನ್ನದೇ ಕಾರನ್ನು ಬಾಡಿಗೆಗೆ ನೀಡಿದ್ದರು ಮೃತ ನಾಗೇಶ್ ಕಾಮತ್ ಅವರು ಉಳಿಯಾರಗೋಳಿ ಭಾರತ್ ನಗರ ನಿವಾಸಿಯಾಗಿದ್ದು ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ತನ್ನದೇ ಸ್ವಂತ ವಾಹನವನ್ನು ಮೆಸ್ಕಾಂಗೆ ಗುತ್ತಿಗೆ ಆಧಾರದಲ್ಲಿ ಬಾಡಿಗೆಗೆ ನೀಡಿದ್ದ ಅವರು ಸ್ವತಃ ತಾನೇ ಹಲವು ವರ್ಷಗಳಿಂದ ಮೆಸ್ಕಾಂ ಅಧಿಕಾರಿಗಳಿಗೆ ಚಾಲಕರಾಗಿ ಸೇವೆ ನೀಡುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ
Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ
AjekarCase: ತನಿಖೆ ದಿಕ್ಕು ತಪ್ಪುತ್ತಿದೆ: ದಿಲೀಪ್ ತಂದೆ ವಿರುದ್ದ ಬಾಲಕೃಷ್ಣ ಮನೆಯವರ ಆರೋಪ
MUST WATCH
ಹೊಸ ಸೇರ್ಪಡೆ
By Election: ಚನ್ನಪಟ್ಟಣದಲ್ಲಿ ಧರ್ಮ-ಅಧರ್ಮದ ನಡುವೆ ಚುನಾವಣೆ: ಎಚ್.ಡಿ.ಕುಮಾರಸ್ವಾಮಿ
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.