Road mishap: ಮಾಳ ಕಡಾರಿ ಬಳಿ ಮಿನಿ ಟೆಂಪೋ ಪಲ್ಟಿಕಾರ್ಮಿಕ ಸಾವು, ಇತರರಿಗೆ ಗಾಯ
Team Udayavani, Mar 21, 2024, 9:05 PM IST
ಕಾರ್ಕಳ: ತೆಂಗಿನಕಾಯಿ ಸಾಗಿಸುತ್ತಿದ್ದ ಮಿನಿ ಟೆಂಪೋ ಪಲ್ಟಿಯಾಗಿ ಕಾರ್ಮಿಕ ಮಾಳದ ಸುನಿಲ್ (32) ಎಂಬವರು ಮೃತಪಟ್ಟು, ಇತರ ನಾಲ್ವರು ಗಾಯಗೊಂಡ ಘಟನೆ ಮಾಳದ ಕಡಾರಿ ಕ್ರಾಸ್ ಬಳಿ ಮಾ. 21ರಂದು ನಡೆದಿದೆ.
ಕಾರ್ಕಳ- ಬಜಗೋಳಿ -ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಹೆಜಮಾಡಿಯಿಂದ ತೆಂಗಿನಕಾಯಿ ಲೋಡ್ ಮಾಡಿ ಮಾಳದತ್ತ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.
ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿಯಾಗಿದ್ದು, ಲಾರಿಯಲ್ಲಿ ಚಾಲಕ ಸೇರಿ 6 ಮಂದಿ ಕಾರ್ಮಿಕರಿದ್ದರು. ಸ್ಥಳೀಯರು ಗಾಯಾಳುಗಳನ್ನು ಕಾರ್ಕಳದ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಿದ್ದು. ಗಂಭೀರವಾಗಿ ಗಾಯಗೊಂಡಿದ್ದ ಸುನಿಲ್ ಚಿಕಿತ್ಸೆ ಫಲಿಸದೆ ಮೃತಪಟ್ಟರು. ಉಳಿದ ಐದು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.