ಹೊಂಡ – ಗುಂಡಿ ಮುಚ್ಚುವ ತೇಪೆ ಕಾರ್ಯ ಆರಂಭ
Team Udayavani, Nov 28, 2018, 1:40 AM IST
ಕಂಡ್ಲೂರು: ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳನ್ನು ಬೆಸೆಯುವ ಪ್ರಮುಖ ರಾಜ್ಯ ಹೆದ್ದಾರಿಗಳಲ್ಲಿ ಒಂದಾಗಿರುವ ಕುಂದಾಪುರ – ತೀರ್ಥಹಳ್ಳಿ ರಾಜ್ಯ ಹೆದ್ದಾರಿಯ ಕಂಡ್ಲೂರಿನಿಂದ ಅಂಪಾರಿಗೆ ಹೋಗುವ ರಸ್ತೆಯ ಹೊಂಡ – ಗುಂಡಿಗಳನ್ನು ಮುಚ್ಚುವ ಕಾರ್ಯ ಆರಂಭವಾಗಿದೆ. ರಾಜ್ಯ ಹೆದ್ದಾರಿಯ ಕಂಡ್ಲೂರಿನಿಂದ ಆರಂಭಗೊಂಡು ದೂಪದಕಟ್ಟೆ, ಮುಳ್ಳುಗುಡ್ಡೆ, ನೆಲ್ಲಿಕಟ್ಟೆ, ಅಂಪಾರುವರೆಗಿನ ಸುಮಾರು 5 ಕಿ.ಮೀ. ದೂರದ ರಸ್ತೆಯುದ್ದಕ್ಕೂ ಅನೇಕ ಕಡೆಗಳಲ್ಲಿ ದೊಡ್ಡ – ದೊಡ್ಡ ಹೊಂಡಗಳು ಕಾಣಿಸಿಕೊಂಡಿದ್ದು, ಅದಕ್ಕೀಗ ತೇಪೆ ಕಾರ್ಯ ನಡೆಯುತ್ತಿದೆ. ಈಗ ಹೊಂಡ – ಗುಂಡಿಗಳನ್ನು ಮುಚ್ಚಲಾಗುತ್ತಿದ್ದು, ಮುಂದೆ ಅದರ ಮೇಲೆ ಮರು ಡಾಮರೀಕರಣ ಕಾರ್ಯ ನಡೆಯಲಿದೆ.
ಕುಂದಾಪುರದಿಂದ ಸಿದ್ದಾಪುರ, ಹೊಸಂಗಡಿ ಮಾರ್ಗವಾಗಿ ಬಾಳೇಬರೆ ಘಾಟಿ ಮೂಲಕವಾಗಿ ತೀರ್ಥಹಳ್ಳಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ – 52 ಇದಾಗಿದ್ದು, ನಿತ್ಯ ಸಾವಿರಕ್ಕೂ ಹೆಚ್ಚು ವಾಹನಗಳು ಈ ಮಾರ್ಗವಾಗಿ ಸಂಚರಿಸುತ್ತವೆ. ದಿನಂಪ್ರತಿ ನೂರಾರು ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್‌ಗಳು, ಶಾಲಾ ವಾಹನಗಳು ಇದೇ ರಸ್ತೆಯನ್ನು ಅವಲಂಬಿಸಿವೆ.
ಕಾಟಾಚಾರದ ತೇಪೆ
ಮೂಡುಬಗೆ, ಅಂಪಾರುವಿನಿಂದ ಕಂಡ್ಲೂರುವರೆಗಿನ ರಸ್ತೆಯುದ್ದಕ್ಕೂ ಅನೇಕ ಕಡೆಗಳಲ್ಲಿ ಬೃಹತ್ ಹೊಂಡ – ಗುಂಡಿಗಳಿದ್ದು, ಅವುಗಳಿಗೆ ಕಾಟಾಚಾರದ ತೇಪೆ ಕಾರ್ಯ ನಡೆಯುತ್ತಿದೆ ಎನ್ನುವ ಟೀಕೆ ಸ್ಥಳೀಯರಿಂದ ವ್ಯಕ್ತವಾಗುತ್ತಿದೆ. ಆದರೆ ಈ ಸಂಬಂಧ ಪ್ರತಿಕ್ರಿಯಿಸಿದ ಲೋಕೋಪಯೋಗಿ ಅಧಿಕಾರಿಗಳು, ಈ ರಸ್ತೆಯನ್ನು ಮುಂದಿನ 10 ವರ್ಷಗಳ ಕಾಲ ಅಭಿವೃದ್ಧಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ವಹಿಸಲಾಗಿದೆ. ಈಗ ತೇಪೆ ಕಾರ್ಯ ಕೂಡ ಅವರ ಅನುದಾನದಿಂದಲೇ ನಡೆಯುತ್ತಿರುವುದು. ಈಗ ಹೊಂಡಗಳನ್ನು ಮುಚ್ಚಿದ್ದು, ಕೂಡಲೇ ಅದರ ಮೇಲೆ ಮರುಡಾಮರೀಕರಣ ನಡೆಯಲಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.