ಪ್ರತಿ ತಿಂಗಳು ರಸ್ತೆ ಸುರಕ್ಷತಾ ಸಭೆ: ಉಡುಪಿ ಜಿಲ್ಲಾಧಿಕಾರಿ ಸೂಚನೆ
Team Udayavani, Jun 27, 2019, 5:32 AM IST
ಉಡುಪಿ: ಜಿಲ್ಲೆಯಲ್ಲಿ ರಸ್ತೆ ಸುರಕ್ಷತಾ ಕ್ರಮಗಳು ಸಮರ್ಪಕವಾಗಿ ನಡೆಯಬೇಕು. ಇದಕ್ಕಾಗಿ ಪ್ರತಿ ತಿಂಗಳು ರಸ್ತೆ ಸುರಕ್ಷತಾ ಸಭೆ ನಡೆಸಿ ಪರಿಶೀಲನೆ ನಡೆಸಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
6 ತಿಂಗಳಲ್ಲಿ 130 ಅಪಘಾತ
ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ 130 ಅಪಘಾತಗಳು ಸಂಭವಿಸಿವೆ. ಅಪಘಾತಗಳ ಪ್ರಮಾಣವನ್ನು ತಗ್ಗಿಸಲು ರಸ್ತೆ ಸುರಕ್ಷತಾ ಕ್ರಮ, ಜಾಗೃತಿ ಕಾರ್ಯಕ್ರಮ ನಡೆಸಿ ಪ್ರತೀ ತಿಂಗಳು ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಶಾಲೆಗಳಲ್ಲಿ ಜಾಗೃತಿ
ಜಿಲ್ಲೆಯ ಶಾಲೆಗಳ ಆವರಣಗೋಡೆಗಳಲ್ಲಿ ಚಿತ್ರಕಲಾ ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಂದ ರಸ್ತೆ ಸುರಕ್ಷತಾ ಜಾಗೃತಿ ಮೂಡಿಸುವ ಚಿತ್ರಗಳನ್ನು ಬಿಡಿಸುವ ಸ್ಪರ್ಧೆಯನ್ನು ಇನ್ನೊಂದು ತಿಂಗಳಲ್ಲಿ ಏರ್ಪಡಿಸಬೇಕು.
ಶಾಲಾಡಳಿತ ಬಳಿ ಮಾಹಿತಿ ಇರಲಿ
ಶಾಲಾ ವಾಹನ ಚಾಲಕರು ಮತ್ತು ಮಾಲಕರಲ್ಲಿ ಜಾಗೃತಿ ಮೂಡಿಸಬೇಕು. ನಿಗದಿತಗಿಂತ ಅಧಿಕ ಮಕ್ಕಳನ್ನು ಕರೆದೊಯ್ಯುವ ಶಾಲಾ ವಾಹನಗಳ ನಂಬರ್, ಚಾಲಕರು, ಮಾಲಕರ ಬಗ್ಗೆ ಆಯಾ ಶಾಲೆಯ ಮುಖ್ಯೋಪಾಧ್ಯಾಯರು ಇಲಾಖೆಗೆ ಮಾಹಿತಿ ನೀಡಬೇಕು ಎಂದವರು ಹೇಳಿದರು.
ಮೇಲ್ವಿಚಾರಕರನ್ನು ನೇಮಿಸಿ
ವಿದ್ಯಾರ್ಥಿಗಳು ಪರವಾನಿಗೆ ಇಲ್ಲದೇ ವಾಹನ ಚಲಾಯಿಸುತ್ತಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವ ಸಲುವಾಗಿ ಜಿಲ್ಲೆಯಲ್ಲಿರುವ 104 ಪಿಯು ಕಾಲೇಜುಗಳನ್ನು ಮೂರು ಗುಂಪುಗಳನ್ನಾಗಿ ಮಾಡಿ ಓರ್ವ ಮೇಲ್ವಿಚಾರಕನನ್ನು ನೇಮಿಸಬೇಕು. ಎಂದು ಹೇಳಿದರು. ಜಿಲ್ಲಾ ಎಸ್‌ಪಿ ನಿಶಾ ಜೇಮ್ಸ್ ಅಧಿಕಾರಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.