ರಾಡಿಯೆದ್ದ ಉಪ್ಪಿನಕುದ್ರು – ಬೇಡರಕೊಟ್ಟಿಗೆ ರಸ್ತೆ
Team Udayavani, Jul 22, 2019, 5:52 AM IST
ಕುಂದಾಪುರ: ತಲ್ಲೂರು ಗ್ರಾ.ಪಂ. ವ್ಯಾಪ್ತಿಯ ಉಪ್ಪಿನಕುದ್ರು ಶಾಲೆ ಬಳಿಯಿಂದ ಬೇಡರಕೊಟ್ಟಿಗೆ ಕಡೆಗೆ ಸಂಚರಿಸುವ ರಸ್ತೆಗೆ ಈ ಬಾರಿಯೂ ಡಾಮರೀಕರಣವಾಗದೆ ರಾಡಿಯೆದ್ದು ಹೋಗಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.
ಬೇಡರಕೊಟ್ಟಿಗೆಯ ಬೊಬ್ಬರ್ಯ ದೈವಸ್ಥಾನದವರೆಗಿನ ಸುಮಾರು 2 ಕಿ.ಮೀ. ರಸ್ತೆಗೆ ಕಾಂಕ್ರಿಟೀಕರಣಕ್ಕೆ ರಾಜ್ಯ ಲೋಕೋಪಯೋಗಿ ಇಲಾಖೆಯಿಂದ ಅನುದಾನ ಮಂಜೂರಾಗಿತ್ತು. ಆದರೆ ಮಳೆಗಾಲಕ್ಕೂ ಮುನ್ನ ಕಾಮಗಾರಿ ಪೂರ್ಣಗೊಳ್ಳದೇ ಇರುವುದರಿಂದ ಸಮಸ್ಯೆಯಾಗಿದೆ.ಈ ರಸ್ತೆಯ ಎರಡೂ ಬದಿಯ ತಡೆಗೋಡೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಸ್ವಲ್ಪ ದೂರದವರೆಗೆ ಜಲ್ಲಿ ಕಲ್ಲು ಹಾಕಲಾಗಿದೆ.
ಮತ್ತೆ ಉಳಿದ ರಸ್ತೆಯಿಡೀ ಕೆಸರುಮಯವಾಗಿದ್ದು, ವಾಹನ ಸವಾರರು ನಿತ್ಯ ಪರದಾಟ ನಡೆಸುತ್ತಿದ್ದಾರೆ.ಕನಿಷ್ಠ ಗ್ರಾಮ ಪಂಚಾಯತ್ ವತಿಯಿಂದಲಾದರೂ ಈ ರಸ್ತೆಗೆ ಜಲ್ಲಿ ಮಿಶ್ರಿತ ಮರಳನ್ನು ಹಾಕಿ, ಕೆಸರುಮಯ ರಸ್ತೆಯಿಂದ ಮುಕ್ತಿ ನೀಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Nagpur: ರಾಹುಲ್ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ
Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ ಇಚ್ಛಾಶಕ್ತಿ ಪ್ರದರ್ಶಿಸಲಿ
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್‌ಡಿಕೆ ಬಿಡುಗಡೆ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.