ಬೆಳ್ವೆ : ಹೊಂಡಗಳಿಂದ ತುಂಬಿದ ರಾಜ್ಯ ಹೆದ್ದಾರಿ
ಕೊಲ್ಲೂರು-ಶೃಂಗೇರಿ ಸಂಪರ್ಕಿಸುವ ರಸ್ತೆ
Team Udayavani, Sep 28, 2020, 12:15 PM IST
ಗೋಳಿಯಂಗಡಿ, ಸೆ. 27 : ಬೈಂದೂರು – ವಿರಾಜಪೇಟೆ ರಾಜ್ಯ ಹೆದ್ದಾರಿ-90ರ ಬೆಳ್ವೆ ಪೇಟೆಯಲ್ಲಿ ರಸ್ತೆಯಲ್ಲಿ ಹೊಂಡ ಆಗಿರುವುದೋ ಅಥವಾ ಹೊಂಡದಲ್ಲಿಯೇ ರಸ್ತೆ ನಿರ್ಮಿಸಲಾಗಿ ದೆಯೇ ಎನ್ನುವ ಅನುಮಾನ ಮೂಡುತ್ತದೆ. ಕೊಲ್ಲೂರು- ಶೃಂಗೇರಿಯನ್ನು ಸಂಪರ್ಕಿಸುವ ಪ್ರಮುಖ ರಾಜ್ಯ ಹೆದ್ದಾರಿ ಇದಾಗಿದ್ದು, ಬೆಳ್ವೆ ಪೇಟೆಯ ಆಸುಪಾಸಿನ ಒಂದು ಕಿ.ಮೀ. ವ್ಯಾಪ್ತಿಯ ಅಲ್ಲಲ್ಲಿ ಅನೇಕ ಹೊಂಡಗಳು ಸೃಷ್ಟಿಯಾಗಿದ್ದು, ವಾಹನ ಸವಾರರು ನಿತ್ಯ ಯಾತನೆ ಅನುಭವಿಸುತ್ತಿದ್ದಾರೆ. ಬೈಕ್ ಸವಾರರ ಪಾಡಂತೂ ಹೇಳತೀರದಾಗಿದೆ.
ರಾಜ್ಯ ಹೆದ್ದಾರಿ ಈ ರೀತಿ ಹದಗೆಟ್ಟಿದ್ದರೂ ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಗಮನಹರಿಸದ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದ ಸ್ಥಳೀಯರು ಸಾಮಾಜಿಕ ಜಾಲತಾಣಗಳಲ್ಲಿ ಈ ರಸ್ತೆಯ ವೀಡಿಯೋ, ಚಿತ್ರಗಳನ್ನು ಹರಿಯಬಿಟ್ಟಿದ್ದಾರೆ. ಕಳೆದ ಆಗಸ್ಟ್‌ನಲ್ಲಿ ಈ ಬಗ್ಗೆ “ಉದಯವಾಣಿ ಸುದಿನ’ ವರದಿ ಮಾಡಿದಾಗ ತತ್‌ಕ್ಷಣ ಸ್ಪಂದಿಸಿದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ರಸ್ತೆಯ ಹೊಂಡಗಳನ್ನು ತೇಪೆ ಹಾಕಿ ಮುಚ್ಚಿದ್ದರು. ಆದರೆ ಮಳೆಯಿಂದಾಗಿ ಅದು ಅಷ್ಟೇ ಬೇಗ ಎದ್ದು ಹೋಗಿದೆ. ಕೂಡಲೇ ಈ ರಸ್ತೆಯನ್ನು ದುರಸ್ತಿಗೊಳಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.