ದರೋಡೆ ಪ್ರಕರಣ: ಹೇಳಿಕೆ ದಾಖಲು
Team Udayavani, Mar 15, 2017, 10:55 AM IST
ಉಡುಪಿ: ಮಣಿಪಾಲದ ಲಕ್ಷ್ಮೀಂದ್ರ ನಗರದ ಮೋರ್ ಸೂಪರ್ ಮಾರ್ಕೆಟ್ನಲ್ಲಿ ಸೋಮವಾರ ನಡೆದ ದರೋಡೆ ಪ್ರಕರಣ ಸಂಬಂಧ ತನಿಖೆ ಮುಂದುವರಿದಿದ್ದು, ಮಂಗಳವಾರ ಮೋರ್ ಮಳಿಗೆಯಲ್ಲಿ ಕೆಲಸ ನಿರ್ವಹಿಸುವ ಸಿಬಂದಿಯ ಹೇಳಿಕೆಗಳನ್ನು ಪೊಲೀಸರು ಪಡೆದಿದ್ದಾರೆ.
ಅಕ್ಕಪಕ್ಕದ ಅಂಗಡಿಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಇದುವರೆಗೆ ಸಿಕ್ಕಿರುವ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು ದರೋಡೆಕೋರರ ಬಗ್ಗೆ, ಅವರು ಬಳಸಿದ ಸ್ಕೂಟಿಯ ಬಗ್ಗೆ ಯಾವುದೇ ಸುಳಿವು ಲಭಿಸಿಲ್ಲ ಎನ್ನುವುದಾಗಿ ಪೊಲೀಸರು ತಿಳಿಸಿದ್ದಾರೆ. ಡಿವೈಎಸ್ಪಿ ಕುಮಾರಸ್ವಾಮಿ ನೇತೃತ್ವದಲ್ಲಿ ತನಿಖಾ ತಂಡವನ್ನು ಕೂಡ ರಚಿಸಲಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.