ಶಿರೂರು: ಮಳಿಗೆಯಿಂದ 2ಕೆ.ಜಿ. ಚಿನ್ನ, 15 ಕೆ.ಜಿ. ಬೆಳ್ಳಿ ಕಳವು
Team Udayavani, Apr 4, 2017, 1:11 PM IST
ಬೈಂದೂರು: ಶಿರೂರಿನ ಚಿನ್ನಾಭರಣದ ಅಂಗಡಿಯೊಂದರ ಹಿಂಭಾಗದ ಗೋಡೆ ಕೊರೆದು ನುಗ್ಗಿ ಕಳ್ಳತನ ನಡೆಸಲಾಗಿದೆ. ಇಲ್ಲಿನ ಗೋಲ್ಡ್ ಜುವೆಲರ್ಸ್ ಹಿಂಭಾಗದ ಗೋಡೆಯ ಮೇಲ್ಭಾಗದಲ್ಲಿರುವ ಚಿಕ್ಕ ಕಿಟಕಿಯ ಸರಳುಗಳನ್ನು ಗ್ಯಾಸ್ ಕಟ್ಟರ್ ಮೂಲಕ ಕೊರೆದು ಒಳನುಗ್ಗಿದ ಕಳ್ಳರು ಅಪಾರ ಪ್ರಮಾಣದ ಚಿನ್ನಾಭರಣ ದೋಚಿದ್ದಾರೆ. ಅಂಗಡಿಯಲ್ಲಿರುವ ಸಿಸಿ ಕೆಮರಾ ಸಂಪರ್ಕ ಕಡಿತಗೊಳಿಸಿದ್ದಾರೆ. ಮಾತ್ರವಲ್ಲದೇ ಹಾರ್ಡ್ ಡಿಸ್ಕ್ ಕದ್ದೊಯ್ದಿದ್ದಾರೆ. ಅಂಗಡಿಯ ಒಳ ಹೊರಗಿನ ಬಗ್ಗೆ ಸಂಪೂರ್ಣ ಮಾಹಿತಿ ಹೊಂದಿರುವವರೇ ಈ ಕಳವು ನಡೆಸಿರುವ ಸಾಧ್ಯತೆ ಇದೆ.
ಸುಮಾರು ಎರಡು ಕೆ.ಜಿ. ಚಿನ್ನಾಭರಣ ಹಾಗೂ 15 ಕೆ.ಜಿ.ಯಷ್ಟು ಬೆಳ್ಳಿಯ ಆಭರಣಗಳು ಕಳವಾಗಿದೆ ಎಂದು ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ಬೈಂದೂರು ಠಾಣಾಧಿಕಾರಿಗಳು ಭೇಟಿ ನೀಡಿದ್ದಾರೆ. ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿದ್ದರು. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kudremukh National Park: ವನ್ಯಜೀವಿ ಬೇಟೆಗೆ ಯತ್ನ; ಆರೋಪಿ ಬಂಧನ
Udupi: ಮಹಾಕುಂಭ ಮೇಳದ ಯಶಸ್ಸಿಗಾಗಿ ಮಠ -ಮನೆ, ಮಂದಿರಗಳಲ್ಲಿ ಪ್ರಾರ್ಥಿಸಲು ಪೇಜಾವರ ಶ್ರೀ ಕರೆ
Manipal: ಮಣ್ಣಪಳ್ಳ ಸ್ವಚ್ಛತೆಗಿಳಿದ ಸಾರ್ವಜನಿಕರು!
Ayodhya; ರಾಮ ಮಂದಿರ ಪೂರ್ಣವೇ ಗುರಿ: ಪೇಜಾವರ ಶ್ರೀ
ಇಂದಿರಾ ಗಾಂಧಿ ಸಂವಿಧಾನ ತಿದ್ದುಪಡಿ ಮಾಡಿದ್ದರಿಂದ ದೇಶಕ್ಕೆ ಭಾರೀ ಹಿನ್ನಡೆ: ಕೆ.ಅಣ್ಣಾಮಲೈ
MUST WATCH
ಹೊಸ ಸೇರ್ಪಡೆ
Mukund MGM Realty: ಶೀಘ್ರದಲ್ಲೇ ಮತ್ತೆರಡು ಬ್ಯುಸಿನೆಸ್ ಸೆಂಟರ್‌ಗಳು ಪ್ರಾರಂಭ
Kudremukh National Park: ವನ್ಯಜೀವಿ ಬೇಟೆಗೆ ಯತ್ನ; ಆರೋಪಿ ಬಂಧನ
ಮೋಹ ಪರವಶ, ಅಧಿಕಾರ ಮದ, ಮತ್ಸರದ ರಾಜಕಾರಣ ಮಾಡೋರಿಗೆ ಸತ್ಯ ಅರ್ಥವಾಗಲ್ಲ: ಸಿ.ಟಿ.ರವಿ
Bengaluru: ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು; ಭುಗಿಲೆದ್ದ ಆಕ್ರೋಶ
Tulu Film: ರೂಪೇಶ್ ಶೆಟ್ರ ‘ಜೈ’ ಸಿನಿಮಾಗೆ ಬಂದ್ರು ಬಾಲಿವುಡ್ ಸೂಪರ್ ಸ್ಟಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.