ಬಂಡೀಮಠ ಚರಂಡಿ ದುರಸ್ತಿ: ಚಪ್ಪಡಿ ಅಳವಡಿಕೆ
Team Udayavani, Jul 17, 2019, 5:31 AM IST
ಕಾರ್ಕಳ : ಪುರಸಭಾ ವ್ಯಾಪ್ತಿಯ 5ನೇ ವಾರ್ಡ್ ಬಂಡೀಮಠ ಎಸ್‌ಟಿ ಕಾಲನಿ ಸಮೀಪದ ಚರಂಡಿಗೆ ಚಪ್ಪಡಿ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿದೆ. ಪುರಸಭೆಯ ಮೀಸಲು ನಿಧಿ 1.5 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ನಡೆಸಲಾಗಿದೆ ಎಂದು ಪುರಸಭಾ ಎಂಜಿನಿಯರ್ ತಿಳಿಸಿದರು.
ಕಲ್ಲೊಟ್ಟೆ ಪರಿಸರದ ಈ ಚರಂಡಿಯಲ್ಲಿ ತ್ಯಾಜ್ಯ ತುಂಬಿ ಸರಾಗವಾಗಿ ನೀರು ಹರಿಯುತ್ತಿರಲಿಲ್ಲ. ಸಾರ್ವಜನಿಕರಿಗೆ ದುರ್ನಾತ ಬೀರುವು ದರೊಂದಿಗೆ ಸೊಳ್ಳೆ ಉತ್ಪತ್ತಿ ತಾಣವಾಗಿಯೂ ಮಾರ್ಪಾಡಾಗಿತ್ತು. ಸಾಂಕ್ರಾಮಿಕ ರೋಗ ಹರಡುವ ಭೀತಿಯೂ ಸ್ಥಳೀಯರಲ್ಲಿ ಆವರಿಸಿತ್ತು. ಈ ಕುರಿತು ಪತ್ರಿಕೆ ವರದಿ ಪ್ರಕಟಿಸಿ, ಪುರಸಭೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದಿತ್ತು.
ಇದೀಗ ಚರಂಡಿ ಹೂಳು, ತ್ಯಾಜ್ಯ ತೆಗೆದು ಚಪ್ಪಡಿ ಅಳವಡಿಸಿರುವುದರಿಂದ ಸ್ಥಳೀಯರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.