ಪ್ಲಾಸ್ಟಿಕ್ ನಿಷೇಧ ಜಾರಿ ಅನುಷ್ಟಾನಕ್ಕಾಗಿ ರೋಸ್ ಡೇ
Team Udayavani, Jun 29, 2018, 6:15 AM IST
ಕಾಪು: ಕಾಪು ಪುರಸಭಾ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಜಾರಿ ಮತ್ತು ಆ ಬಗ್ಗೆ ವಿದ್ಯಾರ್ಥಿಗಳ ಮೂಲಕ ಜಾಗೃತಿ ಕಾರ್ಯಕ್ರಮ ನಡೆಸುವಲ್ಲಿ ಪುರಸಭೆಯೊಂದಿಗೆ ಕೈ ಜೋಡಿಸುವಂತೆ ಶಾಲಾ ಮುಖ್ಯೋಪಾಧ್ಯಾಯರಲ್ಲಿ ವಿನಂತಿಸುವ ನಿಟ್ಟಿನಲ್ಲಿ ವಿಶೇಷ ಸಭೆ ನಡೆಯಿತು.
ಈ ಸಂದರ್ಭ ಪುರಸಭೆ ಮುಖ್ಯಾಧಿಕಾರಿ ರಾಯಪ್ಪ ಮಾತನಾಡಿ, ಪುರಸಭಾ ವ್ಯಾಪ್ತಿಗೆ ಬರುವ ಎಲ್ಲಖಾಸಗಿ / ಸರಕಾರಿ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳ ಮೂಲಕವಾಗಿ ಪ್ರತೀ ದಿನ ತಮ್ಮ ಮನೆಯ ವ್ಯಾಪ್ತಿಯಲ್ಲಿ ಬರುವ ಮತ್ತು ಪೇಟೆಯಲ್ಲಿರುವ ಅಂಗಡಿಗಳಿಗೆ ತೆರಳಿ ಅಂಗಡಿ ಮಾಲೀಕರಿಗೆ ಗುಲಾಬಿ ಹೂ ನೀಡಿ – ರೋಸ್ ಡೇ ಪ್ಲಾಸ್ಟಿಕ್ ಬಳಸದಂತೆ ಜಾಗೃತಿ ಮೂ,ಡಿಸುವಂತೆ ಶಿಕ್ಷಕರಲ್ಲಿ ವಿನಂತಿಸಿದರು.
ಕಾರ್ಯಕ್ರಮಕ್ಕೆ ಮಲ್ಲಾರು ಪಕೀರ್ಣಕಟ್ಟೆ ಉರ್ದು ಶಾಲೆಯ ವಿದ್ಯಾರ್ಥಿಗಳ ಮೂಲಕ ಚಾಲನೆ ದೊರಕಿಸಲಾಗಿದ್ದು, ಮುಂದೆ ಪ್ರತೀ ವಾರ್ಡ್‌ನಲ್ಲಿಯೂ ಇದೇ ಮಾದರಿಯ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಸ್ಥಳೀಯ ಜನಪ್ರತಿನಿಧಿಗಳು ಮತ್ತು ವಾರ್ಡ್ ಸದಸ್ಯರೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿದೆ. ಆ ಮೂಲಕ ಪ್ಲಾಸ್ಟಿಕ್ ನಿಷೇಧ ಕಾನೂನಿನ ಸಮರ್ಪಕ ಅನುಷ್ಟಾನ ಸಾಧ್ಯವಿದೆ ಎಂದು ಅವರು ತಿಳಿಸಿದ್ದಾರೆ.
ಪುರಸಭೆ ಉಪಾಧ್ಯಕ್ಷ ಕೆ.ಎಚ್. ಉಸ್ಮಾನ್, ಆರೋಗ್ಯಾಧಿಕಾರಿ ದಿನೇಶ್, ಪುರಸಭೆ ಸದಸ್ಯರು, ಅಧಿಕಾರಿ ಮತ್ತು ಸಿಬಂದಿಗಳು ಹಾಗೂ ವಿವಿಧ ಶಾಲಾ ಮುಖ್ಯೋಪಾಧ್ಯಾಯರುಗಳು ಸಭೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.