ವಾಹನ ಚಾಲಕರಿಗೆ ಕಂಟಕ
Team Udayavani, Mar 27, 2018, 7:05 AM IST
ಬೆಳ್ಮಣ್: ವಾರದ ಹಿಂದೆ ಮಂಜರಪಲ್ಕೆ ಬೋಳ ಸಚ್ಚೇರಿಪೇಟೆಗೆ ಸಂಧಿಸುವ ರಸ್ತೆ ಕುದ್ರೋಟ್ಟು ಎಂಬಲ್ಲಿ ಕುಸಿತ ಕಂಡಿದ್ದು ಸಂಬಂಧ ಪಟ್ಟವರು ದುರಸ್ತಿ ಮಾಡದ ಕಾರಣ ವಾಹನ ಸವಾರರಿಗೆ ಕಂಟಕವಾಗಿ ಪರಿಣಮಿಸಿದೆ.
ಕಳೆದ ವಾರ ನೀರಿನ ಪೈಪ್‌ಒಡೆದು ಹೋದ ಪರಿಣಾಮ ಹಾಗೂ ಕಾಮಗಾರಿಯ ಕಳಪೆಯಿಂದಾಗಿ ರಸ್ತೆಯ ನಡು ಮಧ್ಯದಲ್ಲಿ ದಿಢೀರ್ ಕುಸಿತ ಉಂಟಾಗಿ ಆತಂಕ ಮೂಡಿತ್ತು. ಹಲವು ದಿನಗಳೆದರೂ ರಸ್ತೆಯನ್ನು ದುರಸ್ತಿ ಮಾಡದ ಕಾರಣ ಈ ಭಾಗದಲ್ಲಿ ವಾಹನ ಚಾಲಕರು ಅಪಾಯಕಾರಿಯಾಗಿ ಸಂಚರಿಸಬೇಕಾದ ಪ್ರಮೇಯ ಒದಗಿ ಬಂದಿದೆ. ರಾತ್ರಿ ಸಮಯದಲ್ಲಿ ರಸ್ತೆ ಕುಸಿತದ ಅರಿವಿರದ ಬೈಕ್ ಸವಾರನೋರ್ವ ಬಿದ್ದು ಗಂಭೀರ ಗಾಯಗೊಂಡ ಘಟನೆ ಕೂಡ ನಡೆದಿದೆ.
ಈ ರಸ್ತೆಯಲ್ಲಿ ದಿನಂಪ್ರತಿ ನೂರಾರೂ ವಾಹನಗಳು ಸಂಚಾರ ಮಾಡುತ್ತಿದ್ದು, ರಾತ್ರಿ ಹೊತ್ತು ಈ ದಿಬ್ಬ ಭಾರಿ ಅಪಾಯ ತಂದೊಡ್ಡುತ್ತಿದ್ದು, ದುರಸ್ತಿಯ ವಿಳಂಬ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಸಂಬಂಧ ಪಟ್ಟವರು ಈ ಜಾಗದಲ್ಲಿ ಯಾವುದೇ ಎಚ್ಚರಿಕೆಯ ಸೂಚನ ಫಲಕವನ್ನೂ ಅಳವಡಿಸದಿರುವುದೂ ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇದರಿಂದಾಗಿ ಅಪಾಯವನ್ನರಿಯದ ವಾಹನ ಚಾಲಕರು ಅಪಘಾತಕ್ಕೀಡಾಗಿ ಗಾಯಗೊಳ್ಳುತ್ತಿದ್ದಾರೆ ಎಂದು ಸ್ಥಳಿಯರಾದ ಶರತ್ ಶೆಟ್ಟಿ ಸಚ್ಚೇರಿಪೇಟೆ ತಿಳಿಸಿದ್ದಾರೆ.
ಭಾರೀ ಅನಾಹುತ ತಪ್ಪಿಸುವಲ್ಲಿ ಸಂಬಂಧಪಟ್ಟವರು ಕೂಡಲೇ ಕ್ರಮ ಕೈಗೊಳ್ಳಬೇಕಾಗಿದೆ ಎಂದೂ ಅವರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು
Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
ಕಲಾವಿದರ ಮಾಸಾಶನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ
Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ
Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ನೇತ್ರಾವತಿ ಸೇತುವೆ ಮೇಲಿನ ಸಿಸಿ ಕೆಮರಾಗಳಿಗಿಲ್ಲ ನಿರ್ವಹಣೆ ಭಾಗ್ಯ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.