ಸಾಲಿಗ್ರಾಮ ಗುರುನರಸಿಂಹ ದೇಗುಲ: ಅದ್ದೂರಿ ರಥಾರೋಹಣ
Team Udayavani, Jan 17, 2019, 1:30 AM IST
ಕೋಟ: ಪುರಾಣ ಪ್ರಸಿದ್ಧ ಸಾಲಿಗ್ರಾಮ ಶ್ರೀಗುರುನರಸಿಂಹ ದೇವಸ್ಥಾನದಲ್ಲಿ ಜಾತ್ರೆಯ ಪ್ರಯುಕ್ತ ಜ.16ರಂದು ಬೆಳಗ್ಗೆ ಸಾವಿರಾರು ಭಕ್ತರು ಸಮ್ಮುಖದಲ್ಲಿ ರಥಾರೋಹಣ ಅದ್ದೂರಿಯಾಗಿ ನೆರವೇರಿತು.
ಈ ಸಂದರ್ಭ ವಿವಿಧ ಉತ್ಸವಾದಿ ಕಾರ್ಯಕ್ರಮಗಳು ನಡೆದು, ಉತ್ಸವ ಮೂರ್ತಿಯನ್ನು ಮೆರವಣಿಗೆಯಲ್ಲಿ ತಂದು ರಥದಲ್ಲಿರಿಸಿ ರಥಾರೋಹಣ ಮಾಡಲಾಯಿತು. ಭಕ್ತರು ಜೈ ನರಸಿಂಹ, ಗುರುನರಸಿಂಹ, ಗೋವಿಂದ ನಾಮಸ್ಮರಣೆಯೊಂದಿಗೆ ಆಂಜನೇಯ ದೇವಸ್ಥಾನದವರೆಗೆ ರಥವನ್ನು ಎಳೆತಂದರು.
ಅನಂತರ ನೆರೆದಿದ್ದ ಭಕ್ತರು ಆಂಜನೇಯ ಹಾಗೂ ಗುರು ನರಸಿಂಹನ ದರ್ಶನ ಪಡೆದು, ರಥಕ್ಕೆ ಹಣ್ಣು ಕಾಯಿ ಸೇವೆ ನೀಡಿ ಪೂಜೆ ಸಲ್ಲಿಸಿದರು. ಅಪರಾಹ್ನ ಅನ್ನ ಸಂತ ರ್ಪಣೆ ನಡೆಯಿತು ಮತ್ತು ಪಾನಕ, ಪಣಿವಾರ ವ್ಯವಸ್ಥೆಗೊಳಿಸಲಾಗಿತ್ತು.
ಜಾತ್ರೆಯ ಪ್ರಯುಕ್ತ ಗುರುನರಸಿಂಹ ದೇವಸ್ಥಾನವನ್ನು ದೇಗುಲದ ವತಿಯಿಂದ ಹಾಗೂ ಆಂಜನೇಯ ದೇವಸ್ಥಾನವನ್ನು ಆಂಜನೇಯ ಸೇವಾ ಟ್ರಸ್ಟ್ ವತಿಯಿಂದ ವಿಶೇಷ ಹೂವಿನ ಅಲಂಕಾರದಿಂದ ಶೃಂಗರಿಸಲಾಗಿತ್ತು. ಕಾರಂತ ಬೀದಿಯನ್ನು ಬನಶ್ರೀ ಫ್ರೆಂಡ್ಸ್ ನೇತೃತ್ವದಲ್ಲಿ ವಿದ್ಯುತ್ ದೀಪದಿಂದ ಶೃಂಗರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.