ಸಾಲಿಗ್ರಾಮ ಪ.ಪಂ. ವ್ಯಾಪ್ತಿಯ ಜೆಡಿಎಸ್ ಸಮಾವೇಶ
Team Udayavani, Jul 8, 2017, 3:20 AM IST
ಕೋಟ: ಜೆಡಿಎಸ್ ಪಕ್ಷದಲ್ಲಿ ಕಾರ್ಯಕರ್ತರ ಬೆಳವಣಿಗೆಗೆ ಸಾಕಷ್ಟು ಅವಕಾಶವಿದ್ದು, ಹೆಚ್ಚು ಮಂದಿ ಪಕ್ಷದ ಕಡೆಗೆ ಆಕರ್ಷಿತರಾಗುತ್ತಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಸ್ಪರ್ಧೆ ಖಚಿತ ಎಂದು ಪಕ್ಷದ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಹೇಳಿದರು.
ಅವರು ಜು.2ರಂದು ಸಾಲಿಗ್ರಾಮ ಗಿರಿಜಾ ಕಲ್ಯಾಣ ಮಂಟಪದಲ್ಲಿ ಜರಗಿದ ಸಾಲಿಗ್ರಾಮ ಪ.ಪಂ. ವ್ಯಾಪ್ತಿಯ ಜೆಡಿಎಸ್ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ಪಕ್ಷ ಸಂಘಟನೆಗೆ ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಕ್ಷದ ಕುಂದಾಪುರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಬ್ಲಾಕ್ ಅಧ್ಯಕ್ಷ ತೆಕ್ಕಟ್ಟೆ ಪ್ರಕಾಶ ಶೆಟ್ಟಿ ಮಾತನಾಡಿ, ಜೆಡಿಎಸ್ ಯುವಕರಿಗೆ ಹೆಚ್ಚು ಆಧ್ಯತೆ ನೀಡುತ್ತಿದೆ. ಕರಾವಳಿ ಭಾಗದಲ್ಲಿ ರಾಷ್ಟ್ರೀಯ ಪಕ್ಷಗಳ ರಾಜಕೀಯ ನೀತಿಯಿಂದ ಜನತೆ ಬೇಸರಗೊಂಡಿದ್ದಾರೆ. ಹೀಗಾಗಿ ಮುಂದೆ ನಮ್ಮ ಪಕ್ಷ ಪ್ರಬಲಗೊಳ್ಳಲಿದೆ ಎಂದರು.
ಪಕ್ಷದ ಉಡುಪಿ ಜಿಲ್ಲಾ ಕಾರ್ಯಧ್ಯಕ್ಷ ವಾಸುದೇವ ರಾವ್, ಜಿಲ್ಲಾ ಪ್ರದಾನ ಕಾರ್ಯದರ್ಶಿ ಶ್ರೀಕಾಂತ್ ಅಡಿಗ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶಾಲಿನಿ ಶೆಟ್ಟಿ, ಮುಖಂಡರಾದ ಮನ್ಸೂರ್ ಮರವಂತೆ, ಮುಕ್ತಾರ್ ಕೋಟೇಶ್ವರ್, ಮಾಜಿ ಜಿಲ್ಲಾದ್ಯಕ್ಷ ದಕ್ಷತ್ ಶೆಟ್ಟಿ, ಕುಂದಾಪುರ ತಾಲೂಕು ಮೀನುಗಾರ ಘಟಕದ ಉಪಾಧ್ಯಕ್ಷ ಶಿವರಾಜ್ ಸಾಲಿಗ್ರಾಮ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.