ಕುಡಿಯುವ ನೀರು ಕೊಡಲು ಇಚ್ಛಾ ಶಕ್ತಿ ಕೊರತೆ

Team Udayavani, May 14, 2018, 6:20 AM IST

2004kota8e.jpg

ಕೋಟ: ಸಾಲಿಗ್ರಾಮ ಪ.ಪಂ. ವ್ಯಾಪ್ತಿಯ ಹಲವು ಭಾಗಗಳಲ್ಲಿ  ಬೇಸಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುತ್ತದೆ. ಹೀಗಾಗಿ ಇಲ್ಲಿನ ಕಾರ್ಕಡ ಹಿರೇಹೊಳೆ ಕಿಂಡಿ ಅಣೆಕಟ್ಟಿನ ಮೂಲಕ ನೀರು ಸಂಗ್ರಹಿಸಿ ಶುದ್ಧೀಕರಿಸಿ ಅದನ್ನು ಕುಡಿಯಲು ನೀಡುವ ಬಹು ಕೋಟಿ ರೂ.ವೆಚ್ಚದ ಶಾಶ್ವತ ಯೋಜನೆಗೆ ನಾಲ್ಕೈದು ವರ್ಷಗಳ ಹಿಂದೆ ಸರ್ವೆ ನಡೆಸಿ ಪ್ರಸ್ತಾವನೆ ಸಲ್ಲಿಸಿದರೂ ಯೋಜನೆ ಕಾರ್ಯಗತವಾಗಿಲ್ಲ.  

ತೀರದ ನೀರಿನ ಸಮಸ್ಯೆ  
15,123  ಜನಸಂಖ್ಯೆ  ಹೊಂದಿರುವ  ಸಾಲಿಗ್ರಾಮ ಪ.ಪಂ.ನಲ್ಲಿ  8 ಸರಕಾರಿ ಬಾವಿ ಹಾಗೂ 1 ಖಾಸಗಿ ಬಾವಿ ನೀರಿನ ಮೂಲಗಳಿವೆ. ಗುಂಡ್ಮಿ, ಯಕ್ಷಿಮಠ, ಅಲಿತೋಟ, ಪಾರಂಪಳ್ಳಿ, ಚುಂಚ್‌ಮನೆ, ಹೊಳ್ಳರ ತೋಟ, ಮಧ್ಯಸ್ಥರ ತೋಟ, ಶಾಲಾ ತೋಟ, ಕೆಮ್ಮಣ್ಣುಕೆರೆ, ಕಾರ್ಕಡ ಸೌರಿಬೈಲು, ಭಟ್ರಕಟ್ಟೆ ಮುಂತಾದ ಭಾಗಗಳಲ್ಲಿ  ಪ್ರತಿ ವರ್ಷ ನೀರಿನ ಸಮಸ್ಯೆ ಎದುರಾಗುತ್ತದೆ. ಲಕ್ಷಾಂತರ ರೂಪಾಯಿ ವ್ಯಯಿಸಿ ವರ್ಷಂಪ್ರತಿ ಟ್ಯಾಂಕರ್‌ ನೀರು ಸರಬರಾಜು ಮಾಡಲಾಗುತ್ತದೆ. ಹಾಗಾಗಿ ಶಾಶ್ವತ ಯೋಜನೆಗೆ ಮನವಿ ಮಾಡಲಾಗಿತ್ತು. 
 
ಸುತ್ತಲಿನ ಗ್ರಾ.ಪಂ.ಗಳಿಗೂ ಅನುಕೂಲ 
ಸಾಲಿಗ್ರಾಮ ಪ.ಪಂ. ವ್ಯಾಪ್ತಿಯಲ್ಲಿ  ಬೇಸಗೆಯಲ್ಲಿ  ಇಲ್ಲಿಗೆ 8.9 ಎಂ.ಸಿ.ಎಫ್‌.ಟಿ  ನೀರು ಅಗತ್ಯವಿರುತ್ತದೆ. ಆದರೆ ಉದ್ದೇಶಿತ ಯೋಜನೆಯ ಮೂಲಕ  12.39 ಎಂ.ಸಿ.ಎಫ್‌.ಟಿ.  ನೀರು ಸಂಗ್ರಹಿಸಬಹುದಾಗಿದೆ. ಇದೀಗ ವಾರಾಹಿ ಕಾಲುವೆ ನೀರು ಈ ಹೊಳೆಯನ್ನು ಸೇರುತ್ತಿರುವುದರಿಂದ ನೀರಿನ ಹರಿವು ಸಾಕಷ್ಟು ಹೆಚ್ಚಿದೆ. ಆದ್ದರಿಂದ  ಉಳಿತಾಯವಾಗುವ 4 ಎಂ.ಸಿ. ಎಫ್‌.ಟಿ.ಗಿಂತಲೂ ಹೆಚ್ಚು   ನೀರನ್ನು ಪಕ್ಕದ ವಡ್ಡರ್ಸೆ, ಪಾಂಡೇಶ್ವರ, ಕೋಟ ಮುಂತಾದ ಗ್ರಾ.ಪಂ.ಗಳಿಗೆ ನೀಡಲು  ಅವಕಾಶವಿದೆ. ಇದು ಅಲ್ಲಿನ ನೀರಿನ ಸಮಸ್ಯೆಗೂ ಪರಿಹಾರ ನೀಡಲಿದೆ.  

ಶಾಶ್ವತ ಯೋಜನೆ ಕನಸು?
ಇಲ್ಲಿನ ಕಾರ್ಕಡ ಸಮೀಪ ದೊಡ್ಡ ಹೊಳೆಗೆ ಅಡ್ಡಲಾಗಿ ನಿರ್ಮಿಸಿರುವ 2 ಕಿಂಡಿ ಅಣೆಕಟ್ಟುಗಳನ್ನು ಬಳಸಿ ಬೇಸಗೆಯಲ್ಲಿ ಅಗತ್ಯವಿರುವ 8.9. ಎಂ.ಸಿ.ಎಫ್‌.ಟಿ.  ನೀರನ್ನು ಶುದ್ಧೀಕರಿಸಿ ಕುಡಿಯಲು ನೀಡುವ ಕುರಿತು 2015ರಲ್ಲಿ 29.32 ಕೋಟಿ ರೂ. ಯೋಜನೆ ಸಿದ್ಧಪಡಿಸಲಾಗಿತ್ತು. ಅನಂತರ ಎರಡು ಬಾರಿ ಪರಿಷ್ಕರಣೆಯಾಗಿ 2017ರಲ್ಲಿ ಯೋಜನಾ ವೆಚ್ಚ 41 ಕೋಟಿ ರೂ.ಗೆ ತಲುಪಿತ್ತು. ವಾಟರ್‌ ಟ್ಯಾಂಕ್‌, ಶುದ್ಧೀಕರಣ ಘಟಕದ ನಿರ್ಮಾಣಕ್ಕೆ ಅಗತ್ಯವಿರುವ ಸರಕಾರಿ ಭೂಮಿಯನ್ನು ಕೂಡ ಗುರುತಿಸಲಾಗಿತ್ತು. ಆದರೆ ಇಚ್ಛಾಶಕ್ತಿ ಕೊರತೆಯಿಂದ ಯೋಜನೆ ಕಡತದಲ್ಲೇ ಉಳಿದಿದೆ. 

ಅಂಗೀಕರಿಸಿಲ್ಲ
ಸಾಲಿಗ್ರಾಮ ಪ.ಪಂ. ವ್ಯಾಪ್ತಿಯ ನೀರಿನ ಕೊರತೆ ನೀಗಿಸಲು ಶಾಶ್ವತ ಕುಡಿಯುವ ನೀರಿನ ಯೋಜನೆಗಾಗಿ ಸರಕಾರಕ್ಕೆ 2015ರಲ್ಲಿ ಸರ್ವೆ ನಡೆಸಿ ವರದಿಯೊಂದನ್ನು ಸಲ್ಲಿಸಲಾಗಿತ್ತು. ಅನಂತರ 2017ರಲ್ಲಿ ಅಂದಾಜು ವೆಚ್ಚ ಹೆಚ್ಚಿಸಿ ಮತ್ತೂಮ್ಮೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ ಇದುವರೆಗೆ ಅಂಗೀಕಾರಗೊಂಡಿಲ್ಲ.
– ಶ್ರೀಪಾದ್‌ ಪುರೋಹಿತ್‌,ಮುಖ್ಯಾಧಿಕಾರಿಗಳು, ಸಾಲಿಗ್ರಾಮ ಪ.ಪಂ.

– ರಾಜೇಶ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts

Udupi: ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಸಾಬೀತು; ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

death

Gangolli: ಲಾರಿ ಪ್ರಯಾಣದ ವೇಳೆ ಕ್ಲೀನರ್‌ ಸಾವು

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.