ಮರಳು ಸಮಸ್ಯೆ; ಡಿಸಿ ವಿರುದ್ಧ ಪ್ರತಿಭಟಿಸುವ ಸ್ಥಿತಿ
Team Udayavani, Sep 17, 2018, 10:57 AM IST
ಉಡುಪಿ: ಮರಳು ಸರಬರಾಜು ಆರಂಭಗೊಳ್ಳದೆ ಇರುವುದರಿಂದ ನಾವೆಲ್ಲರೂ ಪ್ರತಿಭಟಿಸುವ ಸ್ಥಿತಿ ಬಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಡಾ| ಜಯಮಾಲಾ ಹೇಳಿದರು. ರವಿವಾರ ಸಕೀìಟ್ ಹೌಸ್‌ನಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ರಘುಪತಿ ಭಟ್ ಮೊದಲಾದವರೊಂದಿಗೆ ಮರಳು ಸಮಸ್ಯೆ ಕುರಿತು ಚರ್ಚೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಗತಿ ಪರಿಶೀಲನೆ ಸಭೆಗೆ ಮುಖ್ಯಮಂತ್ರಿಗಳು ಆಗಮಿಸಿದ್ದ ವೇಳೆ ಡಿಸಿಗೆ ಸೂಚನೆ ನೀಡಿದ್ದರು. ಸ್ಥಳೀಯರಿಗೆ ಸಮಸ್ಯೆಯಾಗಬಾರದು, ತತ್‌ಕ್ಷಣ ಸಾಂಪ್ರದಾಯಿಕವಾಗಿ ಮರಳು ತೆಗೆಯಲು ಅವಕಾಶ ನೀಡಲು ಹೇಳಿದ್ದರು. ನಾನು ಕೂಡ ಮರಳು ತೆಗೆಯಲು ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದೆ ಎಂದರು.
ಜಿಲ್ಲಾಧಿಕಾರಿಗಳು ಎಸಿ ಅವರಿಂದ ಪುನಃ ಸರ್ವೆಗೆ ಸೂಚನೆ ನೀಡಿದ್ದಾರೆ ಎನ್ನುವ ಮಾಹಿತಿ ಇದೆ ಎನ್ನುವ ಪತ್ರಕರ್ತರ ಪ್ರಶ್ನೆಗೆ, ಎಸಿ ಸರ್ವೆ ನಡೆಸುವುದಕ್ಕೆ ಯಾವ ಕಾನೂನಿನಲ್ಲಿ ಅವಕಾಶ ಇದೆ? ಇಲ್ಲಿಯ ವರೆಗೆ ಹೀಗೆ ನಡೆದಿದೆಯೇ? ಇದುವರೆಗೆ ಇಲ್ಲದೆ ಇರುವಂತಹ ಕ್ರಮವನ್ನು ಈಗ ಜಾರಿಗೆ ತಂದು ಜನರಿಗೆ ಏಕೆ ತೊಂದರೆ ನೀಡುತ್ತಿದ್ದಾರೆ? ಇದು ಪರಿಹಾರವಾಗಲು ಇನ್ನು ಎಷ್ಟು ಕಾಲ ಬೇಕು ಎಂದು ಪ್ರಶ್ನಿಸಿದ ಸಚಿವೆ, ಈ ರೀತಿ ಜನರ ಭಾವನೆಗಳ ಜತೆಗೆ ಆಟ ಆಡಲಾಗದು ಎಂದರು. ನಾನು ಶನಿವಾರ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದೇನೆ, ಮತ್ತೆ ಮಾತನಾಡುತ್ತೇನೆ. ಮುಖ್ಯ ಮಂತ್ರಿಗಳು, ಉಸ್ತುವಾರಿ ಸಚಿವರು, ವಿಪಕ್ಷ ನಾಯಕರು, ಶಾಸಕರು ಕೇಳಿದರೂ ಇನ್ನೂ ಮರಳು ದಿಣ್ಣೆಗಳನ್ನು ಗುರುತಿಸುವ ಕೆಲಸ ನಡೆಯುತ್ತಿಲ್ಲವಾದರೆ ಏನು ತೊಡಕು ಎನ್ನುವುದರ ಬಗ್ಗೆ ಮತ್ತೆ ವಿವರಣೆ ಕೇಳುತ್ತೇನೆ ಎಂದರು.
ಸೆ. 20ರಿಂದ ಅಹೋರಾತ್ರಿ ಪ್ರತಿಭಟನೆ
ಗುರುವಾರದೊಳಗೆ ಮರಳು ದಿಣ್ಣೆ ಗುರುತಿಸುವ ಕೆಲಸ ಆರಂಭಗೊಳ್ಳದೆ ಇದ್ದಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆ ಸುವುದಾಗಿ ಕೋಟ ಶ್ರೀನಿವಾಸ ಪೂಜಾರಿ ಮತ್ತು ರಘುಪತಿ ಭಟ್ ತಿಳಿಸಿದ್ದಾರೆ.
ಸಚಿವರೊಂದಿಗೆ ಮರಳು ಸಮಸ್ಯೆ ಕುರಿತು ಮಾತುಕತೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತ ನಾಡಿ, ಸಾರ್ವ ಜನಿಕರು ಸಂಕಷ್ಟಕ್ಕೊಳಗಾಗಿದ್ದಾರೆ. ಬೇಥ ಮೆಟ್ರಿಕ್ ಬದಲು ಎನ್‌ಐಟಿಕೆ ಸರ್ವೆ ನಡೆಸ ಬೇಕೆಂಬುದು ಜಿಲ್ಲೆಯ ಎಲ್ಲ ಶಾಸಕರ ಆಗ್ರಹವಾಗಿತ್ತು. ಅದಕ್ಕೆ ಮುಖ್ಯಮಂತ್ರಿ ಕೂಡ ಒಪ್ಪಿಗೆ ಸೂಚಿಸಿದ್ದಾರೆ. ಮೀನು ಗಾರಿಕೆ ಇಲಾಖೆ ಎಲ್ಲೆಲ್ಲಿ ಮರಳು ದಿಣ್ಣೆಗಳಿಂದ ದೋಣಿ ಸಂಚಾರಕ್ಕೆ ತೊಡ ಕಾಗು ತ್ತಿದೆ ಎಂಬುದನ್ನು ಗುರುತಿಸಿ 7 ಜನರ ಸಮಿತಿಗೆ ವರದಿ ನೀಡಿದೆ. ಈಗ ಪುನಃ ಎಸಿ ಸರ್ವೆಗೆ ಆದೇಶಿಸಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಇದನ್ನು ವಿರೋಧಿಸುತ್ತೇವೆ. ಸೋಮವಾರ ಎನ್‌ಐಟಿಕೆಗೆ ಸರ್ವೆ ನಡೆಸಲು ಜಿಲ್ಲಾಡಳಿತದ ಪತ್ರ ಹೋಗಿ, ಗುರುವಾರದೊಳಗೆ ಆರಂಭವಾಗಬೇಕು, ಇಲ್ಲವಾದಲ್ಲಿ ಜಿಲ್ಲೆಯ ಶಾಸಕರು, ಎಂಜಿನಿಯರ್‌ಗಳು, ಗುತ್ತಿಗೆದಾರರು ಡಿಸಿ ಕಚೇರಿ ಎದುರು ಅಹೋರಾತ್ರಿ ಪ್ರತಿಭಟನೆ ನಡೆಸುವುದಾಗಿ ಹೇಳಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ
Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.