ಮರಳು: ಮತದಾನ ಬಹಿಷ್ಕರಿಸದಂತೆ ಮನವಿ
Team Udayavani, Apr 13, 2019, 6:00 AM IST
ಉಡುಪಿ: ಉಡುಪಿಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಮತ್ತು ಶಾಸಕ ಕೆ ರಘುಪತಿ ಭಟ್ ಅವರ ನೇತೃತ್ವದಲ್ಲಿ ಬುಧವಾರ ನಡೆದ ಮರಳು ಹೋರಾಟ ಸಮಿತಿ ಸಭೆಯಲ್ಲಿ ಯಾವುದೇ ಕಾರಣಕ್ಕೂ ಮತದಾನ ಬಹಿಷ್ಕಾರ ಮಾಡದಂತೆ ಮನವರಿಕೆ ಮಾಡಿ ತಪ್ಪದೆ ಮತದಾನ ಮಾಡುವಂತೆ ಮನವಿ ಮಾಡಲಾಯಿತು.
ಮರಳು ಸಮಸ್ಯೆಯಿಂದ ಬಳಲುತ್ತಿದ್ದ ಜನರು ಯಾವುದೇ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ, ಚುನಾವಣೆ ಮುಗಿದ ತತ್‌ಕ್ಷಣ ಮರಳುಗಾರಿಕೆಗೆ ಅವಕಾಶ ನೀಡುವುದಾಗಿ ಸ್ವತಃ ಜಿಲ್ಲಾಧಿಕಾರಿಗಳು ಹೇಳಿದ್ದಾರೆ. ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದಿಂದ ಇದಕ್ಕೆ ಬೇಕಾದ ಅನುಮತಿ ಪಡೆಯಲಾಗಿದೆ. 7.80 ಲಕ್ಷ ಮೆಟ್ರಿಕ್ ಟನ್ ಮರಳು ವಿತರಣೆ ಮಾಡುವಂತದ್ದು ಬಾಕಿ ಇದೆ. ಸದ್ಯ ಚುನಾವಣಾ ನೀತಿ ಸಂಹಿತೆ ಇರುವುದರಿಂದ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲವಾಗಿದೆ. ಆದರೆ ಎ. 19ರಂದು ಇದಕ್ಕೆ ಸಂಬಂಧಿಸಿದಂತೆ ಮರಳುಗಾರಿಕೆಗೆ ಅವಕಾಶ ನೀಡದೆ ಇದ್ದಲ್ಲಿ ಮತ್ತೂಮ್ಮೆ ಪ್ರತಿಭಟನೆ ಮಾಡುವುದಾಗಿ ರಘುಪತಿ ಭಟ್ ಮತ್ತು ಶೋಭಾ ಕರಂದ್ಲಾಜೆ ಅವರ ಸಮ್ಮುಖದಲ್ಲಿ ನಿರ್ಧರಿಸಲಾಯಿತು.
ಜಿ.ಪಂ. ಅಧ್ಯಕ್ಷ ದಿನಕರ ಬಾಬು ಹಾಗೂ ಮರಳು ಹೋರಾಟ ಸಮಿತಿಯ ಪದಾಧಿಕಾರಿಗಳಾದ ಲೋಕೇಶ್ ಮೆಂಡನ್, ಶ್ಯಾಮ್ ಕುಂದರ್, ಭಾಸ್ಕರ ಶೆಟ್ಟಿ, ಪ್ರವೀಣ್ ಸುವರ್ಣ, ಸತ್ಯರಾಜ್ ಬಿರ್ತಿ, ಚಂದ್ರ ಪೂಜಾರಿ, ರಾಘವೇಂದ್ರ ಶೆಟ್ಟಿ ಹಾಗೂ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Toxic Movie: ಮದವೇರಿದ ಯಶ್ ಮಾದಕತೆ – ಬೋಲ್ಡ್ & ಹ್ಯಾಂಡ್ಸಮ್ ಲುಕ್‌ನಲ್ಲಿ ರಾಕಿಭಾಯ್
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Fraud; ಡಿಕೆಶಿ, ಡಿಕೆಸು ಸಹೋದರಿ ಎಂದು ಸ್ತ್ರೀರೋಗ ತಜ್ಞೆಗೂ 4.2 ಕೋಟಿ ವಂಚಿಸಿದ್ದ ಐಶ್ವರ್ಯ!
Bengaluru; ಮದ್ಯ ಕುಡಿಸಿ ಅತ್ಯಾಚಾ*ರ: ಬಿಜೆಪಿ ಮುಖಂಡ ಜಿಮ್ ಸೋಮನ ವಿರುದ್ಧ ಕೇಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.