ಮಂದಾರ್ತಿಯಲ್ಲಿ ಸ್ಯಾಟಲೈಟ್ ಕರೆ ? ಶ್ರೀಕೃಷ್ಣಮಠ ಪರಿಸರದಲ್ಲಿ ಮುಂದುವರಿದ ತಪಾಸಣೆ
Team Udayavani, Nov 28, 2022, 7:43 AM IST
ಉಡುಪಿ: ಶ್ರೀಕೃಷ್ಣ ಮಠದ ರಥಬೀದಿ ಪರಿಸರಕ್ಕೆ ಉಗ್ರ ಶಾರೀಕ್ ಬಂದಿರುವ ಬಗ್ಗೆ ಮಾಹಿತಿ ಮೇರೆಗೆ ಪೊಲೀಸರು ರವಿವಾರವೂ ರಥಬೀದಿ ಪರಿಸರದ ಅಂಗಡಿಗಳಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಸಮಗ್ರವಾಗಿ ಪರಿಶೀಲನೆ ನಡೆಸಿದರು.
ಇದೇ ವೇಳೆ ಮಂದಾರ್ತಿಯಲ್ಲಿ ಸ್ಯಾಟಲೈಟ್ ಕರೆ ಬಂದ ಕುರಿತೂ ಪರಿಶೀಲನೆ ಮುಂದುವರಿಯುತ್ತಿದೆ.
ಕೃಷ್ಣ ಮಠ ಪರಿಸರಕ್ಕೆ ಭೇಟಿ ನೀಡಿದ ಬಳಿಕ ಆತ ಕಾರ್ಕಳಕ್ಕೆ ತೆರಳಿದ್ದ ಎಂಬ ಮಾಹಿತಿ ಇದ್ದು, ಅಲ್ಲಿಂದ ಎಲ್ಲಿಗೆ ಹೋಗಿದ್ದ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
ಇಲ್ಲಿಗೆ ಭೇಟಿ ನೀಡಿದ ಸಂದರ್ಭ ಆತ ಯಾವ ಬಟ್ಟೆ ಧರಿಸಿದ್ದ ಎನ್ನುವ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.
ಆದರೆ ಸಿಸಿಟಿವಿ ದೃಶ್ಯಾವಳಿಗಳಲ್ಲಿ 15 ದಿನಗಳ ಮಾಹಿತಿಯಷ್ಟೇ ಇರುವುದು ತನಿಖೆಗೆ ಹಿನ್ನಡೆಯಾಗುತ್ತಿದೆ. ಕನಿಷ್ಠ ಒಂದು ತಿಂಗಳ ದೃಶ್ಯಾವಳಿಗಳಿರುವ ಸಿಸಿಟಿವಿಗಳು ಇವೆಯೇ ಎಂಬ ಬಗ್ಗೆ ಪೊಲೀಸರು ಶೋಧಕಾರ್ಯ ಮುಂದುವರಿಸಿದ್ದಾರೆ.
ಆಂತರಿಕ ಭದ್ರತಾ
ವಿಭಾಗದ ಪರಿಶೀಲನೆ
ಜಿಲ್ಲೆಯಲ್ಲಿ ತುರಾಯ ಸ್ಯಾಟಲೈಟ್ ಕರೆ ಬಂದಿರುವ ಬಗ್ಗೆ ರಾಜ್ಯ ಆಂತರಿಕ ಭದ್ರತಾ ವಿಭಾಗವು ಜಿಲ್ಲಾ ಆಂತರಿಕ ಭದ್ರತಾ ವಿಭಾಗಕ್ಕೆ ಮಾಹಿತಿ ನೀಡಿದೆ. ಮಂದಾರ್ತಿ ದೇವಸ್ಥಾನದಿಂದ ಸುಮಾರು ಎರಡು ಕಿ.ಮೀ. ದೂರದಲ್ಲಿರುವ ಸದ್ಗುರು ಗೇರುಬೀಜ ಕಾರ್ಖಾನೆಯ ಬಳಿ ತುರಾಯ ಸ್ಯಾಟಲೈಟ್ ಫೋನ್‌ನ ಸಿಗ್ನಲ್ ಲಭಿಸಿದ್ದು, ಈ ಬಗ್ಗೆ ಆಂತರಿಕ ಭದ್ರತಾ ವಿಭಾಗಕ್ಕೆ ನ. 9ರಂದು ಮಾಹಿತಿ ಲಭಿಸಿತ್ತು ಎನ್ನಲಾಗಿದೆ. ಇಲ್ಲಿಂದ ಕರೆ ಮಾಡಲಾಗಿದೆಯೇ ಎಂಬ ನಿಟ್ಟಿನಲ್ಲಿ ಭದ್ರತ ಪಡೆಗಳಿಂದ ತನಿಖೆ ಮುಂದುವರಿದಿದೆ.
ಹೆಚ್ಚುವರಿ ಭದ್ರತೆಗೆ ಚಿಂತನೆ
ವಾರಾಂತ್ಯ ಹಾಗೂ ಹಬ್ಬಗಳ ದಿನದಂದು ಶ್ರೀಕೃಷ್ಣ ಮಠದ ಪರಿಸರಕ್ಕೆ ಹೆಚ್ಚಿನ ಮಂದಿ ಭಕ್ತರು ಆಗಮಿಸುತ್ತಾರೆ. ಈ ವೇಳೆ ಪೊಲೀಸ್ ಭದ್ರತೆ ಇರುತ್ತದಾದರೂ ಮುಂದಿನ ದಿನಗಳಲ್ಲಿ ಮತ್ತಷ್ಟು ಭದ್ರತೆ ಹೆಚ್ಚಿಸುವ ಬಗ್ಗೆ ಸದ್ಯದಲ್ಲಿಯೇ ನಿರ್ಧರಿಸಲಾಗುವುದು ಎಂದು ಜಿಲ್ಲಾ ಎಸ್‌ಪಿ ತಿಳಿಸಿದ್ದಾರೆ. ಇದೇ ರೀತಿ ಪ್ರಮುಖ ದೇವಸ್ಥಾನಗಳ ಭದ್ರತೆಗೂ ಗಮನ ಹರಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.