ಟೌನ್ ಸೌ. ಸ. ಪ್ರಧಾನ ಕಚೇರಿ: ಸ್ವಾಮೀಜಿಗಳ ಭೇಟಿ
Team Udayavani, Mar 9, 2017, 3:04 PM IST
ಕುಂದಾಪುರ: ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮತ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಅವರು ಹಾಗೂ ಅವರ ಪಟ್ಟ ಶಿಷ್ಯ ಶ್ರೀಮತ್ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರು ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯ ಪ್ರಧಾನ ಕಚೇರಿಗೆ ಭೇಟಿ ನೀಡಿದರು.
ಸಹಕಾರಿಯ ಕಟ್ಟಡವನ್ನು ಹಾಗೂ ಸಹಕಾರಿಯ ವಿವಿಧ ಸೌಕರ್ಯಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಉಭಯ ಶ್ರೀ ಗಳವರು ಸಹಕಾರಿ ಪ್ರಗತಿಯನ್ನು ಶ್ಲಾಘಿಸಿದರು. ಸಹಕಾರಿಯ ಸಂಸ್ಥಾಪಕರ ಆಶಯದಂತೆ ಸಹಕಾರಿಯ ಸದಸ್ಯರಿಗೆ ಉತ್ತಮ ಸೇವೆಯನ್ನು ನೀಡುತ್ತಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಸೌಲಭ್ಯಗಳನ್ನು ನೀಡುವ ಮೂಲಕ ಸಹಕಾರಿಯ ಇನ್ನಷ್ಟು ಪ್ರಗತಿ ಹೊಂದುವಂತಾಗಲಿ. ಸಹಕಾರಿಯ ಕೀರ್ತಿ ಮತ್ತಷ್ಟು ಪ್ರಜ್ವಲಿಸಲಿ ಎಂದು ಹರಸಿದರು.
ಸಹಕಾರಿಯ ಅಧ್ಯಕ್ಷ ಎಚ್.ಗಣೇಶ ಕಾಮತ್ ಮತ್ತು ಉಪಾಧ್ಯಕ್ಷ ಜಿ. ವಿಶ್ವನಾಥ ಆಚಾರ್ಯ ಶ್ರೀಗಳವರನ್ನು ಸ್ವಾಗತಿಸಿದರು. ನಿರ್ದೇಶಕರಾದ ಜಿ. ವೆಂಕಟೇಶ ನಾಯಕ್, ಜಿ. ವೆಂಕಟೇಶ ಶೆಣೈ, ಬಿ. ರಾಘವೇಂದ್ರ ಪೈ, ಉದಯ ಶಂಕರ ರಾವ್, ನಾರಾಯಣ ಪೂಜಾರಿ, ಮಹಾಬಲ ಪೂಜಾರಿ, ವತ್ಸಲಾ ಎಸ್. ಕಾಮತ್, ಮಾಲಾ ಕೆ. ನಾಯಕ್, ಸಹಕಾರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಣೇಶ ನಾಯಕ್, ಮಾಜಿ ಮಂಡಲ ಪ್ರಧಾನ ಬಿ. ಸದಾನಂದ ಶೆಣೈ, ಸಹಕಾರಿಯ ಸಿಬಂದಿ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.