ಭೂಮಿಯನ್ನು ವಿನಾಶದಂಚಿನಿಂದ ಕಾಪಾಡಿ: ಪ್ರಭಾಕರ್ ಕುಲಾಲ್
Team Udayavani, Jul 18, 2017, 2:45 AM IST
ಮರವಂತೆ (ಉಪ್ಪುಂದ): ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಬೈಂದೂರು ತಾಲೂಕು, ಕಿರಿಮಂಜೇಶ್ವರ ವಲಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಉಳ್ಳೂರು-11, ಅರಣ್ಯ ಇಲಾಖೆ ಬೈಂದೂರು ಮತ್ತು ಹಾಲು ಉತ್ಪಾದಕರ ಸಹಕಾರಿ ಸಂಘ ಮೆಕೋಡು ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಮೆಕೋಡಿನಲ್ಲಿ ಕೆರೆ ಸುತ್ತು ಗಿಡ ನೆಡುವ ಕಾರ್ಯಕ್ರಮ ನಡೆಯಿತು.
ಬೈಂದೂರು ಅರಣ್ಯ ಅಧಿಕಾರಿ ಪ್ರಭಾಕರ್ ಕುಲಾಲ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜನರ ಮತ್ತು ಸರ್ಕಾರಗಳ ಮುಂದಾಲೋಚನೆಯ ಕೊರತೆ ಹಾಗೂ ಅಭಿವೃದ್ಧಿಯೆಡೆಗಿನ ನಿಷ್ಕಾಳಜಿಯ ಕಾರಣದಿಂದ ವಿಶ್ವದಲ್ಲಿ ಮಾನವನ ವಾಸಸ್ಥಾನವಾಗಿರು ಭೂಮಿ ವಿನಾಶದತ್ತ ಸಾಗುತ್ತಿದೆ. ಇದನ್ನು ತಡೆಯಲು ಪ್ರತಿ ವ್ಯಕ್ತಿಯೂ ಜಾಗೃತನಾಗಿ ತನ್ನ ನೆಲೆಯಲ್ಲಿ ಪರಿಸರ ರಕ್ಷಣೆಗೆ ಮುಂದಾಗಬೇಕು ಎಂದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯಾಧ್ಯಕ್ಷೆ ಸುಮಾ ಆಚಾರ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ ಬೈಂದೂರು ತಾಲೂಕು ಯೋಜನಾಧಿಕಾರಿ ಶಶಿರೇಖಾ, ಪ್ರವೀಣಚಂದ್ರ ಶೆಟ್ಟಿ ಮೆಕೋಡು, ಸತೀಶ್ ಶೆಟ್ಟಿ ಉಪ್ರಳ್ಳಿ, ಅಪ್ಪಣ್ಣ ಶೆಟ್ಟಿ, ಶ್ರೀನಿವಾಸ ಪೂಜಾರಿ, ಉದಯ್ ಪೂಜಾರಿ, ಸೇವಾಪ್ರತಿನಿಧಿ ಉಮೇಶ್ ಉಪಸ್ಥಿತರಿದ್ದರು. ಉಳ್ಳೂರು-11 ಒಕ್ಕೂಟದ ಸರ್ವಸದಸ್ಯರು ಭಾಗವಹಿಸಿದರು.
ವಲಯ ಮೇಲ್ವಿಚಾರಕ ಪ್ರವೀಣ ಸ್ವಾಗತಿಸಿ, ದಿನೇಶ ಆಚಾರ್ಯ ನಿರೂಪಿಸಿ, ಸೇವಾಪ್ರತಿನಿಧಿ ಸೀತಾರಾಮ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Bengaluru: ಶಾಲೆ ಮುಖ್ಯಸ್ಥನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ
Bengaluru: ಬೈಕ್ ಡಿಕ್ಕಿ: ರಾತ್ರಿಯಿಡೀ ರಸೇಲಿ ನರಳಿ ವ್ಯಕ್ತಿ ಸಾವು
Bengaluru: ಪಾದಚಾರಿ ಮಾರ್ಗದಲ್ಲಿ ಕಾರು ಚಾಲನೆ: ಕೇಸ್ ದಾಖಲು
Champions Trophy: ಮೋದಿ ಪಾಕ್ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.