ಎಸ್‌ಸಿಡಿಸಿಸಿ ಬ್ಯಾಂಕಿನ ಸಿಬಂದಿ ಸೇವೆಗೆ ಬದ್ಧರಾಗಬೇಕು: ಡಾ| ಎಂ.ಎನ್
Team Udayavani, Oct 29, 2017, 5:30 PM IST
ಮಂಗಳೂರು, ಅ. 28: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಈ ಯಶಸ್ಸಿನ ಹಿಂದೆ ಬ್ಯಾಂಕಿನ ಆಡಳಿತ ವರ್ಗ, ಸಿಬಂದಿಯ ಶ್ರಮದ ಜತೆಗೆ ಗ್ರಾಹಕರ ಕೊಡುಗೆಯೂ ಇದೆ ಎಂದು ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು. ಅವರು ಶನಿವಾರ ನಗರದ ಎಸ್‌ಸಿಡಿಸಿಸಿ ಬ್ಯಾಂಕಿನಲ್ಲಿ ನಡೆದ 102 ಶಾಖೆಗಳ ಶಾಖಾ ವ್ಯವಸ್ಥಾಪಕರು ಹಾಗೂ ಬ್ಯಾಂಕಿನ ಸಿಬಂದಿಯ ಸಭೆಯಲ್ಲಿ ಮಾತನಾಡಿದರು.
ಎಸ್‌ಸಿಡಿಸಿಸಿ ಬ್ಯಾಂಕ್ ಇಂದು ಸಮಗ್ರ ಅಭಿವೃದ್ಧಿ ಯೊಂದಿಗೆ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿದೆ. ಈ ಯಶಸ್ಸು ಹೀಗೆಯೇ ಮುಂದುವರಿಯಬೇಕು. ಬ್ಯಾಂಕ್ ಹಲವು ಸಮಸ್ಯೆಗಳನ್ನು ಎದುರಿಸಿದಾಗ ನಮ್ಮೊಂದಿಗೆ ಸಹಕರಿಸಿ ಅಭಿವೃದ್ಧಿಯ ಮುಂಚೂಣಿಗೆ ಸಾಗುವಲ್ಲಿ ಸಿಬಂದಿ ಪ್ರಮುಖ ಪಾತ್ರ ವಹಿಸಿ ದ್ದಾರೆ. ಅವರು ಇನ್ನಷ್ಟು ಗುಣಮಟ್ಟದ ಸೇವೆಯ ಮೂಲಕ ಬ್ಯಾಂಕಿನ ಏಳಿಗೆಗೆ ಬದ್ಧರಾಗಬೇಕು ಎಂದರು.
ಬ್ಯಾಂಕಿನ ಸಿಬಂದಿಯ ವೇತನ ಶ್ರೇಣಿಯನ್ನು ಪರಿಷ್ಕರಿಸಲಾಗಿದ್ದು, ಪಿಂಚಣಿ ಯೋಜನೆಯೂ ಚಾಲ್ತಿಯಲ್ಲಿದೆ. ಬ್ಯಾಂಕಿನ ನೌಕರರ ಕ್ಷೇಮಾಭಿವೃದ್ಧಿ ಯನ್ನು ಬ್ಯಾಂಕಿನ ಆಡಳಿತ ವರ್ಗ ಬಯಸಿದೆ ಎಂದು ಹೇಳಿದರು. ಸಭೆಯಲ್ಲಿ ಬ್ಯಾಂಕಿನ ನಿರ್ದೇಶಕರಾದ ಟಿ.ಜಿ. ರಾಜಾರಾಮ್ ಭಟ್, ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಮಾತನಾಡಿದರು. ಸಿಬಂದಿಯ ಪರವಾಗಿ ಬ್ಯಾಂಕಿನ ಉಪಮಹಾಪ್ರಬಂಧಕ ಕೃಷ್ಣ ಬಿಲ್ಲವ ಅವರು ಅನಿಸಿಕೆ ತಿಳಿಸಿದರು.
ಬ್ಯಾಂಕಿನ ನಿರ್ದೇಶಕರಾದ ಬಿ. ನಿರಂಜನ್, ಭಾಸ್ಕರ ಎಸ್. ಕೋಟ್ಯಾನ್, ಬಿ. ರಘುರಾಮ ಶೆಟ್ಟಿ, ಎಂ. ವಾದಿರಾಜ ಶೆಟ್ಟಿ, ಕೆ.ಎಸ್. ದೇವರಾಜ್, ಸದಾಶಿವ ಉಳ್ಳಾಲ, ರಾಜೇಶ್ ರಾವ್, ಎಸ್.ಬಿ. ಜಯರಾಮ್ ರೈ, ಸಹಕಾರ ಸಂಘಗಳ ಉಪನಿಂಬಂಧಕ ಬಿ.ಕೆ. ಸಲೀಂ, ಮಹಾಪ್ರಬಂಧಕ ರವೀಂದ್ರ ಬಿ., ಸಲಹೆಗಾರ ಹಿಮವಂತ್ ಗೋಪಾಲ್ ಉಪಸ್ಥಿತರಿದ್ದರು. ನಿರ್ದೇಶಕ ಶಶಿಕುಮಾರ್ ರೈ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.