ಸೆ. 10ಕ್ಕೆ ನರ್ಮ್ ಬಸ್‌ನಿಲ್ದಾಣಕ್ಕೆ ಗುದ್ದಲಿ ಪೂಜೆ


Team Udayavani, Sep 5, 2017, 8:10 AM IST

guddali-pooje.jpg

ಉಡುಪಿ: ಪ್ರಗತಿಪಥಪತ್ತ ದಾಪುಗಾಲಿಡುತ್ತಿರುವ ಉಡುಪಿ ಜಿಲ್ಲೆಗೆ ಇನ್ನೊಂದು ಗರಿ ಎನ್ನುವಂತೆ ಉಡುಪಿಯಲ್ಲಿ ವ್ಯವಸ್ಥಿತ ನರ್ಮ್ ಬಸ್‌ ನಿಲ್ದಾಣಕ್ಕೆ ಸೆ. 10ರಂದು ಪೂರ್ವಾಹ್ನ 11 ಗಂಟೆಗೆ ಗುದ್ದಲಿ ಪೂಜೆ ನೆರವೇರಲಿದೆ. ಸುಮಾರು 26 ಸಾವಿರ ಚದರ ಅಡಿ ವಿಸ್ತೀರ್ಣದ 3 ಅಂತಸ್ತಿನ ಸುಸಜ್ಜಿತ ಬಸ್‌ ನಿಲ್ದಾಣದ ಕಾಮಗಾರಿಗೆ ಚಾಲನೆ ದೊರಕಲಿದ್ದು, ಸುಮಾರು 12 ತಿಂಗಳೊಳಗೆ ನರ್ಮ್ ಬಸ್‌ ಪ್ರಯಾಣಿಕರಿಗೆ ಈ ಸೌಲಭ್ಯ ದೊರೆಯಲಿದೆ ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದರು.

ಉಡುಪಿ-ತೆಂಕಪೇಟೆಯ ಶ್ರೀ ಲಕ್ಷ್ಮೀವೆಂಕಟೇಶ ದೇವಸ್ಥಾನದ ಶ್ರೀ ಭುವನೇಂದ್ರ ಮಂಟಪದಲ್ಲಿ ಸೋಮವಾರ ನಡೆದ ಉಡುಪಿ ನಗರಸಭೆ ವ್ಯಾಪ್ತಿಯ “ತೆಂಕಪೇಟೆ ವಾರ್ಡ್‌ ಮಟ್ಟದ ಜನಸಂಪರ್ಕ ಸಭೆ’ ಅಧ್ಯಕ್ಷತೆ ವಹಿಸಿದ್ದ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜನಸಂಪರ್ಕ ಸಭೆ
ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ನಿರಂತರ ನಡೆಯುತ್ತಿರುವ ವಿಶಿಷ್ಟ ಪರಿಕಲ್ಪನೆಯ ಈ “ಜನ ಸಂಪರ್ಕ ಸಭೆ’ ದೇಶದಲ್ಲೇ ವಿನೂತನವಾದ ಕಾರ್ಯಕ್ರಮವಾಗಿ ಮೂಡಿಬರುತ್ತಿರುವುದಲ್ಲದೆ ಎಲ್ಲೆಡೆ ಯಿಂದಲೂ ಪ್ರಶಂಸನೀಯ ನುಡಿ ಕೇಳಿ ಬರುತ್ತಿರು ವುದು ಸಾರ್ಥಕತೆಯನ್ನು ಸೂಚಿಸುತ್ತದೆ. ಜನತೆಗೆ ಪೂರ್ವಭಾವಿಯಾಗಿ ತಿಳಿಸಿ ನಡೆಸಲ್ಪಡುವ ಈ ಸಭೆಯಲ್ಲಿ ಸ್ವತಃ ಜನರಿಂದಲೇ ಅವರ ಸಮಸ್ಯೆಗಳನ್ನು ಆಲಿಸಿ ಅದಕ್ಕೆ ತಕ್ಕುದಾದ ಪರಿಹಾರ ನೀಡುವುದು ಅತ್ಯಂತ ಸಂತೋಷ ಕೊಡುತ್ತದೆ ಎಂದರು. 

ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ. ನರಸಿಂಹಮೂರ್ತಿ, ಉಡುಪಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸತೀಶ್‌ ಅಮೀನ್‌ ಪಡುಕೆರೆ, ತೆಂಕಪೇಟೆ ವಾರ್ಡ್‌ ಸದಸ್ಯ ಶಾಂತಾರಾಮ ಸಾಲ್ವಂಕರ್‌, ನಗರಸಭೆ ಸದಸ್ಯ ರಾದ ರಮೇಶ್‌ ಕಾಂಚನ್‌, ನಾರಾಯಣ ಕುಂದರ್‌, ಹಸನ್‌ ಸಾಹೇಬ್‌, ಚಂದ್ರಕಾಂತ ನಾಯಕ್‌, ಜನಾರ್ದನ್‌ ಭಂಡಾರ್ಕರ್‌, ಗಣೇಶ್‌ ನೇರ್ಗಿ, ಕೆಎಸ್‌ಆರ್‌ಟಿಸಿ ಡೆಪ್ಯುಟಿ ಕಮೀಷನರ್‌ ದೀಪಕ್‌, ಸರ್ಕಲ್‌ ಇನ್ಸ್‌ಪೆಕ್ಟರ್‌ ನವೀನ್‌ ಚಂದ್ರ ಜೋಗಿ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

ನಗರಸಭೆ ಪೌರಾಯುಕ್ತ ಡಿ. ಮಂಜುನಾಥಯ್ಯ ಸ್ವಾಗತಿಸಿ, ಪ್ರಸ್ತಾವನೆಗೈದರು. ಸುಧಾಕರ ಪೆರಂಪಳ್ಳಿ ಕಾರ್ಯಕ್ರಮ ನಿರೂಪಿಸಿ, ತಹಶೀಲ್ದಾರ್‌ ಪ್ರದೀಪ್‌ ಕುರುಡೇಕರ್‌ ವಂದಿಸಿದರು. 

ಮೂರು ಜಿಲ್ಲೆಗಳಿಗೆ ಪ್ರತ್ಯೇಕ ಮರಳು ನೀತಿ ಜಾರಿ ಸಿಆರ್‌ಝಡ್‌ ಭಾಗದಲ್ಲಿ ಈಗಾಗಲೇ ಮರಳು ತೆಗೆಯಲು ಚಾಲನೆ ದೊರಕಿದ್ದು, ಇದೀಗ ಸೋಮ ವಾರ ನಡೆದ ರಾಜ್ಯದ ಕ್ಯಾಬಿನೆಟ್‌ ಸಭೆಯಲ್ಲಿ ನಾನ್‌ ಸಿಆರ್‌ಝಡ್‌ ಭಾಗದ ಮರಳುಗಾರಿಕೆಗಾಗಿ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಈ ಮೂರು ಜಿಲ್ಲೆಗಳಿಗೆ ಪ್ರತ್ಯೇಕ ಮರಳು ನೀತಿ ಜಾರಿಗೊಳಿಸಲಾಗಿದೆ. ಈಗ ಕರಾವಳಿಯ ಮೂರು ಜಿಲ್ಲೆಗಳಲ್ಲಿದ್ದ ದೊಡ್ಡ ಸಮಸ್ಯೆಯಾದ ಮರಳು ನೀತಿಗೆ ಸರಕಾರ ಸೂಕ್ತ ಪರಿಹಾರ ಒದಗಿಸಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಈ ಮೂರು ಜಿಲ್ಲೆಗಳಲ್ಲಿ ತೆಗೆಯಲ್ಪಡುವ ಮರಳು ಬೇರೆ ಜಿಲ್ಲೆಗಳಿಗೆ ಸರಬರಾಜು ಮಾಡಿದರೆ ದರ ಹೆಚ್ಚಳವಾಗುವುದಲ್ಲದೆ ಮರಳು ಅಭಾವ ತಲೆದೋರಲಿದೆ. ಇದಕ್ಕಾಗಿ ಬೇರೆ ಜಿಲ್ಲೆಗಳಿಗೆ ಮರಳು ಸರಬರಾಜು ಮಾಡುವುದನ್ನು ಸ್ಥಗಿತಗೊಳಿಸಲಾಗಿದೆ ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ತಿಳಿಸಿದರು. 

ಟಾಪ್ ನ್ಯೂಸ್

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

KAUP: ಸಂವಿಧಾನ ಉಳಿಸಿ ಬೃಹತ್‌ ಜಾಥಾ ಮತ್ತು ಸಾರ್ವಜನಿಕ ಸಭೆ

KAUP: ಧರ್ಮಗ್ರಂಥಗಳಷ್ಟೇ ಸಂವಿಧಾನವೂ ಪವಿತ್ರ: ನಿಕೇತ್‌ ರಾಜ್‌ ಮೌರ್ಯ

man-a

Udupi: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ban

Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.