ಮಾ.4-23: ದ್ವಿತೀಯ ಪಿಯುಸಿ ಪರೀಕ್ಷೆ; ಉಭಯ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳು ಸನ್ನದ್ಧ
Team Udayavani, Mar 3, 2020, 6:01 AM IST
ಉಡುಪಿ/ ಮಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಮಾ.4ರಿಂದ ಆರಂಭಗೊಂಡು 23ರ ವರೆಗೆ ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ನಡೆಯಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳು ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದಾರೆ.
ಪರೀಕ್ಷಾ ಸಮಯದಲ್ಲಿ ನಡೆಯುವಂತಹ ಅಕ್ರಮ ಗಳನ್ನು ತಡೆಯುವ ಉದ್ದೇಶದಿಂದ ಪ್ರಶ್ನೆ ಪತ್ರಿಕೆ ಇಡಲಾಗುವ ಜಿಲ್ಲಾ ಖಜಾನೆ ಸೇರಿದಂತೆ ಉಭಯ ಜಿಲ್ಲೆಗಳ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ 27 ಮತ್ತು ದ.ಕ. ಜಿಲ್ಲೆಯಲ್ಲಿ 51 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಉಡುಪಿಯಲ್ಲಿ 15,100 ಮತ್ತು ದ.ಕ.ದಲ್ಲಿ 34,346 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಎಂಟು ತಂಡ
ಪ್ರಶ್ನೆಪತ್ರಿಕೆ ವಿತರಿಸಲು, ಜಿಲ್ಲೆಯ ತಹಶೀಲ್ದಾರ್‌ಗಳು, ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ 8 ತಂಡಗಳನ್ನು ಉಡುಪಿ ಜಿಲ್ಲೆಯಲ್ಲಿ ರಚಿಸಲಾಗಿದೆ. ಪ್ರಶ್ನೆಪತ್ರಿಕೆ ಸಾಗಿಸುವ ಎಲ್ಲ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗಿದ್ದು, ಸೂಕ್ತ ಪೊಲೀಸ್ ಭದ್ರತೆಯೊಂದಿಗೆ ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಅವಧಿಯೊಳಗೆ ಪ್ರಶ್ನೆ ಪತ್ರಿಕೆ ತಲುಪಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ವೇಳಾಪಟ್ಟಿ ನಿಗದಿ
ಪ್ರಶ್ನೆಪತ್ರಿಕೆಗಳನ್ನು ಜಿಲ್ಲಾ ಖಜಾನೆಯಲ್ಲಿ ಮಾತ್ರ ಠೇವಣಿ ಮಾಡಲಾಗುವುದರಿಂದ ಪ್ರಶ್ನೆಪತ್ರಿಕೆ ವಿತರಣೆಗೆ ನಿಯೋಜಿಸಲಾದ ಆಯಾಯ ತಾಲೂಕುಗಳ ತಹಶೀಲ್ದಾರ್‌ಗಳು, ಶಿಕ್ಷಣ ಸಂಯೋಜಕರು, ರೂಟ್ ಆಫೀಸರ್‌ಗಳು, ಪ್ರಶ್ನೆಪತ್ರಿಕೆ ಸಾಗಾಟ ವಾಹನಗಳು, ಪೊಲೀಸ್ ಸಿಬಂದಿ ಕ್ಲಪ್ತ ಸಮಯಕ್ಕೆ ಜಿಲ್ಲಾ ಖಜಾನೆಯಲ್ಲಿ ಹಾಜರಿದ್ದು, ಪ್ರಶ್ನೆಪತ್ರಿಕೆಗಳನ್ನು ಪಡೆದು ವಿತರಿಸಲಿದ್ದಾರೆ. ಎಲ್ಲ ತಂಡಗಳಿಗೂ ಆಗಮನ ಮತ್ತು ನಿರ್ಗಮನ ಸಮಯಗಳ ವೇಳಾಪಟ್ಟಿಯನ್ನು ಈಗಾಗಲೇ ನಿಗದಿಪಡಿಸಲಾಗಿದೆ.
ಪ್ರಾಂಶುಪಾಲರ ನೇತೃತ್ವದಲ್ಲಿ ಜಾಗೃತ ತಂಡ
ಜಿಲ್ಲಾ ಖಜಾನೆಯಲ್ಲಿ ಬಯೋಮೆಟ್ರಿಕ್ ಹಾಜರಾತಿ ಮತ್ತು ಬಾರ್‌ಕೋಡ್ ರೀಡರ್‌ಗಳನ್ನು ಅಳವಡಿಸಲಾಗುತ್ತದೆ. ಪರೀಕ್ಷೆ ಮುಗಿದ ಬಳಿಕ ಉತ್ತರ ಪತ್ರಿಕೆಗಳನ್ನು ಸುರಕ್ಷಿತವಾಗಿ ಸಾಗಿಸಲು ಅಂಚೆ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಲು ಹಿರಿಯ ಪ್ರಾಂಶುಪಾಲರ ನೇತೃತ್ವದಲ್ಲಿ ಜಾಗೃತ ತಂಡಗಳನ್ನು ನೇಮಿಸಲಾಗಿದೆ.
24*7 ಸಿಸಿಟಿವಿ ಕಣ್ಗಾವಲು
ಪ್ರಶ್ನೆಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಂದ ತೆಗೆಯುವುದನ್ನು ಮತ್ತು ವಿತರಿಸುವುದನ್ನು ಪರಿಶೀಲಿಸಲು ಜಿಲ್ಲಾ ಖಜಾನೆಯ ಒಳಗೆ ಮತ್ತು ಹೊರಗೆ 24ಗಿ7 ಸಿಸಿಟಿವಿ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಇದನ್ನು ವೀಕ್ಷಿಸಲು ಪರೀಕ್ಷೆಗಳು ಮುಕ್ತಾಯವಾಗುವ ವರೆಗೆ ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿಗಳಲ್ಲಿ 24ಗಿ7 ಮತ್ತು ಬೆಂಗಳೂರಿನ ಪಿಯು ಬೋರ್ಡ್‌ನಲ್ಲಿ ಕಂಟ್ರೋಲ್ ರೂಂ ತೆರೆಯಲಾಗುತ್ತದೆ.
ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಎದುರಿಸಲು ಎಲ್ಲ ರೀತಿಯ ಸಿದ್ಧತೆಗಳು ಪೂರ್ಣಗೊಂಡಿವೆ. ಇಂದು ಪ್ರಶ್ನೆಪತ್ರಿಕೆ ಪಾಲಕರ ಸಭೆ ನಡೆಯಲಿದೆ. ಪರೀಕ್ಷಾ ಕೊಠಡಿಯೊಳಗೆ ಮೊಬೈಲ್ ಫೋನ್ ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ. ಮೇಲ್ವಿಚಾರಕರು ಸಾಮಾನ್ಯ ಫೋನ್‌ಗಳನ್ನಷ್ಟೇ ಬಳಸಬಹುದು. ವಿದ್ಯಾರ್ಥಿಗಳು ಎಲೆಕ್ಟ್ರಾನಿಕ್ ವಾಚ್, ಎಲೆಕ್ಟ್ರಾನಿಕ್ ಕ್ಯಾಲ್ಕುಲೇಟರ್‌ಗಳನ್ನೂ ಒಯ್ಯುವಂತಿಲ್ಲ.
-ಭಗವಂತ ಕಟ್ಟೆಮನೆ ಉಪನಿರ್ದೇಶಕರು, ಉಡುಪಿ ಜಿಲ್ಲಾ ಪ.ಪೂ. ಶಿಕ್ಷಣ ಇಲಾಖೆ
ದ್ವಿತೀಯ ಪಿಯುಸಿ ಪರೀಕ್ಷೆಗೆ ಸಂಬಂಧಿಸಿದಂತೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ. ಜಿಲ್ಲೆಯ 51 ಪರೀಕ್ಷಾ ಕೇಂದ್ರಗಳಲ್ಲಿಯೂ ಸಿಸಿಟಿವಿ ಕಣ್ಗಾವಲಿನಲ್ಲಿಯೇ ಪರೀಕ್ಷೆ ನಡೆಯಲಿದೆ. ಅಕ್ರಮಗಳು ಘಟಿಸದಂತೆ ವಾಹನಗಳಿಗೆ ಜಿಪಿಎಸ್ ಅಳವಡಿಕೆ, ಸಾಕಷ್ಟು ಸಿಸಿಟಿವಿ ವ್ಯವಸ್ಥೆ ಮಾಡಲಾಗಿದೆ.
-ವಿಷ್ಣುಮೂರ್ತಿ, ಉಪ ನಿರ್ದೇಶಕರು ದ.ಕ. ಜಿಲ್ಲಾ ಪ.ಪೂ. ಶಿಕ್ಷಣ ಇಲಾಖೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್‌ಸ್ವೀಪ್ ಮಾಡಿದ ವನಿತೆಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.