ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಗ್ರಾ.ಪಂ. ನೌಕರರ ಮುಷ್ಕರ
Team Udayavani, Mar 21, 2017, 12:36 PM IST
ಉಡುಪಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾ.ಪಂ. ನೌಕರರು ಸೋಮವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದು, ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರು ಪ್ರತಿಭಟನ ಸ್ಥಳಕ್ಕೆ ಭೇಟಿ ಬೇಡಿಕೆ ಈಡೇರಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು.
ಗ್ರಾ.ಪಂ. ನೌಕರರ ಭಡ್ತಿಗೆ ಸಂಬಂಧಿಸಿದಂತೆ ಶೀಘ್ರ ಅಗತ್ಯ ಕ್ರಮ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಉಡುಪಿ ಜಿಲ್ಲಾ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳ ಸಂಘ, ಪಂ. ಕಾರ್ಯದರ್ಶಿಗಳ ಸಂಘ, ದ್ವಿತೀಯ ದರ್ಜೆ ಲೆಕ್ಕಸಹಾಯಕರ ಸಂಘ ಹಾಗೂ ಪಂಚಾಯತ್ ನೌಕರರ ಸಂಘದ ಸದಸ್ಯರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಅನಗತ್ಯ ಒತ್ತಡ
ಜಿಲ್ಲಾ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳ ಸಂಘದ ಅಧ್ಯಕ್ಷ ಸಿದ್ದೇಶ್ ಮಾತನಾಡಿ, ವಸತಿ ಯೋಜನೆ ಸೇರಿದಂತೆ ಸರಕಾರದ ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಅನಗತ್ಯ ಒತ್ತಡ ಹೇರಲಾಗುತ್ತಿದೆ. ಅಲ್ಲದೆ ತಾಂತ್ರಿಕವಾಗಿ ಸಮರ್ಪಕವಾಗಿಲ್ಲದ ಹಲವು ಸಮಸ್ಯೆಗಳಿರುವ ಆ್ಯಪ್‌ಗ್ಳನ್ನು ಅಳವಡಿಸಿ ಗುರಿ ನಿಗದಿಪಡಿಸಿ ಒತ್ತಡ ಹಾಕಲಾಗುತ್ತಿದೆ. ಇದರಿಂದ ಪಂಚಾಯತ್‌ನ ಇತರ ಕಾರ್ಯಗಳಿಗೆ ಅಪಾರ ತೊಡಕಾಗುತ್ತಿದೆ ಎಂದು ದೂರಿದರು.
ಅನಗತ್ಯ ತಂತ್ರಾಂಶ (ಆ್ಯಪ್)ಗಳ ಮೂಲಕ ಜಿಪಿಎಸ್ ಅಳವಡಿಸುವ ಪ್ರಕ್ರಿಯೆಯಿಂದಾಗಿ ಅಭಿವೃದ್ಧಿ ಕೆಲಸಗಳಿಗೆ ಹಿನ್ನಡೆಯಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು, ಸರಳ, ಉಪಯೋಗಿಸಲು ಪೂರಕ, ಅಧಿಕೃತವಾದ ಒಂದೇ ತಂತ್ರಾಂಶದಲ್ಲಿ ಕಾರ್ಯನಿರ್ವಹಿಸುವ ವ್ಯವಸ್ಥೆಯನ್ನು ಅಳವಡಿಸುವ ಅಗತ್ಯವಿದೆ. ಬಾಪೂಜಿ ಸೇವಾ ಕೇಂದ್ರಗಳಿಗೆ ಮಾನವ ಸಂಪದ ಹಾಗೂ ತಾಂತ್ರಿಕ ಪರಿಕರಗಳನ್ನು ಶೀಘ್ರ ಒದಗಿಸಬೇಕು. ಪಂಚಾಯತ್ ಸಿಬಂದಿಯ ಭಡ್ತಿ ಪ್ರಕ್ರಿಯೆಗೆ ಶೀಘ್ರ ಕ್ರಮ ಕೈಗೊಳ್ಳಬೇಕು. ಪಿ.ಎಫ್. ಮತ್ತು ಇಎಸ್‌ಐ ಮತ್ತಿತರ ಸೌಲಭ್ಯಗಳನ್ನು ನಿರ್ದಿಷ್ಟ ಕಾಲಮಿತಿಯೊಳಗೆ ನೀಡಬೇಕು ಎಂದು ಅವರು ಒತ್ತಾಯಿಸಿದರು.
ಪಂಚಾಯತ್ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾರಾಯಣ ಬೀಜಾಡಿ ಮಾತನಾಡಿ, ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸುತ್ತಿರುವ ಎಲ್ಲ ಗ್ರಾ.ಪಂ. ನೌಕರರನ್ನು ಸರಕಾರಿ ನೌಕರರನ್ನಾಗಿ ಪರಿಗಣಿಸಬೇಕು. ಪಂ. ನೌಕರರ ವೇತನ ಭತ್ತೆ ಮತ್ತು ಇನ್ನಿತರ ಸೌಲಭ್ಯಗಳನ್ನು ಸಕಾಲ ಯೋಜನೆಯಡಿ ನಿಗದಿತ ಕಾಲಾವಧಿಯೊಳಗೆ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪಂ. ಅಭಿವೃದ್ಧಿ ಅಧಿಕಾರಿಗಳ ಸಂಘದ ಕಾರ್ಯದರ್ಶಿ ಮಹೇಶ್, ಮಹಿಳಾ ಉಪಾಧ್ಯಕ್ಷೆ ಪ್ರಮೀಳಾ ನಾಯಕ್, ದ್ವಿತೀಯ ದರ್ಜೆ ಲೆಕ್ಕಸಹಾಯಕರ ಸಂಘದ ಅಧ್ಯಕ್ಷ ಶಿವರಾಜ್, ಕಾರ್ಯದರ್ಶಿ ಬೆಟ್ಟಸ್ವಾಮಿ, ಪಂ. ನೌಕರರ ಸಂಘದ ಕಾರ್ಯದರ್ಶಿ ನರೇಶ್ ನಾಯಕ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.