Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

ಬ್ರಹ್ಮಾವರದ ಕಾಂಗ್ರೆಸ್‌ ಸಭೆ

Team Udayavani, Apr 17, 2024, 12:45 AM IST

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

ಕೋಟ/ಬ್ರಹ್ಮಾವರ: ಉತ್ತಮ ಜನಪ್ರತಿಯಾಗಬೇಕಾದರೆ ತಾನು ಈ ಹಿಂದೆ ಮಾಡಿದ ಅಭಿವೃದ್ಧಿ ಕಾರ್ಯಗಳಿಗಿಂತ ಮುಂದೆ ಕ್ಷೇತ್ರಕ್ಕಾಗಿ ಎನು ಮಾಡಬೇಕು ಎನ್ನುವ ಸ್ಪಷ್ಟ ಪರಿಕಲ್ಪನೆ ಬೇಕು. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಪ್ರತಿಯೊಂದು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಿಕ್ಷಣ, ಪ್ರವಾಸೋದ್ಯಮ, ಆರೋಗ್ಯ ಕ್ಷೇತ್ರವನ್ನು ಪ್ರಾತಿನಿಧ್ಯವಾಗಿರಿಸಿಕೊಂಡು, ಜತೆಯಲ್ಲಿ ಇನ್ನಿತರ ಏನೇನೂ ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕು ಎನ್ನುವ ಪರಿಕಲ್ಪನೆ ಒಳಗೊಂಡ ಪ್ರತ್ಯೇಕ ಅಭಿವೃದ್ಧಿ ಪ್ರಣಾಳಿಕೆ ಸಿದ್ಧಪಡಿಸಿದ್ದು ಶೀಘ್ರವಾಗಿ ಮತದಾರರ ಮನೆ-ಮನೆಗೆ ತಲುಪಿಸುವ ಕಾರ್ಯ ಮಾಡಲಾಗುವುದು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೆ. ಜಯಪ್ರಕಾಶ್‌ ಹೆಗ್ಡೆ ತಿಳಿಸಿದರು.

ಅವರು ಮಂಗಳವಾರ ಬ್ರಹ್ಮಾವರ ದಲ್ಲಿ ನಡೆದ ಕಾಲ್ನಡಿಗೆ ಜಾಥಾ ಹಾಗೂ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು.

ಚಿಂತನೆಗಳಿಲ್ಲದವ ನಾಯಕನಾಗಲಾರ ಯಾವುದೇ ಒಬ್ಬ ಉತ್ತಮ ನಾಯಕನಿಗೆ ಅಭಿವೃದ್ಧಿಯ ಚಿಂತನೆಗಳಿ ರಬೇಕು. ಅಧಿ ಕಾರವಿದ್ದಾಗ ಏನಾದರೂ ಮಾಡಬೇಕು ಎನ್ನುವ ದೂರದೃಷ್ಟಿ ಇರಬೇಕು. ಇವೆರಡೂ ಇಲ್ಲದವ ಉತ್ತಮ ನಾಯಕನಾಗಲಾರ. ಸ್ವಂತ ವರ್ಚಸ್ಸು ಬಗ್ಗೆ ನಂಬಿಕೆ ಇಲ್ಲದೆ ಅನಗತ್ಯ ವಿಚಾರಗಳನ್ನು ಮುಂದಿಟ್ಟು ಕೊಂಡು, ದಿಲ್ಲಿಯ ನಾಯಕರನ್ನು ಮುಂದಿಟ್ಟುಕೊಂಡು ಮತ ಕೇಳುತ್ತಾರೆ. ಇಂಥವರಿಗೆ ಮತದಾರರು ಬೆಲೆ ನೀಡುವುದಿಲ್ಲ ಎಂದರು.

ಬಿಜೆಪಿ ಅಭ್ಯರ್ಥಿಗೆ ಹಾಲಿ
ಸಂಸದರೇ ಮಾದರಿ
ನನಗೆ ಹೊಸ ಕನಸುಗಳು, ಅಭಿವೃದ್ಧಿ ಕಲ್ಪನೆಗಳು ಮಾದರಿಯಾದರೆ ಬಿಜೆಪಿ ಅಭ್ಯರ್ಥಿ ತನಗೆ ಹಾಲಿ ಸಂಸದರೇ ಮಾದರಿ ಎಂದು ಹೇಳಿದ್ದಾರೆ. ಇದರರ್ಥ ಚುನಾವಣೆಯಲ್ಲಿ ಗೆದ್ದರೆ ಅಭಿವೃದ್ಧಿ ಮಾಡದಿರುವುದು, ಕ್ಷೇತ್ರದ ಕಡೆ ಮುಖ ಹಾಕದಿರುವುದು ಎನ್ನುವುದಾಗಿದೆ. ಇಂತಹ ಜನಪ್ರತಿನಿಧಿಗಳು ನಿಮಗೆ ಬೇಕಾ ಎಂದು ಜನರೇ ನಿರ್ಧಾರ ಮಾಡಿ ಎಂದು ಹೆಗ್ಡೆ ತಿಳಿಸಿದರು.

ಪ್ರಮುಖ 2 ಖಾಸಗಿ
ಮಸೂದೆ ಮಂಡನೆ
ಶಿಕ್ಷಕರ ಕ್ಷೇತ್ರದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮತದಾನದ ಹಕ್ಕು ಇರಲಿಲ್ಲ. ಹೀಗಾಗಿ ಅವರಿಗೆ ಮತದಾನದ ಅವಕಾಶ ಸಿಗಬೇಕು ಎನ್ನುವ ಬಿಲ್‌ ಮತ್ತು ವ್ಯಕ್ತಿಯೋರ್ವನು ಯಾವುದೇ ಊರಿನಲ್ಲಿದ್ದರೂ ತಾನು ಇರುವಲ್ಲಿಂದ ತನ್ನ ಮತಕ್ಷೇತ್ರಕ್ಕೆ ಮತದಾನ ಮಾಡು ವಂತೆ ವ್ಯವಸ್ಥೆ ಮಾಡಬೇಕು ಎನ್ನುವ ಖಾಸಗಿ ಬಿಲ್‌ ಮಂಡಿಸಿದ್ದೆ. ಅದು ಕಾರ್ಯರೂಪಕ್ಕೆ ಬರಲು ಹೋರಾಟ ಅಗತ್ಯವಿದೆ ಎಂದು ಹೆಗ್ಡೆ ತಿಳಿಸಿದರು.

ಕಾರ್ಯಗತ ಮಾಡುವ ಶಕ್ತಿ ಬೇಕು
ಯಾವುದೇ ಅಭಿವೃದ್ಧಿ ಕಾಮಗಾರಿ ಯನ್ನು ಮಂಜೂರಾದ ಮೇಲೆ ಅದನ್ನು ಕ್ಷಿಪ್ರವಾಗಿ ಕಾರ್ಯಗತಗೊಳಿಸುವ ಜವಾಬ್ದಾರಿ ಇರುತ್ತದೆ. ನಾನು ಸಂಸದನಾಗಿದ್ದಾಗ ಮೂರು ರಾಷ್ಟ್ರೀಯ ಹೆದ್ದಾರಿ ಮಂಜೂರು ಮಾಡಿದ್ದೆ. ಆದರೆ ದುರದೃಷ್ಟವಶಾತ್‌ ಹತ್ತು ವರ್ಷ ಕಳೆದರೂ ಆ ಕಾಮಗಾರಿ ಸಂಪೂರ್ಣವಾಗಿಲ್ಲ, ಜತೆಗೆ ಕಲ್ಯಾಣಪುರ ಬಳಿ ರಾಷ್ಟ್ರೀಯ ಹೆದ್ದಾರಿ ದುರವಸ್ಥೆ ಈಗಿನ ಸಂಸದರ ಕಾರ್ಯ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಇಂತಹ ತಪ್ಪು ಮತ್ತೆ ಮಾಡಬೇಡಿ ಎಂದರು.

ಸಭೆಯಲ್ಲಿ ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ದಿನಕರ ಹೇರೂರು, ಕಾಂಗ್ರೆಸ್‌ ಮುಖಂಡರಾದ ಭುಜಂಗ ಶೆಟ್ಟಿ, ಮೈರ್ಮಾಡಿ ಅಶೋಕ್‌ ಶೆಟ್ಟಿ, ಡಾ| ಸುನೀತಾ ಶೆಟ್ಟಿ, ವೆರೋನಿಕಾ ಕರ್ನೇಲಿಯೋ, ಹರೀಶ್‌ ಕಿಣಿ, ಪ್ರಖ್ಯಾತ್‌ ಶೆಟ್ಟಿ ಮೊದಲಾದವರಿದ್ದರು.

ಬೃಹತ್‌ ಕಾಲ್ನಡಿಗೆ ಜಾಥಾ
ಈ ಸಂದರ್ಭ ಬ್ರಹ್ಮಾವರ ಆಕಾಶವಾಣಿ ಸರ್ಕಲ್‌ನಿಂದ ಒಳಪೇಟೆಯ ಮೂಲಕ ಪೇತ್ರಿ ಸರ್ಕಲ್‌ ತನಕ ಕಾಲ್ನಡಿಗೆ ಜಾಥಾದ ಮೂಲಕ ಜಯಪ್ರಕಾಶ್‌ ಹೆಗ್ಡೆ ಮತಯಾಚಿಸಿದರು. ನೂರಾರು ಮಂದಿ ಕಾರ್ಯಕರ್ತರು, ಅಭಿಮಾನಿಗಳು ಅವರೊಂದಿಗೆ ಹೆಜ್ಜೆ ಹಾಕಿದರು.

ಜಯಪ್ರಕಾಶ್‌ ಹೆಗ್ಡೆ ಕೊಡುಗೆ ಶಾಶ್ವತ
ಕಾಂಗ್ರೆಸ್‌ ಮುಖಂಡ ಪ್ರಸಾದ್‌ ರಾಜ್‌ ಕಾಂಚನ್‌ ಮಾತನಾಡಿ, ಸರಕಾರದ ಬೊಕ್ಕಸದಲ್ಲಿದ್ದ ಹಣವನ್ನು ದೇಗುಲ ಇತ್ಯಾದಿಗಳಿಗೆ ಹಂಚಿ ಅಭಿವೃದ್ಧಿ ಮಾಡಿದ್ದೇನೆ ಎನ್ನುವುದು ಅಭಿವೃದ್ಧಿಯಾಗಲಾರದು. ಬ್ರಹ್ಮಾವರ ವಿಧಾನಸಭಾ ಕ್ಷೇತ್ರವಿರುವಾಗ ಜಯಪ್ರಕಾಶ್‌ ಹೆಗ್ಡೆಯವರು ಕೈಗೊಂಡ ರಸ್ತೆ, ಸೇತುವೆ ಕಾಮಗಾರಿಗಳು, ಮೀನುಗಾರಿಕೆ ಗೆ ನೀಡಿದ ಶಾಶ್ವತ ಯೋಜನೆಗಳು, ಹೊಸ ಜಿಲ್ಲೆ ನಿರ್ಮಾಣ ನಿಜವಾದ ಅಭಿವೃದ್ಧಿ ಹಾಗೂ ಜನಮಾನಸದಲ್ಲಿ ನಿರಂತರವಾಗಿ ಉಳಿಯುವ ಕೊಡುಗೆಗಳಾಗಿವೆ. ಇಂತಹ ಹತ್ತು ಹಲವಾರು ಯೋಜನೆಗಳು ಮತ್ತೆ ಆಗಬೇಕಾದರೆ ಹೆಗ್ಡೆ ಗೆಲ್ಲಬೇಕು ಎಂದರು.

ಟಾಪ್ ನ್ಯೂಸ್

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

8

Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ

5-thekkatte

Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

1-shirva

Shirva: ಏಷ್ಯನ್‌ ಜೂನಿಯರ್‌ ವೇಟ್‌ಲಿಫ್ಟಿಂಗ್‌ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್‌.ಕೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.