ಉಡುಪಿ: ಅಂಬಲಪಾಡಿ ಹೆದ್ದಾರಿಯಲ್ಲಿ ಸರಣಿ ಅಪಘಾತ: ನಾಲ್ವರಿಗೆ ಗಾಯ
Team Udayavani, Jan 5, 2023, 6:10 PM IST
ಉಡುಪಿ : ಅಂಬಲಪಾಡಿ ಜಂಕ್ಷನ್ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಭಿನಂದನಾ ಪೆಟ್ರೋಲ್ ಬಂಕ್ ಎದುರು ಸರಣಿ ಅಪಘಾತ ಸಂಭವಿಸಿ ಹಲವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿರುವ ಘಟನೆ ಗುರುವಾರ ಸಂಭವಿಸಿದೆ.
ಸರಕು ತುಂಬಿದ ಲಾರಿ ಹಾಗೂ 3 ಪ್ರಯಾಣಿಕರ ಕಾರುಗಳ ಮಧ್ಯೆ ಈ ಅಪಘಾತ ಸಂಭವಿಸಿದ್ದು, ಕಾರುಗಳಲ್ಲಿದ್ದ ಇಬ್ಬರು ಮಹಿಳೆಯರು, ಓರ್ವ ಗಂಡಸು ಹಾಗೂ ಒಂದು ಮಗು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವಿಶು ಶೆಟ್ಟಿ ಅವರು ಸಾರ್ವಜನಿಕರ ಸಹಕಾರದೊಡನೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಹಾಗೂ ಅಪಘಾತಕ್ಕೀಡಾದ ವಾಹನಗಳನ್ನು ಹೆದ್ದಾರಿಯಿಂದ ತೆರವುಗೊಳಿಸಿ ಹೈವೆ ಬ್ಲಾಕ್ ಆಗದಂತೆ ಶ್ರಮಿಸಿದರು. ಅಪಘಾತ ಭೀಕರತೆ ಎಷ್ಟಿತ್ತೆಂದರೆ ಎರಡು ಕಾರುಗಳು ಸಂಪೂರ್ಣ ಜಖಂಗೊಂಡಿವೆ.
ಅಂಬಲಪಾಡಿ ಜಂಕ್ಷನ್ ಪರಿಸರದಲ್ಲಿ ದಿನ ನಿತ್ಯ ಎಂಬಂತೆ ಅಪಘಾತಗಳು ಸಂಭವಿಸುತ್ತಿವೆ. ಹಲವಾರು ಮಂದಿ ಮೃತ ಪಟ್ಟಿದ್ದಾರೆ. ಈ ಪರಿಸರದಲ್ಲಿ ಮೇಲ್ಸೇತುವೆ ನಿರ್ಮಿಸಬೇಕು ಎಂಬ ಸಾರ್ವಜನಿಕರ ಹಲವಾರು ದಶಕಗಳ ಬೇಡಿಕೆ ಇನ್ನೂ ಈಡೇರಿಲ್ಲ.
ಇದನ್ನೂ ಓದಿ: ಸಿದ್ಧೇಶ್ವರ ಶ್ರೀಗಳ ಚಿತಾಭಸ್ಮ ಸಂಗ್ರಹ: ಕೂಡಲಸಂಗಮ, ಗೋಕರ್ಣದಲ್ಲಿ ವಿಸರ್ಜನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.