ವರ್ಷದಲ್ಲಿ 40 ಎಸ್‌ಎಲ್ಆರ್‌ಎಂ ಘಟಕ ಸ್ಥಾಪನೆ ಗುರಿ

ತ್ಯಾಜ್ಯ ಮುಕ್ತ ಸಂಕಲ್ಪಕ್ಕೆ ಬೇಕಿದೆ ಸಹಕಾರ

Team Udayavani, Jun 29, 2019, 5:41 AM IST

SLRM

ಸಾಂದರ್ಭಿಕ ಚಿತ್ರ.

ಉಡುಪಿ: ಜಿಲ್ಲಾಡಳಿತ ತ್ಯಾಜ್ಯ ಮುಕ್ತ ಉಡುಪಿ ಮಿಷನ್‌ ಸಂಕಲ್ಪ ಹೊಂದಿದ್ದರೂ ಸೂಕ್ತ ಮಾಹಿತಿ ಕೊರತೆಯಿಂದಾಗಿ ಜನರು ಎಸ್‌ಎಲ್ಆರ್‌ಎಂನಂತಹ ಘಟಕಗಳನ್ನು ಸ್ಥಾಪಿಸಲು ಹಿಂದೇಟು ಹಾಕುತ್ತಿದ್ದಾರೆ.

ಅಲೆವೂರು ಗ್ರಾಮ ಪಂಚಾಯತ್‌ ಹಾಗೂ ಸಾೖಬ್ರಕಟ್ಟೆ ಮುಖ್ಯಪೇಟೆಯಲ್ಲಿರುವ ಯಡ್ತಾಡಿ ಗ್ರಾ.ಪಂ. ಕಚೇರಿ ಪಕ್ಕದಲ್ಲಿ ಎಸ್‌ಎಲ್ಆರ್‌ಎಂ ಘಟಕ ಸ್ಥಾಪಿಸುವ ಕುರಿತು ಸ್ಥಳೀಯಾಡಳಿತ ತಯಾರಿ ನಡೆಸಿದ್ದರೂ ಸ್ಥಳೀಯರು ಇದನ್ನು ವಿರೋಧಿಸುತ್ತಿದ್ದಾರೆ.

ಜಿಲ್ಲೆಯಲ್ಲಿರುವ ಎಲ್ಲ ಗ್ರಾ.ಪಂ. ವ್ಯಾಪ್ತಿಗೆ ಒಂದರಂತೆ ಈ ಘಟಕವನ್ನು ಸ್ಥಾಪಿಸುವ ಉದ್ದೇಶ ಹೊಂದಲಾಗಿದೆ. ಈಗಾಗಲೇ ವಂಡ್ಸೆ, ವಾರಂಬಳ್ಳಿ, ಕುಕ್ಕುಂದೂರು, ಹೆಬ್ರಿ, ನಿಟ್ಟೆ ಸಹಿತ ಜಿಲ್ಲೆಯಲ್ಲಿ ಸುಮಾರು 51 ಗ್ರಾ.ಪಂ.ಗಳಲ್ಲಿ ಈ ಘಟಕ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ.

ವಿರೋಧ ಏಕೆ?
ಈ ಘಟಕ ಸಮರ್ಪಕವಾಗಿ ಕಾರ್ಯ ನಿರ್ವಹಿಸದಿದ್ದರೆ ಸಾವಿರಾರು ಜನ ವಾಸಿಸುವ ಪ್ರದೇಶದಲ್ಲಿ ತೊಂದರೆ ಉಂಟಾಗಬಹುದು ಎಂಬುದು ಜನರ ವಿರೋಧಕ್ಕೆ ಕಾರಣವಾಗಿದೆ. ಆದರೆ ಅನುಷ್ಠಾನಗೊಂಡ ಎಲ್ಲ ಕಡೆಯೂ ಈ ಘಟಕದ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ. ಅಲ್ಲದೆ ಇದರಿಂದ ಉತ್ತಮ ರೀತಿಯಲ್ಲಿ ತ್ಯಾಜ್ಯಗಳ ವಿಲೇವಾರಿ ನಡೆಯುತ್ತಿದೆ.

ಏನಿದು ಎಸ್‌ಎಲ್ಆರ್‌ಎಂ ಘಟಕ?
ಎಸ್‌ಎಲ್ಆರ್‌ಎಂ ಕಸವನ್ನು ಸಂಪನ್ಮೂಲವನ್ನಾಗಿ ಪರಿವರ್ತಿಸುವ ಒಂದು ಯೋಜನೆ. ಈ ಯೋಜನೆಯಡಿ ತರಬೇತಿ ಪಡೆದ ನುರಿತ ಕಾರ್ಯಕರ್ತರು ಪರಿಸರ ಸ್ನೇಹಿ ವಿಧಾನಗಳ ಮೂಲಕ ಕಸವನ್ನು ವೈಜ್ಞಾನಿಕವಾಗಿ ನಿರ್ವಹಣೆ ಮಾಡಿ ಆದಾಯದ ಮೂಲವನ್ನಾಗಿ ಪರಿವರ್ತನೆ ಮಾಡುತ್ತಾರೆ. ಈ ವಿಧಾನದಲ್ಲಿ ಹಸಿ ತ್ಯಾಜ್ಯ ಮತ್ತು ಒಣ ತ್ಯಾಜ್ಯವನ್ನು ಪ್ರತ್ಯೇಕ ಪ್ರತ್ಯೇಕವಾಗಿ ನಿರ್ವಹಣೆ ಮಾಡಲಾಗುತ್ತದೆ.

ಎಸ್‌ಎಲ್ಆರ್‌ಎಂನಲ್ಲಿ ಏನು ಮಾಡ್ತಾರೆ?
ಪ್ರತ್ಯೇಕ ಪ್ರತ್ಯೇಕವಾಗಿ ಸಂಗ್ರಹಿಸಿದ ತ್ಯಾಜ್ಯವನ್ನು ಎಸ್‌ಎಲ್ಆರ್‌ಎಂ ಘಟಕಕ್ಕೆ ತರಲಾಗುತ್ತದೆ. ಅಲ್ಲಿಂದ ಹಸಿ ತ್ಯಾಜ್ಯವನ್ನು ವಿಂಗಡಿಸಿ ಗೋವುಗಳಿಗೆ ಆಹಾರವಾಗಿ ನೀಡಿ, ಉಳಿದ ತ್ಯಾಜ್ಯವನ್ನು ಕಾಂಪೋಸ್ಟ್‌ ಮಾಡಲಾಗುತ್ತದೆ. ಒಣ ತ್ಯಾಜ್ಯವನ್ನು ಪ್ಲಾಸ್ಟಿಕ್‌ ಚೀಲ, ಪ್ಲಾಸ್ಟಿಕ್‌ ವಸ್ತುಗಳು, ಪೇಪರ್‌, ರಟ್ಟು, ಲೆದರ್‌, ಮೆಟಲ್, ಗಾಜು, ಬಟ್ಟೆ, ಇಲೆಕ್ಟ್ರಾನಿಕ್‌ ವಸ್ತುಗಳು, ಥರ್ಮಕೋಲ್ ಇತ್ಯಾದಿ ಸುಮಾರು 18ರಿಂದ 20 ವಿಧವಾಗಿ ವಿಂಗಡಿಸಿ ಸ್ವಚ್ಛಗೊಳಿಸಿ, ತೂಕ ಮಾಡಿ ದಾಸ್ತಾನು ಕೊಠಡಿಯಲ್ಲಿ ಶೇಖರಿಸಲಾಗುತ್ತದೆ. ಅನಂತರದಲ್ಲಿ ವಿವಿಧ ರಿಸೈಕ್ಲಿಂಗ್‌ ಲಿಂಗ್‌ ಕಂಪೆನಿಗಳಿಗೆ ಮಾರಾಟ ಮಾಡಿ, ಬರುವ ಆದಾಯವನ್ನು ಎಸ್‌ಎಲ್ಆರ್‌ಎಂ ಘಟಕಗಳ ನಿರ್ವಹಣೆಗೆ ಬಳಸಲಾಗುತ್ತದೆ. ಈ ಮಹತ್ತರವಾದ ಕಾರ್ಯದಲ್ಲಿ ವೃತ್ತಿಪರ ತರಬೇತಿ ಪಡೆದ ಎಸ್‌ಎಲ್ಆರ್‌ಎಂ ಕಾರ್ಯಕರ್ತರ ಘನ ಮತ್ತು ದ್ರವ ನಿರ್ವಹಣಾ ಸಂಘಗಳು ಕರ್ತವ್ಯ ನಿರ್ವಹಿಸುತ್ತಿವೆ.

ಸ್ವಚ್ಛ ಪರಿಸರಕ್ಕೂ ಸಹಕಾರಿ
ಈ ರೀತಿಯಾಗಿ ತ್ಯಾಜ್ಯವನ್ನು ವೈಜ್ಞಾನಿಕವಾಗಿ ನಿರ್ವಹಣೆ ಮಾಡುವುದರಿಂದ ಪರಿಸರ ಹಾಗೂ ಜೀವ ವೈವಿಧ್ಯದ ಸಂರಕ್ಷಣೆ ಮಾಡುವುದರ ಜತೆಗೆ ಸುಂದರ ಸ್ವಚ್ಛ ಪರಸರ ನಿರ್ಮಾಣ ಸಾಧ್ಯವಿದೆ.

ಹಸಿರು ಬಕೆಟ್‌
ಸಾರ್ವಜನಿಕರು ತರಕಾರಿ ಸಿಪ್ಪೆ, ಹಣ್ಣಿನ ಸಿಪ್ಪೆ, ಹೂವು, ಮೊಟ್ಟೆ ಚಿಪ್ಪು, ಉಳಿಕೆಯಾದ ಆಹಾರ ಪದಾರ್ಥ ಮುಂತಾದ ಹಸಿ ತ್ಯಾಜ್ಯವನ್ನು ಹಸಿರು ಬಣ್ಣದ ಬಕೆಟ್’ನಲ್ಲಿ ಶೇಖರಿಸಿಟ್ಟು, ಪ್ರತಿನಿತ್ಯ ನೀಡಬೇಕಾಗುತ್ತದೆ. ಅಥವಾ ಪೈಪ್‌ ಕಾಂಪೋಸ್ಟ್‌ ವಿಧಾನಗಳ ಮೂಲಕ ಮನೆಯ ಹಂತದಲ್ಲಿಯೇ ಸಾವಯವ ಗೊಬ್ಬರವನ್ನಾಗಿ ಮಾಡಿಕೊಳ್ಳಬಹುದು.

ಕೆಂಪು ಬಕೆಟ್‌
ಪ್ಲಾಸ್ಟಿಕ್‌ ಚೀಲ, ಪ್ಲಾಸ್ಟಿಕ್‌ ಬಾಟಲ್, ಪೇಪರ್‌, ರಟ್ಟು, ಬಾಟಲಿ, ಗಾಜು, ಬಟ್ಟೆ, ರಬ್ಬರ್‌, ಲೋಹ ಮುಂತಾದ ಒಣ ತ್ಯಾಜ್ಯಗಳನ್ನು (ಕೊಳೆಯದ ತ್ಯಾಜ್ಯ) ಕೆಂಪು ಬಣ್ಣದ ಬಕೆಟ್‌ನಲ್ಲಿ ಹಾಕಿ ನೀಡಬೇಕು. ವಾರಕ್ಕೊಮ್ಮೆ ಅಥವಾ 15 ದಿನಗಳಿಗೊಮ್ಮೆ ತ್ಯಾಜ್ಯ ಸಂಗ್ರಹಣೆ ಮಾಡುತ್ತಿದ್ದಲ್ಲಿ ತಮಗೆ ನೀಡಿರುವ ಬ್ಯಾಗ್‌ ನಲ್ಲಿ ಒಣ ತ್ಯಾಜ್ಯವನ್ನು ಸಂಗ್ರಹಿಸಿಟ್ಟು, ವಾಹನಕ್ಕೆ ನೀಡಬೇಕು.

ಸಹಕಾರ ಅಗತ್ಯ
ಈ ಯೋಜನೆ ಯಶಸ್ವಿಯಾಗಬೇಕಾದರೆ ಸಾರ್ವಜನಿಕರ ಸಹಕಾರ ಅಗತ್ಯ. ಸಾರ್ವ ಜನಿಕರು ತಾವು ಉತ್ಪಾದಿಸುವ ತ್ಯಾಜ್ಯವನ್ನು ಮೂಲದಲ್ಲಿಯೇ ಹಸಿ ಹಾಗೂ ಒಣ ಎಂಬುದಾಗಿ ವಿಂಗಡಿಸಿ ಎಸ್‌ಎಲ್‌ಆರ್‌ಎಂ ವಾಹನಕ್ಕೆ ನೀಡಬೇಕು.

ಜಿಲ್ಲೆಯಲ್ಲಿ ಯಶಸ್ವಿ ಅನುಷ್ಠಾನ
ಎಸ್‌ಎಲ್‌ಆರ್‌ಎಂ ಯೋಜನೆ ಜಿಲ್ಲೆಯಲ್ಲಿ ಉತ್ತಮ ರೀತಿಯಲ್ಲಿ ಅನುಷ್ಠಾನವಾಗುತ್ತಿದೆ. ಪ್ರತೀ ಶಾಲೆಯಲ್ಲೂ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಗುತ್ತಿದೆ. ಪರಿಸರಸ್ನೇಹಿ ಯೋಜನೆಯಾಗಿದ್ದು, ಈ ವರ್ಷ 40 ಪಂಚಾಯತ್‌ಗಳಲ್ಲಿ ಘಟಕ ಸ್ಥಾಪಿಸಲು ರೂಪುರೇಷೆ ಸಿದ್ಧಪಡಿಸಲಾಗಿದೆ. ಜಿಲ್ಲೆಯಲ್ಲಿ ಈ ಯೋಜನೆ ಆರಂಭವಾಗಿ ಒಂದೂವರೆ ವರ್ಷ ಆಗುತ್ತಿದ್ದು, 35ರಿಂದ 40 ಲ.ರೂ.ಆದಾಯ ಬಂದಿದೆ. ಎಸ್‌ಎಲ್‌ಆರ್‌ಎಂ ಘಟಕದ ನಿರ್ವಹಣೆ, ಸಿಬಂದಿ ವೇತನಕ್ಕೆ ಇದನ್ನು ಬಳಸಿಕೊಳ್ಳಲಾಗುತ್ತಿದೆ.
-ಶ್ರೀನಿವಾಸ ರಾವ್‌, ಮುಖ್ಯ ಯೋಜನಾಧಿಕಾರಿ, ಉಡುಪಿ ಜಿ.ಪಂ.

-ಪುನೀತ್‌ ಸಾಲ್ಯಾನ್‌

ಟಾಪ್ ನ್ಯೂಸ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.