ಉತ್ತಮ ಬೆಲೆ ನಿರೀಕ್ಷೆಯಲ್ಲಿ ಸೇವಂತಿಗೆ ಬೆಳೆಗಾರರು

ಕೋವಿಡ್ ಹಿನ್ನೆಲೆ "ಹೆಮ್ಮಾಡಿ ಸೇವಂತಿಗೆ' ಬೆಳೆ ಪ್ರಮಾಣ ಕುಂಠಿತ

Team Udayavani, Jan 11, 2021, 12:10 PM IST

ಉತ್ತಮ ಬೆಲೆ ನಿರೀಕ್ಷೆಯಲ್ಲಿ ಸೇವಂತಿಗೆ ಬೆಳೆಗಾರರು

ಕುಂದಾಪುರ: ಹೆಮ್ಮಾಡಿ ಸೇವಂತಿಗೆಯು ಅರಳಿ ನಿಂತಿದ್ದು, ಕೊಯ್ಯಲು ಸಿದ್ಧವಾಗಿದೆ. ಆದರೆ ಕೋವಿಡ್ ಅನಿಶ್ಚಿತತೆ ಹಿನ್ನೆಲೆಯಲ್ಲಿ ಈ ಬಾರಿ ಹೆಮ್ಮಾಡಿ ಸೇವಂತಿಗೆ ಕಡಿಮೆ ಪ್ರಮಾಣದಲ್ಲಿ ಬೆಳೆದಿರುವುದರಿಂದ ಈ ಬಾರಿ ಸೇವಂತಿಗೆ ಬೆಳೆಗಾರರರು ಉತ್ತಮ ಬೆಲೆಯ ನಿರೀಕ್ಷೆಯಲ್ಲಿದ್ದಾರೆ.

ಕೋವಿಡ್ ಸಂಕಷ್ಟದಿಂದಾಗಿ ಈ ವರ್ಷವೂ ಕುಂದಾಪುರ ಭಾಗದ ದೇವಸ್ಥಾನಗಳ ವಾರ್ಷಿಕ ಜಾತ್ರೆ, ದೈವಸ್ಥಾನಗಳ ಕೆಂಡೋತ್ಸವ ಅದ್ದೂರಿಯಾಗಿ ನಡೆಯುವುದು ಅನುಮಾನ ಎನ್ನುವ ಕಾರಣಕ್ಕೆ, ಹೆಚ್ಚು ಹೂವು ಬೆಳೆದಲ್ಲಿ, ಜಾತ್ರೆಗಳಿಗೆ ಅವಕಾಶವಿಲ್ಲವಾದರೆ ನಷ್ಟವಾಗಲಿದೆ ಎನ್ನುವ ಕಾರಣಕ್ಕೆ ಹೆಚ್ಚೆಚ್ಚು ಹೂವು ಬೆಳೆಯುತ್ತಿದ್ದ ಬೆಳೆಗಾರರು ಈ ಬಾರಿ ಕಡಿಮೆ ಬೆಳೆದಿದ್ದಾರೆ.

ಹೆಮ್ಮಾಡಿ ಸೇವಂತಿಗೆ ಮಾರಣಕಟ್ಟೆಯ ಬ್ರಹ್ಮಲಿಂಗೇಶ್ವರ ದೇವರಿಗೆ ಇಷ್ಟದ ಹೂವು. ಸೇವಂತಿಗೆ ಬೆಳೆಗಾರರು ತಮ್ಮಲ್ಲಿ ಬೆಳೆದ ಹೂವನ್ನು ಮೊದಲಿಗೆ ಮಕರ ಸಂಕ್ರಮಣದಂದು ನಡೆಯುವ ಮಾರಣಕಟ್ಟೆಯ ಜಾತ್ರೆಯಂದು ಬ್ರಹ್ಮಲಿಂಗೇಶ್ವರನಿಗೆ ಅರ್ಪಿಸಿದ ಬಳಿಕವೇ ಮಾರಾಟಕ್ಕೆ ಮುಂದಾಗುವುದು ವಾಡಿಕೆ.

ಹೂವು ಮಾರಾಟಕ್ಕೆ ಅವಕಾಶ :

ವಾರ್ಷಿಕ ಜಾತ್ರೆ, ಕೆಂಡ ಸೇವೆಗಳಲ್ಲಿ ಹೂವು ಮಾರಾಟಕ್ಕೆ ಅವಕಾಶ ನೀಡಬೇಕು ಎನ್ನುವುದಾಗಿ ಹೆಮ್ಮಾಡಿ ಸೇವಂತಿಗೆ ಬೆಳೆಗಾರರು ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ ಅವರಿಗೆ ಮನವಿ ಸಲ್ಲಿಸಿದ್ದು, ಅವರು ಕೂಡಲೇ ಈ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗಳ ಗಮನಕ್ಕೆ ತಂದು ಸಹಕರಿಸುವಂತೆ ಸೂಚಿಸಿದ್ದು, ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಇದು ಬೆಳೆಗಾರರಿಗೆ ಸ್ವಲ್ಪ ಮಟ್ಟಿಗೆ ಸಮಾಧಾನ ತಂದಿದೆ.

ಹೆಮ್ಮಾಡಿ, ಕಟ್‌ಬೆಲ್ತೂರು, ಕನ್ಯಾನ ಗ್ರಾಮಗಳ ಅಂದಾಜು 22 ಎಕರೆ ಪ್ರದೇಶಗಳಲ್ಲಿ ಸೇವಂತಿಗೆ 50ಕ್ಕೂ ಅಧಿಕ ಮಂದಿ ಹೂವು ಬೆಳೆಯುತ್ತಿದ್ದು, ಈ ಬಾರಿ ಇವರಲ್ಲಿ ಕೆಲವರು ನಿರಾಸಕ್ತಿ ತೋರಿದ್ದಾರೆ.

ಕೆಂಡ ಸೇವೆ- ಜಾತ್ರೆಗಳಿಗೆ ಬಲು ಬೇಡಿಕೆ :

ಹೆಮ್ಮಾಡಿ ಸೇವಂತಿಗೆ ಹೂವಿಗೆ ಕುಂದಾಪುರ ಭಾಗದ ಮಾರಣಕಟ್ಟೆ ಜಾತ್ರೆಯಿಂದ ಆರಂಭಗೊಂಡು, ಉಡುಪಿ, ಮಂಗಳೂರು, ಭಟ್ಕಳ, ಹೊನ್ನಾವರದ ಕೆಂಡ ಸೇವೆ, ವಾರ್ಷಿಕ ಜಾತ್ರೋತ್ಸವಗಳಲ್ಲಿ ಬಲು ಬೇಡಿಕೆಯಿದೆ. ಕುಂದಾಪುರ ಭಾಗದಲ್ಲಿ ಜನವರಿಯಿಂದ ಆರಂಭಗೊಂಡು ಮಾರ್ಚ್‌ವರೆಗೂ ನಿರಂತರವಾಗಿ ದಿನಕ್ಕೆರಡು ದೇವಸ್ಥಾನ, ದೈವಸ್ಥಾನಗಳ ಕೆಂಡ ಸೇವೆ- ಜಾತ್ರೆಗಳಿಗೆ ಹೆಮ್ಮಾಡಿ ಸೇವಂತಿಗೆಗೆ ಬೇಡಿಕೆಯಿರುವುದು ವಿಶೇಷ. ಈ ಬಾರಿ ಸದ್ಯಕ್ಕೆ 1 ಸಾವಿರ ಹೂಗಳಿಗೆ 200 ರೂ.ನಲ್ಲಿ ಮಾರಾಟವಾಗುತ್ತಿದೆ. ಕಳೆದ ಬಾರಿಯೂ ಈ ಸಮಯ 200 ರಿಂದ 250 ರೂ. ಇತ್ತು. ಇದು ಹೆಚ್ಚು ಆಗಬಹುದು ಅಥವಾ ಕಡಿಮೆಯೂ ಆಗಬಹುದು ಎನ್ನುತ್ತಾರೆ ಬೆಳೆಗಾರರು.

ಈ ಬಾರಿ ಚಳಿ ಕಡಿಮೆಯಾಗಿದ್ದರಿಂದ, ಮೋಡದಿಂದಾಗಿ ಸೇವಂತಿಗೆ ಹೂವಿನ ಬೆಳೆಗೆ ಸಂಕಷ್ಟ ಎದುರಾಗಿತ್ತು. ಆದರೆ ಈಗ ಕೆಲವು ದಿನಗಳಿಂದ ಮಳೆ ಬರುತ್ತಿರುವುದರಿಂದ ಸ್ವಲ್ಪ ಮಟ್ಟಿಗೆ ಹೂವಿಗೆ ಅನುಕೂಲವಾಗಿದೆ. ಈ ಬಾರಿ ಕಡಿಮೆ ಬೆಳೆದಿದ್ದರೂ ಒಳ್ಳೆ ಯ ಬೆಳೆ ಬಂದಿದೆ. ಉತ್ತಮ ಬೆಲೆಯ ನಿರೀಕ್ಷೆಯಿದೆ. ಆದರೆ ಜಾತ್ರೆಗಳಲ್ಲಿ ಜನ ಕಡಿಮೆ ಬರುವುದರಿಂದ ಬೇಡಿಕೆ ಇರುತ್ತೋ ? ಇಲ್ಲವೋ ನೋಡಬೇಕು. ಪ್ರಶಾಂತ್‌ ಭಂಡಾರಿ ಹೆಮ್ಮಾಡಿ, ಸೇವಂತಿಗೆ ಬೆಳೆಗಾರರು

ಟಾಪ್ ನ್ಯೂಸ್

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.