ಮಳೆ ನೀರನ್ನು ಇಂಗಿಸುವ ಮಹತ್ಕಾರ್ಯಕ್ಕೆ ಕೈ ಜೋಡಿಸಿ: ಆನಂದ ಸಿ.ಕುಂದರ್
ಬೀಜಾಡಿ: ಮಳೆ ನೀರು ಕೊಯ್ಲು ಕಾರ್ಯಾಗಾರ ಉದ್ಘಾಟನೆ
Team Udayavani, Jul 2, 2019, 5:00 AM IST
ಕೋಟೇಶ್ವರ: ಈ ಬಾರಿ ಮಳೆ ವಿಳಂಬವಾಗಿ ನೀರಿನ ಅಭಾವ ಕಂಡಿದ್ದೇವೆ. ಮಳೆಗಾಲದಲ್ಲಿ ಮಳೆ ನೀರನ್ನು ಹರಿದು ಹೋಗಲು ಬಿಡದೇ ಅದನ್ನು ತಮ್ಮ ವಠಾರದಲ್ಲಿ ಭೂಮಿಗೆ ಇಂಗಿಸುವ ಮಹತ್ಕಾರ್ಯ ಸಾರ್ವಜನಿಕರು ಕೈಜೋಡಿಸಬೇಕು ಎಂದು ಕೋಟ ಮಣೂರು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ.ಕುಂದರ್ ಹೇಳಿದರು.
ರವಿವಾರ ಸಂಜೆ ಬೀಜಾಡಿ ಗೋಪಾಡಿ ಮಿತ್ರ ಸಂಗಮ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕೋಟೇಶ್ವರ ವಲಯ, ಕೋಟ ಪಡುಕರೆ ಗೀತಾನಂದ ಫೌಂಡೇಶನ್ ಆಶ್ರಯದಲ್ಲಿ ಬೀಜಾಡಿ ಮಿತ್ರಸೌಧದಲ್ಲಿ ನಡೆದ ಮಳೆ ನೀರು ಕೊಯ್ಲು ಕಾರ್ಯಾಗಾರ, ಪ್ರಾತ್ಯಕ್ಷಿಕೆ ಹಾಗೂ ಸಸಿ ವಿತರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬರ ಮನೆಯಲ್ಲೂ ಮಳೆ ನೀರು ಕೊಯ್ಲು ಘಟಕವಾದರೆ ನೀರಿನ ಅಭಾವ ತಪ್ಪಿಸಬಹುದು. ಮುಂದಿನ ಪೀಳಿಗೆಗೆ ಅನುಕೂಲಕರ ವಾತಾವರಣ ಸƒಷ್ಟಿಯಾಗ ಬೇಕಾದರೆ ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು ಎಂದರು.
ಇಂದಿನ ಯುವ ಜನತೆ ಪರಿಸರದ ಬಗ್ಗೆ ಅರಿತು ತಮ್ಮ ತಮ್ಮ ಊರಲ್ಲಿ ಸಸಿ ನೆಟ್ಟು ಬೆಳೆಸಿ, ಶುದ್ದ ಗಾಳಿ, ಸಮೃದ್ಧ ಪರಿಸರ ನಿರ್ಮಿಸಬೇಕು ಎಂದು ತಿಳಿಸಿದರು.
ಭಾರತೀಯ ಕಿಸಾನ್ ಸಂಘದ ಕುಂದಾಪುರ ತಾಲೂಕು ಉಪಾಧ್ಯಕ್ಷ, ಪ್ರಗತಿಪರ ಕೃಷಿಕ ಬಿ. ಶೇಷಗಿರಿ ಗೋಟ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಲತಾ ಸುರೇಶ ಶೆಟ್ಟಿ, ಯೋಜನೆಯ ಜಿಲ್ಲಾ ನಿರ್ದೇಶಕ ಗಣೇಶ. ಬಿ ಅತಿಥಿಗಳಾಗಿ ಆಗಮಿಸಿದರು.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಲತಜ್ಞ ಜೋಸೆಫ್ ರೆಬೆಲ್ಲೊ ಸಂಪನ್ಮೂಲ ವ್ಯಕ್ತಿಯಾಗಿ ಮಳೆ ನೀರು ಕೊಯ್ಲು ಬಗ್ಗೆ ವಿವರವಾದ ಮಾಹಿತಿ ನೀಡಿದರು.
ಪಂಚಾಯತ್ ಸದಸ್ಯ, ಮಿತ್ರ ಸಂಗಮದ ಗೌರವಾಧ್ಯಕ್ಷ ಬಿ. ವಾದಿರಾಜ್ ಹೆಬ್ಟಾರ್, ಕಾರ್ಯದರ್ಶಿ ಚಂದ್ರ ಬಿ. ಎನ್., ಗ್ರಾಮಾಭಿವೃದ್ದಿ ಯೋಜನೆ ನಾಗರಾಜ್, ಯೋಜನೆಯ ಕೇಂದ್ರ ಸಮಿತಿಯ ಅಧ್ಯಕ್ಷೆ ಶೋಭಾ ಚಂದ್, ಬೀಜಾಡಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಶಾರದಾ ಮೊದಲಾದವರು ಉಪಸ್ಥಿತರಿದ್ದರು.
ಮಿತ್ರ ಸಂಗಮದ ಅಧ್ಯಕ್ಷ ಮಂಜುನಾಥ್ ಬೀಜಾಡಿ ಸ್ವಾಗತಿಸಿದರು. ಪತ್ರಕರ್ತ ಚಂದ್ರಶೇಖರ್ ಬೀಜಾಡಿ ನಿರೂಪಿಸಿದರು. ಗ್ರಾಮಾಭಿವೃದ್ದಿ ಯೋಜನೆಯ ಕೃಷಿ ಅಧಿ ಕಾರಿ ಚೇತನ್ ಕುಮಾರ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
Kambala Time Table: ಡಿ.13ರ ವರೆಗೆ ಸಾಂಪ್ರದಾಯಿಕ ಕಂಬಳ ಹಬ್ಬ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.