ಶಿರ್ಲಾಲು: ಕೆಸರುಗದ್ದೆಯಂತಾದ ಕುಕ್ಕುಜೆ ಬೈಲು ರಸ್ತೆ
ದಶಕಗಳಿಂದ ರಸ್ತೆ ಅಭಿವೃದ್ಧಿಗೆ ಮನವಿ ಮಾಡಿದರೂ ನಿಷ್ಪ್ರಯೋಜಕ
Team Udayavani, Jun 15, 2019, 5:27 AM IST
ಅಜೆಕಾರು: ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಂಡ್ಲಿ ಸಂಪರ್ಕಿಸುವ ಕುಕ್ಕುಜೆ ಬೈಲು ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು ಮಳೆಯ ನೀರಿಗೆ ಮಣ್ಣು ರಾಡಿ ಎದ್ದು ಕೆಸರು ಗದ್ದೆಯಂತಾಗಿದೆ.
ಶಿರ್ಲಾಲುವಿನಿಂದ ಮುಂಡ್ಲಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯು ಸುಮಾರು 4 ಕಿ.ಮೀ.ಯಷ್ಟು ಉದ್ದವಿದ್ದು ಇದರಲ್ಲಿ ಸುಮಾರು 2 ಕಿ.ಮೀ.ಯಷ್ಟು ಭಾಗ ಈವರೆಗೂ ಡಾಮಾರು ಕಂಡಿಲ್ಲ.
ರಸ್ತೆಯಲ್ಲಿ ಬೃಹತ್ ಹೊಂಡಗಳು ನಿರ್ಮಾಣವಾಗಿದ್ದು ಕಳೆದ ಬೇಸಿಗೆಯಲ್ಲಿ ಶಿರ್ಲಾಲು ಪಂಚಾಯತ್‌ನಿಂದ ಹೊಂಡಗಳಿಗೆ ಮಣ್ಣನ್ನು ಹಾಕಲಾಗಿದ್ದು ಆ ಮಣ್ಣು ರಾಡಿ ಎದ್ದು ಈಗ ಸಂಚಾರ ನಡೆಸದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಕುಕ್ಕುಜೆ ಬೈಲು, ಮುಡಾಯಿಗುಡ್ಡೆ ಪರಿಸರದವರಿಗೆ ಸಂಪರ್ಕದ ಏಕೈಕ ರಸ್ತೆ ಇದಾಗಿದ್ದು ಅಲ್ಪ ಸಂಖ್ಯಾತರ ಹಾಗೂ ಇತರ ಸಮುದಾಯಗಳ ನೂರಾರು ಮನೆಗಳಿದ್ದು ನಿತ್ಯ ಸಂಚಾರಕ್ಕೆ ಸಂಕಟಪಡಬೇಕಾಗಿದೆ.
ಈ ರಸ್ತೆಯಲ್ಲಿ ಕಾಲ್ನಡಿಗೆಯ ಸಂಚಾರವೂ ಕಷ್ಟಕರವಾಗಿದ್ದು ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ತೆರಳಲು ಹರಸಾಹಸ ಪಡಬೇಕಾಗಿದೆ.
ಅಲ್ಲದೆ ರಸ್ತೆಯ ಇಕ್ಕೆಲಗಳಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಇರುವುದರಿಂದ ಮಳೆಯ ನೀರು ರಸ್ತೆಯಲ್ಲಿಯೇ ಹರಿಯುತ್ತಿದ್ದು ರಸ್ತೆ ಇನ್ನಷ್ಟೂ ಹದಗೆಟ್ಟು ಸಂಪರ್ಕ ಕಡಿತದ ಭೀತಿ ಸ್ಥಳೀಯರನ್ನು ಕಾಡುತ್ತಿದೆ.
ಶಿರ್ಲಾಲು ಗ್ರಾಮಸ್ಥರಿಗೆ ತಾಲೂಕು ಕೇಂದ್ರ ಕಾರ್ಕಳವನ್ನು ಸಂಪರ್ಕಿಸಲು ಅತೀ ಹತ್ತಿರದ ರಸ್ತೆ ಇದಾಗಿದ್ದು ರಸ್ತೆ ಅವ್ಯವಸ್ಥೆಯಿಂದಾಗಿ ಅಜೆಕಾರು ಮಾರ್ಗವಾಗಿ ಸುತ್ತು ಬಳಸಿ ಸಂಚರಿಸಬೇಕಾಗಿದೆ.
ಮುಂಡ್ಲಿ ಗ್ರಾಮಸ್ಥರು ಶಿರ್ಲಾಲು ಗ್ರಾಮ ಪಂಚಾಯತ್ ಕಚೇರಿಗೆ ತೆರಳಲು ಇದೇ ರಸ್ತೆಯನ್ನು ಅವಲಂಬಿಸಬೇಕಾಗಿದ್ದು ಸಂಚಾರ ನಡೆಸುವುದು ಅಸಾಧ್ಯವಾಗಿದೆ.
ಈ ಭಾಗಕ್ಕೆ ಬಸ್ಸು ಸಂಚಾರ ಇಲ್ಲದೆ ಇರುವುದರಿಂದ ನಿತ್ಯ ಸಂಚಾರಕ್ಕೆ ಆಟೋ ರಿಕ್ಷಾವನ್ನೇ ಅವಲಂಬಿಸಬೇಕಾಗಿದ್ದು ಹದಗೆಟ್ಟ ರಸ್ತೆಯಿಂದಾಗಿ ರಿಕ್ಷಾ ಚಾಲಕರು ಸಂಚಾರಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಇದರಿಂದಾಗಿ ಸ್ಥಳೀಯರು ಕಾಲ್ನಡಿಗೆಯಲ್ಲಿಯೇ ಸಂಚರಿಸಬೇಕಾಗಿದ್ದು ಇದೀಗ ರಸ್ತೆ ಸಂಪೂರ್ಣ ರಾಡಿ ಎದ್ದಿರುವುದರಿಂದ ನಡೆದುಕೊಂಡು ಹೋಗಲೂ ಅಸಾಧ್ಯವಾಗಿದೆ ಎಂಬುದು ಸ್ಥಳೀಯರ ಅಳಲು.
ಸಂಬಂಧ ಪಟ್ಟ ಇಲಾಖಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಗಮನ ಹರಿಸಿ ಸ್ಥಳೀಯರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಈ ಭಾಗದ ಜನತೆ ಮನವಿ ಮಾಡಿದ್ದಾರೆ.
ಮನವಿಗೆ ಬೆಲೆ ಇಲ್ಲ
ರಸ್ತೆ ಅಭಿವೃದ್ಧಿಪಡಿಸುವಂತೆ ದಶಕಗಳಿಂದ ಜನಪ್ರತಿನಿಧಿಗಳಿಗೆ, ಇಲಾಖಾಧಿಕಾರಿಗಳಿಗೆ ನಿರಂತರ ಮನವಿ ಮಾಡಿದರೂ ಯಾವುದೇ ಪ್ರಯೋಜನ ಇಲ್ಲದಂತಾಗಿದೆ. ಶಿರ್ಲಾಲು ಗ್ರಾಮ ಪಂಚಾಯತ್ ಆಡಳಿತ ಕಳೆದ ಬೇಸಗೆಯಲ್ಲಿ ಕಾಟಾಚಾರಕ್ಕೆ ರಸ್ತೆಯ ಹೊಂಡಗಳಿಗೆ ಮಣ್ಣನ್ನು ಹಾಕಿದ್ದು ಈಗ ಮಳೆ ಬಂದು ರಸ್ತೆ ಕೆಸರಿನ ಹೊಂಡದಂತಾಗಿ ಸಂಚರಿಸುವುದೇ ಅಸಾಧ್ಯವಾಗಿದೆ.
-ನಿತಿನ್ ಶಿರ್ಲಾಲು, ಸ್ಥಳೀಯರು
ಟೆಂಡರ್
ಬಳಿಕ ಕಾಮಗಾರಿ
ಕುಕ್ಕುಜೆ ಬೈಲು ರಸ್ತೆ ಅಭಿವೃದ್ಧಿಗೆ ಶಾಸಕರ ನಿಧಿಯಿಂದ ರೂ.25 ಲಕ್ಷಕ್ಕೆ ಅನುಮೋದನೆ ದೊರೆತ್ತಿದ್ದು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಕಾಮಗಾರಿ ನಡೆಸಲಾಗುವುದು.
-ಉದಯ ಕೋಟ್ಯಾನ್,
ಜಿಲ್ಲಾ ಪಂಚಾಯತ್ ಸದಸ್ಯರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.