ಮಳೆಯ ಆರ್ಭಟ : ಕುಂದಾಪುರ, ಬೈಂದೂರು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ
Team Udayavani, Aug 2, 2022, 8:40 AM IST
ಕುಂದಾಪುರ : ಭಾರಿ ಮಳೆಯ ಹಿನ್ನೆಲೆಯಲ್ಲಿ ಕುಂದಾಪುರ, ಬೈಂದೂರು ತಾಲೂಕು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಕುಂದಾಪುರ ಸಹಾಯಕ ಕಮಿಷನರ್ ಆದೇಶ ಹೊರಡಿಸಿದ್ದಾರೆ.
ಇದೆ ಮೊದಲ ಬಾರಿಗೆ ಶಿರೂರು ಭಾಗದಲ್ಲಿ ಜಲದಿಗ್ಬಂಧನ ಉಂಟಾಗಿದೆ. ಕೆಳಪೇಟೆ,ಕರಾವಳಿ ರಸ್ತೆ ಭಾಗಶಃ ಮುಳುಗಡೆ ಆಗಿದ್ದು ಬಹುತೇಕ ಮನೆಗಳು ಜಲಾವ್ರತಗೊಂಡಿದೆ.
ಕರಾವಳಿ ರಸ್ತೆ ನೀರು ತುಂಬಿ ಹರಿಯುತ್ತಿದೆ.ಪೇಟೆ ಹೊಳೆ ತುಂಬಿ ಹರಿಯುತಿದ್ದು ನದಿ ದಂಡೆಯ ಮನೆಗಳು ಮುಳುಗಡೆಗೊಂಡಿದೆ.ಸುಮಾರು ಹತ್ತಕ್ಕೂ ಅಧಿಕ ಮನೆ ಮುಳುಗಡೆ ಆಗಿದ್ದು ಅಗ್ನಿಶಾಮಕ ದಳ,ಸ್ಥಳೀಯರ ಸಹಕಾರದಿಂದ ಅಪಾಯದಲ್ಲಿದ್ದವರನ್ನು ರಕ್ಷಿಸಲಾಗಿದೆ.
ಮನೆಯಲ್ಲಿರುವ ಕಾರುಗಳು ನೀರಲ್ಲಿ ಮುಳುಗಿ ಹೋಗಿದ್ದು ಒಂದು ಬೈಕ್ ನದಿಯಲ್ಲಿ ಕೊಚ್ಚಿ ಹೋಗಿದೆ.ದನಕರುಗಳು ನದಿಯಲ್ಲಿ ತೇಲಿ ಹೋಗಿದೆ.ಮಳೆಯ ಪ್ರಮಾಣ ಏರುತಿದ್ದು ರಕ್ಷಣಾ ಕಾರ್ಯ ನಡೆಯುತ್ತಿದೆ. ಸ್ಥಳದಲ್ಲಿ ಕಂದಾಯ ಇಲಾಖೆ,ಆರಕ್ಷಕ ಇಲಾಖೆ,ಅಗ್ನಿಶಾಮಕ,ಪಂಚಾಯತ್ ಸದಸ್ಯರು ಅಧಿಕಾರಿಗಳು ಹಾಜರಿದ್ದಾರೆ. ಸ್ಥಳೀಯ ಯುವಕರು ಇಲಾಖೆಯೊಂದಿಗೆ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
1913 ರ ಬಳಿಕ ಇದೆ ಮೊದಲ ಬಾರಿಗೆ ಈ ರೀತಿಯ ಜಲ ಪ್ರಳಯ ಶಿರೂರಿನಲ್ಲಿ ಕಂಡು ಬಂದಿದೆ ಅನ್ನೋದು ಹಿರಿಯರ ಅಭಿಪ್ರಾಯವಾಗಿದೆ.
ಇದನ್ನೂ ಓದಿ : ಕಾಮನ್‌ವೆಲ್ತ್ ಗೇಮ್ಸ್ : ಕಂಚಿನ ಪದಕ ಗೆದ್ದ ವೇಟ್‌ಲಿಫ್ಟರ್ ʻಹರ್ಜಿಂದರ್ ಕೌರ್ʼ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಅಪ್ರಾಪ್ತ ವಯಸ್ಕಳ ಜತೆ ಸಂಪರ್ಕ; ಮದುವೆಯಾಗುವುದಾಗಿ ಮೋಸ; 20 ವರ್ಷ ಶಿಕ್ಷೆ
ಕರಾವಳಿಯಲ್ಲಿ ಕಾಶ್ಮೀರಿ ಕೇಸರಿ ಬೆಳೆದ ಟೆಕ್ಕಿಗಳು; ಹೊಸ ಪ್ರಯೋಗದಲ್ಲಿ ಮೊದಲ ಯಶಸ್ಸು !
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
ಆನ್‌ಲೈನ್‌ನಲ್ಲಿ ಅಧಿಕ ಲಾಭಾಂಶದ ಆಮಿಷ: ಬ್ಯಾಂಕ್ ಮ್ಯಾನೇಜರ್‌ಗೆ ಲಕ್ಷಾಂತರ ರೂ. ವಂಚನೆ
ಸಿಎಂ ಕ್ಷಮೆಯಾಚಿಸಲಿ ರಾಘವೇಂದ್ರ ಆಗ್ರಹ
MUST WATCH
ಹೊಸ ಸೇರ್ಪಡೆ
Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ
Explainer-US Result: ಅಧ್ಯಕ್ಷ ಗಾದಿ ಯಾರಿಗೆ; ಟ್ರಂಪ್ ಮುನ್ನಡೆ, 7 ರಾಜ್ಯಗಳು ನಿರ್ಣಾಯಕ!
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
Bengaluru: ಕಳೆದ ದೀಪಾವಳಿಗಿಂತ ಶೇ.34 ತಗ್ಗಿದ ವಾಯುಮಾಲಿನ್ಯ
Crime: ಶೀಲ ಶಂಕಿಸಿ ಪತ್ನಿ ಕತ್ತು ಸೀಳಿಆತ್ಮಹತ್ಯೆಗೆ ಯತ್ನಿಸಿದ ಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.