ಶೀರೂರು ಶ್ರೀ ಪ್ರಕರಣ ವಾರದಲ್ಲಿ ಎಫ್ಎಸ್‌ಎಲ್ ವರದಿ
Team Udayavani, Aug 20, 2018, 12:09 PM IST
ಉಡುಪಿ: ಕುತೂಹಲ ಕೆರಳಿಸಿದ್ದ ಶೀರೂರು ಮಠದ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರ ನಿಧನ ಕುರಿತು ಎದ್ದ ಊಹಾಪೋಹಗಳಿಗೆ ಈ ವಾರದೊಳಗೆ ತೆರೆ ಬೀಳಲಿದೆ. ಮೃತದೇಹದ ಅಂಶಗಳು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (ಎಫ್ಎಸ್‌ಎಲ್) ರವಾನೆಯಾಗಿದ್ದು, ವರದಿ ಇನ್ನೊಂದೆರಡು ದಿನಗಳಲ್ಲಿ ಬರುವ ನಿರೀಕ್ಷೆ ಇದೆ. ಈಗಾಗಲೇ ಪ್ರಾಥಮಿಕ ಮರಣೋತ್ತರ ಪರೀಕ್ಷಾ ವರದಿ ಕೈಸೇರಿದೆ. ಇನ್ನಷ್ಟು ಸೂಕ್ಷ್ಮ ಅಂಶಗಳಿಗಾಗಿ ಎಫ್ಎಸ್‌ಎಲ್ ವರದಿಗಾಗಿ ಕಾಯಲಾಗುತ್ತಿದೆ.
ಈ ವರದಿ ಬಂದ ಬಳಿಕ ಪೊಲೀಸರು ಸಮಗ್ರ ವರದಿ ಬಹಿರಂಗಗೊಳಿಸಲಿದ್ದಾರೆ. ಅನಂತರ ಶೀರೂರು ಮೂಲ ಮಠದ ಸುಪರ್ದಿಯನ್ನು ದ್ವಂದ್ವ ಮಠವಾದ ಸೋದೆ ಮಠಕ್ಕೆ ಬಿಟ್ಟುಕೊಡಲಿದ್ದಾರೆ. ಬಳಿಕ ವಿವಿಧ ಹೋಮಗಳೇ ಮೊದಲಾದ ಧಾರ್ಮಿಕ ಕ್ರಿಯೆಗಳ ಸಹಿತ ಆರಾಧನೆಯನ್ನು ನಡೆಸಲಾಗುವುದು.
ಸೋದೆ ಮಠಾಧೀಶರು ಶಿರಸಿ ಸಮೀಪದ ಸೋಂದಾ ಕ್ಷೇತ್ರದಲ್ಲಿ ಚಾತುರ್ಮಾಸ ವ್ರತದಲ್ಲಿ ಇರುವುದರಿಂದ ಅವರ ಮಾರ್ಗದರ್ಶನದಲ್ಲಿ ವೈದಿಕರು ಆರಾಧನೆ ನಡೆಸಲಿದ್ದಾರೆ. ಇದೆಲ್ಲವೂ ಅಂದುಕೊಂಡಂತೆ ನಡೆದರೆ ಆ. 25ರಂದು ಶೀರೂರು ಮಠದ ಮುಖ್ಯಪ್ರಾಣ ದೇವರಿಗೆ ಶನಿವಾರದ ರಂಗಪೂಜೆ ಸಾರ್ವಜನಿಕರ ಪ್ರವೇಶದೊಂದಿಗೆ ನಡೆಯಲಿದೆ. ಕಳೆದೊಂದು ತಿಂಗಳಿಂದ ರಂಗಪೂಜೆ ನಡೆಯುತ್ತಿದ್ದರೂ ಸಾರ್ವಜನಿಕರಿಗೆ ಪ್ರವೇಶವಿರಲಿಲ್ಲ. ಇದಾದ ಬಳಿಕ ಪ್ರತಿ ಶನಿವಾರ ರಂಗಪೂಜೆ ಹಿಂದಿನಂತೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Manya: ಭಜನ ಮಂದಿರದಿಂದ ಕಳವು ಆರೋಪಿಗಳಿಂದ ಮಾಹಿತಿ ಸಂಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.