Shirva: ಭಾರತೀಯ ಸೇನೆಯ ಯೋಧ ಮಹಮ್ಮದ್ ಸಲೀಂ ನಿಧನ
Team Udayavani, Jun 8, 2024, 3:38 PM IST
ಶಿರ್ವ: ಭಾರತೀಯ ಸೇನೆಯಲ್ಲಿ ಕರ್ತವ್ಯದಲ್ಲಿದ್ದು, ಸೇವೆ ಸಲ್ಲಿಸುತ್ತಿದ್ದ ಬೆಳ್ಳೆ ಕುಂತಳನಗರ ನಿವಾಸಿ ಯೋಧ ಮೊಹಮ್ಮದ್ ಸಲೀಂ (35) ಅವರು ಅನಾರೋಗ್ಯದಿಂದ ಜೂ. 7ರಂದು ಬೆಂಗಳೂರಿನ ಮಿಲಿಟರಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ತಂದೆ, ತಾಯಿ, ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.
ಭಾರತೀಯ ಭೂ ಸೇನೆಯ 196 ಆರ್ಟಿ ರೆಜಿಮೆಂಟ್‌ನ ಜಮ್ಮು-ಕಾಶ್ಮೀರ, ದೆಹಲಿ ಮತ್ತು ಸಿಕಂದರಾಬಾದ್‌ನಲ್ಲಿ 14ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಪ್ರಸ್ತುತ ಹರ್ಯಾಣದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕಿಡ್ನಿ ವೈಫಲ್ಯದಿಂದ ಅನಾರೋಗ್ಯಕ್ಕೆ ತುತ್ತಾದ ಅವರನ್ನು ಬೆಂಗಳೂರಿನ ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಾಯಿ ಹಾಗೂ ಪತ್ನಿ ಕಿಡ್ನಿ ದಾನ ಮಾಡಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಶುಕ್ರವಾರ ಬೆಳಗ್ಗೆ ಮೃತಪಟ್ಟಿದ್ದಾರೆ.
ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಮೃತರ ನಿಧನಕ್ಕೆ ಸಂತಾಪ ಸೂಚಿಸಿದ್ದು, ಕಾಪು ತಹಶೀಲ್ದಾರ್ ಡಾ| ಪ್ರತಿಭಾ ಆರ್ ಅವರು ಶನಿವಾರ ಮೃತರ ನಿವಾಸಕ್ಕೆ ತೆರಳಿ ಯೋಧನ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಬೆಳ್ಳೆ ಗ್ರಾಮ ಆಡಳಿತಾಧಿಕಾರಿ ಪ್ರದೀಪ್ ಕುಮಾರ್, ಬೆಳ್ಳೆ ಗ್ರಾ.ಪಂ. ಮಾಜಿ ಅಧ್ಯಕ್ಷ ಸುಧಾಕರ ಪೂಜಾರಿ, ಮೃತರ ಪತ್ನಿ, ತಂದೆ, ತಾಯಿ, ಸಹೋದರ ಯೋಧ ಮಹಮ್ಮದ್ ಬುಹ್ರಾಮ್ ಮೊದಲಾದವರು ಉಪಸ್ಥಿತರಿದ್ದರು.
ಒಂದು ಕುಟುಂಬ, ಮೂವರು ಯೋಧರು
ಮಣಿಪುರ ದೆಂದೂರುಕಟ್ಟೆ ನಿವಾಸಿ ಮೊಹಮ್ಮದ್ ಹಂಝ ಕೋಯಾ ಅವರ 7 ಗಂಡು ಮಕ್ಕಳಲ್ಲಿ 3 ಮಂದಿ ಯೋಧರಾಗಿದ್ದಾರೆ. ಮಹಮ್ಮದ್ ಸಲೀಂ ಯೋಧನಾಗಿ ಹರ್ಯಾಣದಲ್ಲಿ ಸೇವೆ ಸಲ್ಲಿಸಿ ನಿಧನ ಹೊಂದಿದರೆ, ಮೊಹಮ್ಮದ್ ಬುಹ್ರಾನ್ ಸೇನೆಯ ಪಂಜಾಬ್‌ತುಕಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮತ್ತೋರ್ವ ಪುತ್ರ ಮೊಹಮ್ಮದ್ ಅಫಾನ್ ಸೇನೆಗೆ ಆಯ್ಕೆಯಾಗಿದ್ದು, ದೆಹಲಿಯಲ್ಲಿ ಮಿಲಿಟರಿ ತರಬೇತಿಯಲ್ಲಿದ್ದಾರೆ.
ಮಣಿಪುರ ಖಬರಸ್ತಾನದಲ್ಲಿ ಶನಿವಾರ ಸಕಲ ಸರಕಾರಿ/ ಮಿಲಿಟರಿ ಗೌರವಗಳೊಂದಿಗೆ ಯೋಧ ಮಹಮ್ಮದ್ ಸಲೀಂ ಅವರ ಅಂತಿಮ ಸಂಸ್ಕಾರ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.