ಶಿರ್ವ ಪಂಜಿಮಾರು ಪಾಲಮೆ: ಬಾವಿಗೆ ಬಿದ್ದ ಚಿರತೆ ರಕ್ಷಣೆ

Team Udayavani, Mar 8, 2019, 1:00 AM IST

chirate2.jpg

ಶಿರ್ವ: ಇಲ್ಲಿಗೆ ಸಮೀಪದ ಪಂಜಿಮಾರು ಪಾಲಮೆ ಪಿಯೂಸ್‌ ಮೋನಿಸ್‌ ಅವರ ಮನೆಯಂಗಳದ ಆವರಣವಿರುವ ಬಾವಿಗೆ ಬಿದ್ದ ಸುಮಾರು 5 ವರ್ಷ ಪ್ರಾಯದ ಹೆಣ್ಣು ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಗುರುವಾರ ಊರವರ ಸಹಕಾರದಿಂದ ಬಾವಿಯಿಂದ ಮೇಲಕ್ಕೆತ್ತಿ ರಕ್ಷಣೆ ಮಾಡಿದ್ದಾರೆ.

ಬೆಳಗ್ಗೆ ಮನೆಯಂಗಳದ ಬಾವಿಯ ಪಂಪ್‌ಸೆಟ್‌ ಚಾಲೂ ಆಗದೇ ಇದ್ದುದನ್ನು ಗಮನಿಸಿದ ಮೋನಿಸ್‌ ಅವರು ಬಾವಿಗೆ ಇಣುಕಿದಾಗ ಯಾವುದೋ ಪ್ರಾಣಿ ಬಾವಿಗೆ ಬಿದ್ದಿದೆ ಎಂದು ತನ್ನ  ಅಳಿಯ ಫಲ್ಕೆ ವಿನ್ಸೆಂಟ್‌ಗೆ ಸುದ್ದಿ ಮುಟ್ಟಿಸಿದ್ದಾರೆ. ಅವರು ಬಂದು ನೋಡಿದಾಗ ಬಾವಿಯಲ್ಲಿ ಚಿರತೆ ಇದ್ದುದು ಕಂಡು ಬಂದಿದೆ. ತಕ್ಷಣ ಗ್ರಾ.ಪಂ.ಸದಸ್ಯ ಕೆ.ಆರ್‌.ಪಾಟ್ಕರ್‌ ಅವರ ಮೂಲಕ ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದ್ದರು. ಚಿರತೆ ಯಾವಾಗ ಬಾವಿಗೆ ಬಿದ್ದಿದೆ ಎಂಬ ಖಚಿತ ಮಾಹಿತಿ ಇರದೆ ರಾತ್ರಿ ಬಾವಿಯ ಬದಿಯಿರುವ ಗೂಡಿನಲ್ಲಿರುವ ನಾಯಿ ಮರಿ ಕಾಣೆಯಾಗಿದ್ದು ತಿಂದು ಹೋಗುವಾಗ ಆಯ ತಪ್ಪಿ ಬಾವಿಗೆ ಬಿದ್ದಿದೆ ಎಂದು ಶಂಕಿಸಲಾಗಿದೆ. ಬಂಟಕಲ್ಲು, ಪಂಜಿಮಾರು ಪಾಲಮೆ ಪರಿಸರದ ನಾಗರಿಕರಲ್ಲಿ ಭೀತಿ ಹುಟ್ಟಿಸಿದ್ದ ಚಿರತೆ ಕೆಲವು ಸಮಯದಿಂದ ಪರಿಸರದ ನಾಟಿಕೋಳಿ, ಸಾಕು ನಾಯಿಗಳನ್ನು ಕೊಂದು ತಿನ್ನುತ್ತಿತ್ತು.

ಸುದ್ದಿ ತಿಳಿದ ಕೂಡಲೇ ಪಡುಬಿದ್ರಿ ವಲಯ ಅರಣ್ಯಾಧಿಕಾರಿ ನಾಗೇಶ್‌ ಬಿಲ್ಲವ ಅವರ ನೇತೃತ್ವದಲ್ಲಿ ಅರಣ್ಯ ರಕ್ಷಕರ ತಂಡ ಬೋನು ಬಾವಿಗಿಳಿಸಿದಾಗ ಚಿರತೆ ಬೋನು ಸೇರಿಕೊಂಡಿತ್ತು. ಬಳಿಕ ಬೋನನ್ನು ಬಾವಿಯಿಂದ ಮೇಲಕ್ಕೆತ್ತಿ ಚಿರತೆಯನ್ನು ಉಡುಪಿ ಅರಣ್ಯ ಇಲಾಖೆಗೆ ಕೊಂಡೊಯ್ಯಲಾಯಿತು. ಅರಣ್ಯ ಇಲಾಖೆಯ ವೈದ್ಯರಿಂದ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಚಿರತೆಯನ್ನು ಕೊಲ್ಲೂರು ವನ್ಯಜೀವಿ ವಿಭಾಗದ ಅಭಯಾರಣ್ಯಕ್ಕೆ ಬಿಡಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಪಡುಬಿದ್ರಿ ಉಪವಲಯ ಅರಣ್ಯಾಧಿಕಾರಿ ನಾಗೇಶ್‌ ಬಿಲ್ಲವ, ಉಡುಪಿ ಉಪ ವಲಯ ಅರಣ್ಯಾಧಿಕಾರಿಗಳಾದ ಸುರೇಶ್‌ ಗಾಣಿಗ,ಜಯರಾಮ, ಅರಣ್ಯ ರಕ್ಷಕರಾದ ಜಯರಾಮ ಶೆಟ್ಟಿ, ಅಭಿಲಾಷ್‌, ಮಂಜು, ಗಣಪತಿ ನಾಯಕ್‌, ವಾಹನ ಚಾಲಕ ಜಾಯ್‌ ಭಾಗವಹಿಸಿದ್ದರು.

ಶಿರ್ವ ಗ್ರಾ. ಪಂ.ಸದಸ್ಯರಾದ ಕೆ.ಆರ್‌.ಪಾಟ್ಕರ್‌,ಕೊನ್ರಾಡ್‌ ಕ್ಯಾಸ್ತಲಿನೊ, ಉಮೇಶ್‌ಪಾಲಮೆ, ಅಬೂಬಕ್ಕರ್‌, ಪ್ರಸಾದ್‌ ಶೆಟ್ಟಿ ವಳದೂರು,ಪ್ರಕಾಶ್‌ ಪಾಲಮೆ ಹಾಗೂ ಊರವರು ಸಹಕರಿಸಿದ್ದರು.

ಟಾಪ್ ನ್ಯೂಸ್

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Uppinangady: ಬಸ್‌ ನಿಲ್ದಾಣದಲ್ಲಿ ಕಳವು

Uppinangady: ಬಸ್‌ ನಿಲ್ದಾಣದಲ್ಲಿ ಕಳವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

Udupi: ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಪ್ರಕಟ

Udupi: ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಪ್ರಕಟ

car-parkala

Brahmavar: ಕಂಟೈನರ್‌ ಢಿಕ್ಕಿ; ಬೈಕ್‌ ಸಹಸವಾರೆ ಸಾವು

Kaup ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಿಂದ ಅಧಿಕಾರ ಸ್ವೀಕಾರ

Kaup ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಿಂದ ಅಧಿಕಾರ ಸ್ವೀಕಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-shiv

ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-devvvi

ಕಂದಹಾರ್‌ ಹೈಜಾಕ್‌ ವೇಳೆಯ ಪೈಲಟ್‌ ದೇವಿ ಶರಣ್‌ ನಿವೃತ್ತಿ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.