ಅಕ್ರಮ ಮರಳುಗಾರಿಕೆ: ಸ್ಥಳೀಯಾಡಳಿತದಿಂದ ಪರಿಶೀಲನೆ
Team Udayavani, Oct 22, 2021, 7:12 PM IST
ಶಿರ್ವ: ಶಿರ್ವ ಕಲ್ಲೊಟ್ಟು ತೆಂಕಬೆಟ್ಟು ಸೇತುವೆಯ ಸಮೀಪ ಕೇರಳ ಮೂಲದ ಕೋಶಿ ಎಂಬಾತನ ತೋಟದ ಬಳಿಯ ಜಾಗದಲ್ಲಿ ಪಾಪನಾಶಿನಿ ನದಿಯಿಂದ ದೋಣಿ ಹಾಗೂ ಹಿಟಾಚಿ ಯಂತ್ರ ಬಳಸಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ.
ರಾತ್ರಿ ಹಗಲು ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ನಾಗರಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಶಿರ್ವ ಗ್ರಾ.ಪಂ. ಅಧ್ಯಕ್ಷ ಕೆ.ಆರ್.ಪಾಟ್ಕರ್,ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನಂತ ಪದ್ಮನಾಭ ನಾಯಕ್ ಮತ್ತು ಸಿಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಅಕ್ರಮ ದಂಧೆಕೋರರು ಯಂತ್ರ ಬಳಸಿ ಮರಳುಗಾರಿಕೆ ನಡೆಸುತ್ತಿದ್ದು ನಾಗರಿಕರಿಂದ ಗ್ರಾ.ಪಂ.ಗೆ ದೂರು ಬಂದಿತ್ತು. ಪರಿಶೀಲನೆ ವೇಳೆ ಸ್ಥಳದಲ್ಲಿ 2 ಹಿಟಾಚಿ,1 ಲಾರಿ ಮತ್ತು 1 ದೋಣಿ ಇದ್ದು ನದಿಗೆ ಪೈಪ್ ಅಳವಡಿಸಿ ಯಂತ್ರದಿಂದ ಅಕ್ರಮ ಮರಳುಗಾರಿಕೆ ನಡೆಸಲಾಗುತ್ತಿರುವ ಸಂಗತಿ ಬೆಳಕಿಗೆ ಬಂದಿದೆ. ಜಾಗದ ಮಾಲಕ ಕೋಶಿ ಪರಾರಿಯಾಗಿದ್ದಾನೆ.
ಇದನ್ನೂ ಓದಿ:ಬಾಕಿ ಪಿಂಚಣಿ ಬಿಡುಗಡೆಗೆ ದೇವದಾಸಿಯರ ಒತ್ತಾಯ
ಅಧಿಕಾರಿಗಳಿಂದ ಉಡಾಫೆಯ ಉತ್ತರ
ಅಕ್ರಮ ಮರಳುಗಾರಿಕೆ ನಡೆಸಿ ಸರಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡುತ್ತಿರುವ ಬಗ್ಗೆ ಗಣಿ ಇಲಾಖೆಯ ಅಧಿಕಾರಿಗಳಿಗೆ ತಿಳಿಸಲು ಕರೆ ಮಾಡಿದರೆ ಸ್ವೀಕರಿಸುತ್ತಿಲ್ಲ. ಹಲವು ಬಾರಿ ಕರೆ ಮಾಡಿದಾಗ ಸ್ವೀಕರಿಸಿದ ಅಧಿಕಾರಿಯೋರ್ವರು ಸ್ಥಳೀಯ ಅಧಿಕಾರಿಗಳಿಗೆ ಮರಳುಗಾರಿಕೆಯ ಬಗ್ಗೆ ಮಾಹಿತಿ ಸಿಗದೇ ಇರುವಾಗ ಮಪಾಲದಲ್ಲಿರುವ ಇಲಾಖೆಯ ಅಧಿಕಾರಿಗಳಿಗೆ ಹೇಗೆ ಮಾಹಿತಿ ಸಿಗುತ್ತದೆ ಎಂಬ ಉಡಾಫೆಯ ಉತ್ತರ ಸಿಗುತ್ತದೆ.
ಕಳೆದ ಜುಲೈ ತಿಂಗಳಲ್ಲಿ ಕಾಪು ತಹಶೀಲ್ದಾರ್ ಪ್ರತಿಭಾ ಆರ್. ಮತ್ತು ಗಣಿ ಇಲಾಖೆಯ ಅಧಿಕಾರಿಗಳು ಶಿರ್ವ ಪೊಲೀಸರ ಸಮಕ್ಷಮದಲ್ಲಿ 3 ಲಾರಿ ಮತ್ತು ಒಂದು ಜೆಸಿಬಿಯನ್ನು ವಶಪಡಿಸಿಕೊಂಡಿದ್ದು, ದಾಳಿಯ ವೇಳೆ ಆರೋಪಿಗಳು ಪರಾರಿಯಾಗಿದ್ದರು. ಇದೀಗ ಅದೇ ಸ್ಥಳದಲ್ಲಿ ಗಣಿ ಇಲಾಖಾಧಿಕಾರಿಗಳ ಕೃಪಾಕಟಾಕ್ಷದಲ್ಲಿ ರಾಜಾರೋಷವಾಗಿ ಹಗಲು ರಾತ್ರಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದು, ಸುಲಭವಾಗಿ ಕೈಗೆಟಕುವ ದರದಲ್ಲಿ ಬಡ ಜನರಿಗೆ ಮರಳು ಸಿಗುತ್ತಿಲ್ಲ ಎಂದು ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಂಚಾಯತ್ ಸಿಬಂದಿಗಳಾದ ಪ್ರೇಮನಾಥ್,ಮಾಧವ ಮತ್ತು ಗ್ರಾಮ ಕರಣಿಕರ ಸಹಾಯಕ ಭಾಸ್ಕರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.