ಶಿರ್ವ: 2 ವರ್ಷಗಳಿಂದ ತಲೆಮರೆಸಿ ಓಡಾಡುತ್ತಿದ್ದವನ ಸೆರೆ
Team Udayavani, Apr 1, 2023, 5:35 PM IST
ಶಿರ್ವ: ಇಲ್ಲಿನ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಗೋ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 2 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಪಡುಬಿದ್ರಿ ನಾಡ್ಸಾಲು ಗ್ರಾಮದ ಕಂಚಿನಡ್ಕ ಶಾಲೆಯ ಬಳಿಯ ನಿವಾಸಿ ಜಬ್ಟಾರ್ ಹುಸೇನ್ ವಾರೆಂಟ್ ಅಸಾಮಿಯನ್ನು ಶಿರ್ವ ಪೊಲೀಸ್ ಉಪನಿರೀಕ್ಷಕ ಅನಿಲ್ ಕುಮಾರ್ ಟಿ. ನಾಯ್ಕ (ತನಿಖೆ) ಅವರ ಮಾರ್ಗದರ್ಶನದಂತೆ ಎಎಸ್‌ಐ ಕೃಷ್ಣ ಆಚಾರ್ಯ ಮತ್ತು ಪಿಸಿ ರಾಮ ರಾಜಪ್ಪ ನಾಯ್ಕ ಎ.1 ರಂದು ಪಡುಬಿದ್ರಿ ಬಸ್‌ನಿಲ್ದಾಣದ ಬಳಿ ಬಂಧಿಸಿ,ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ಎಸ್‌ಸಿ ನಂಬ್ರ ಆಗುವವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯನ್ನು ಹಿರಿಯಡ್ಕ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ.
ಈತನ ಮೇಲೆ ಕಾಪು, ಭಟ್ಕಳ ನಗರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿಯಿರುತ್ತದೆ. ಅಲ್ಲದೆ ಈ ಹಿಂದೆ ದ.ಕ. ಜಿಲ್ಲೆಯ ಬಜ್ಪೆ,ಸುರತ್ಕಲ್ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿರುತ್ತವೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
COPD: ಕ್ರೋನಿಕ್ ಒಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.