ಶಿರ್ವ ಶ್ರೀ ಸಿದ್ಧಿ ವಿನಾಯಕ ದೇಗುಲದಲ್ಲಿ ದೃಢಕಲಶ ಸಂಪನ್ನ
Team Udayavani, Oct 26, 2021, 4:10 PM IST
ಶಿರ್ವ: ಕ್ರೈಸ್ತ ಉದ್ಯಮಿ ಗ್ಯಾಬ್ರಿಯಲ್ ಫೇಬಿಯನ್ ನಜರತ್ ಶಿರ್ವ ಮುಖ್ಯರಸ್ತೆಯ ಅಟ್ಟಿಂಜ ಕ್ರಾಸ್ ಬಳಿ ಕಟ್ಟಿಸಿದ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಜೋತಿಷ ವಿದ್ವಾನ್ ಉಡುಪಿ ಕನ್ನರ್ಪಾಡಿ ವೇ|ಮೂ|ಸಂದೀಪ್ ಉಪಾಧ್ಯಾಯ ಅವರ ನೇತೃತ್ವದಲ್ಲಿ ಋತ್ವಿಜರ ಸಹಕಾರದೊಂದಿಗೆ ದೃಢಕಲಶಾಭಿಷೇಕ ಮಂಗಳವಾರ ಸಂಪನ್ನಗೊಂಡಿತು.
ಶ್ರೀ ಸಿದ್ಧಿ ವಿನಾಯಕನ ಸನ್ನಿಧಿಯಲ್ಲಿ ಕಲಶಾಧಿವಾಸ ಹೋಮ,ಗಣಹೋಮ,ಗಣಪತಿ ಪ್ರಾಯಶ್ಚಿತ್ತ ಶಾಂತಿ ಹೋಮ,ಪ್ರಾಯಶ್ಚಿತ್ತ ಹೋಮ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ 49 ದೃಢಕಲಶಾಭಿಷೇಕ ನಡೆಯಿತು.ಮಧ್ಯಾಹ್ನ ಮಹಾಪೂಜೆಯ ಬಳಿಕ ಅನ್ನ ಸಂತರ್ಪಣೆ ನಡೆಯಿತು.
ಕಾರ್ಯಕ್ರಮಲ್ಲಿ ದೇವಸ್ಥಾನದ ಮೊಕ್ತೇಸರ ಗ್ಯಾಬ್ರಿಯಲ್ ನಜರತ್,ದೇವಸ್ಥಾನದ ವಾಸ್ತುಶಿಲ್ಪಿ ಎಂ. ಶ್ರೀನಾಗೇಶ್ ಹೆಗ್ಡೆ ದಂಪತಿ,ದೇವಸ್ಥಾನದ ನಿರ್ವಾಹಕರಾದ ಸತೀಶ್ ಶೆಟ್ಟಿ ಮಲ್ಲಾರ್ ಮತ್ತು ರತ್ನಾಕರ ಕುಕ್ಯಾನ್ ಮಾಜಿ ಜಿ.ಪಂ. ಸದಸ್ಯೆ ಗೀತಾಂಜಲಿ ಸುವರ್ಣ,ಹಿರಿಯರಾದ ತಮ್ಮಣ್ಣ ಪೂಜಾರಿ,ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ವಿಠಲ ಅಂಚನ್,ವಿವೇಕ್ ಆಚಾರ್ಯ ಶಿರ್ವ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಗ್ರಾ.ಪಂ. ಸದಸ್ಯರು,ಭಕ್ತಾಧಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.