ಶಿರ್ವ ಎಂಎಸ್‌ಆರ್‌ಎಸ್ ಕಾಲೇಜು: ವಿವಿ ಮಟ್ಟದ ವಾಲಿಬಾಲ್ ಪಂದ್ಯಕೂಟ ಉದ್ಘಾಟನೆ
Team Udayavani, Jan 24, 2023, 6:46 PM IST
ಶಿರ್ವ: ಕಾಲೇಜಿನ ಸಂಸ್ಥಾಪಕ ಮುಲ್ಕಿ ಸುಂದರ್ ರಾಮ್ ಶೆಟ್ಟಿಯವರ ಸ್ಮರಣಾರ್ಥ ಮಂಗಳೂರು ವಿ.ವಿ. ಮಟ್ಟದ ಪುರುಷ ಮತ್ತು ಮಹಿಳೆಯರ ವಾಲಿಬಾಲ್ ಪಂದ್ಯಕೂಟವು ಜ. 24 ರಂದು ಶಿರ್ವದ ಎಂಎಸ್‌ಆರ್‌ಎಸ್ ಕಾಲೇಜಿನ ಮೈದಾನದಲ್ಲಿ ನಡೆಯಿತು.
ಬ್ಯಾಂಕ್ ಆಫ್ ಬರೋಡ ಉಡುಪಿ ವಲಯ ಮುಖ್ಯಸ್ಥ ಸನಾತನ್ ಸತುವಾ ಪಂದ್ಯಾಕೂಟವನ್ನು ಉದ್ಘಾಟಿಸಿ ಕ್ರೀಡಾಕೂಟಗಳು ಯುವಕ-ಯುವತಿಯರ ಮಾನಸಿಕ ಮತ್ತು ದೈಹಿಕ ಕ್ಷಮತೆಯನ್ನು ಉತ್ತೇಜಿಸಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುತ್ತವೆ ಎಂದು ಶುಭ ಹಾರೈಸಿದರು.
ಉಡುಪಿ ವಲಯದ ಉಪ ಮುಖ್ಯಸ್ಥ ಸುರೇಶ್ ಶೆಟ್ಟಿ ಮಾತನಾಡಿ ರಾಷ್ಟ್ರಿಕೃತ ಬ್ಯಾಂಕುಗಳು ದೊಡ್ಡ ಮಟ್ಟದಲ್ಲಿ ಕ್ರೀಡಾಳುಗಳಿಗೆ ಬೆಂಬಲವನ್ನು ನೀಡುವುದರ ಮೂಲಕ ಅನೇಕ ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರೀಡಾಪಟುಗಳನ್ನು ದೇಶಕ್ಕೆ ಕೊಡುಗೆಯಾಗಿ ನೀಡಿದೆ ಎಂದು ಹೇಳಿದರು.
ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಪ್ರೊ|ವೈ. ಭಾಸ್ಕರ್ ಶೆಟ್ಟಿ ಮಾತನಾಡಿ 42 ವರ್ಷಗಳಿಂದ ಕಾಲೇಜು, ಕಾಲೇಜಿನ ಸಂಸ್ಥಾಪಕ ಹಾಗೂ ವಿಜಯಾಬ್ಯಾಂಕ್‌ನ ಅಧ್ಯಕ್ಷ ದಿ| ಮುಲ್ಕಿ ಸುಂದರ್ ರಾಮ್ ಶೆಟ್ಟಿಯವರ ಸ್ಮರಣಾರ್ಥ ಕ್ರಿಡಾಕೂಟವನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ, ಆ ಮೂಲಕ ಗ್ರಾಮೀಣ ಕ್ರೀಡಾಪಟುಗಳಿಗೆ ಅವಕಾಶಗಳ ಹೆಬ್ಟಾಗಿಲನ್ನು ತೆರೆದಿದ್ದು, ಅನೇಕ ಕ್ರೀಡಾಪಟುಗಳು ಸರಕಾರದ ವಿವಿಧ ಹುದ್ದೆಗಳನ್ನು ಪಡೆಯುವಲ್ಲಿ ಸಹಕಾರಿಯಾಗಿದೆ ಎಂದು ಹೇಳಿದರು.
ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಹಾಗೂ ಉದ್ಯಮಿ ಮೋಹನ್ ವಿ. ಶೆಟ್ಟಿ ಮಾತನಾಡಿ ಕರಾವಳಿಯ ಬಹುತೇಕ ಕಾಲೇಜುಗಳು ಕೇವಲ ಗುಮಾಸ್ತರನ್ನು ಉತ್ಪಾದಿಸಿದರೆ, ಗ್ರಾಮೀಣ ಪ್ರದೇಶದ ಈ ಕಾಲೇಜು ನೂರಾರು ಉದ್ಯಮಿಗಳ ಸಮೂಹವನ್ನೇ ಉತ್ಪಾದಿಸಿದೆ ಎಂದರು.
ಕಾಲೇಜಿನ ಪ್ರಾಂಶುಪಾಲೆ ಡಾ| ನಯನಾ ಎಂ. ಪಕ್ಕಳ ಸ್ವಾಗತಿಸಿದರು. ಉಪಪ್ರಾಂಶುಪಾಲ ಪ್ರೊ| ಮಂಜುನಾಥ್ ಕೆ.ಜಿ. ಅತಿಥಿಗಳನ್ನು ಪರಿಚಯಿಸಿದರು. ಡಾ|ಮಿಥುನ್ ಚಕ್ರವರ್ತಿ ಕಾರ್ಯಕ್ರಮ ನಿರೂಪಿಸಿ, ಕಾಲೇಜಿನ ಕ್ರೀಡಾ ಸಲಹೆಗಾರ ಎಸ್. ಸದಾನಂದ ವಂದಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ಕಾಲೇಜುಗಳ 32 ಕ್ರೀಡಾ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು.
ಇದನ್ನೂ ಓದಿ: ಬೆಂಗಳೂರು: ಫ್ಲೈ ಓವರ್ ಮೇಲೆ ನಿಂತು ನೋಟಿನ ಮಳೆ ಸುರಿಸಿದ ವ್ಯಕ್ತಿ ಯಾರು?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.