“ಗೋ ಬ್ಯಾಕ್‌’ಗೆ ಹೆದರೆ: ಶೋಭಾ

Team Udayavani, Feb 25, 2019, 1:00 AM IST

goo-back.jpg

ಉಡುಪಿ/ಕೋಟ: “ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಚುನಾವಣಾ ಟಿಕೆಟ್‌ ಆಕಾಂಕ್ಷಿಗಳಲ್ಲಿ ಯಾರೋ 15-20 ಮಂದಿ ಸೇರಿಕೊಂಡು ನನ್ನ ವಿರುದ್ಧ ಗೋ ಬ್ಯಾಕ್‌ ಚಳವಳಿ ನಡೆಸುತ್ತಿದ್ದಾರೆ. ಇದಕ್ಕೆಲ್ಲಾ ನಾನು ಹೆದರು ವುದಿಲ್ಲ. ಜನತೆ ನನ್ನ ಬೆಂಬಲಕ್ಕಿದ್ದಾರೆ’ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

“ಗೋ ಬ್ಯಾಕ್‌ ಶೋಭಾ’ ಎಂಬ ಟ್ವೀಟ್‌ ಅಭಿಯಾನದ ಬಗ್ಗೆ ಪತ್ರಕರ್ತರು ರವಿವಾರ ಪ್ರಶ್ನಿಸಿದಾಗ ಶೋಭಾ ಅವರು ಪ್ರತಿಕ್ರಿಯಿಸಿದರು.

ಪುರುಷರಿಗಿಂತ ಹೆಚ್ಚು ಕೆಲಸ
ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ಈ ಹಿಂದೆ ಪುರುಷರು ಪ್ರತಿನಿಧಿಸುತ್ತಿದ್ದರು. ಅವರು ಮಾಡಿರುವುದಕ್ಕಿಂತ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ನಾನು ಮಾಡಿದ್ದೇನೆ. ಎರಡೂ ಜಿಲ್ಲೆಗಳಿಗೆ ಕೇಂದ್ರೀಯ ವಿದ್ಯಾಲಯ ತಂದಿದ್ದೇನೆ. ಜಿಲ್ಲೆಗೆ ಮೊದಲ ಬಾರಿಗೆ ಪಾಸ್‌ ಪೋರ್ಟ್‌ ಕಚೇರಿ, ಜಿಟಿಡಿಸಿ ಟ್ರೈನಿಂಗ್‌ ಸೆಂಟರ್‌, ಕೌಶಲಾಭಿವೃದ್ಧಿ ತರಬೇತಿ ಕೇಂದ್ರ ತಂದಿದ್ದೇನೆ. ರಾಮಕೃಷ್ಣ ಹಗಡೆ ಕೌಶಲ ತರಬೇತಿ ಕೇಂದ್ರವೂ ಮಂಜೂರಾಗಿದೆ. ರಾಜ್ಯದಲ್ಲೇ ಮೊದಲ ಬಾರಿಗೆ ಉಡುಪಿಗೆ ಸಖೀ ಸೆಂಟರ್‌ ಮಂಜೂರಾಗಿ ಕಾರ್ಯ ನಿರ್ವಹಿಸುತ್ತಿದೆ. ಕೇಂದ್ರ ರಸ್ತೆ ನಿಧಿಯಲ್ಲಿ
ಅತ್ಯಧಿಕ ಮೊತ್ತ ಉಡುಪಿ ಜಿಲ್ಲೆಗೆ ಬಿಡುಗಡೆಯಾಗಿದೆ. ಕೆಲವು ರಸ್ತೆಗಳು ಹೆದ್ದಾರಿ ದರ್ಜೆಗೇರಿವೆ. ಉಡುಪಿಯಲ್ಲಿ ಜೆಮ್ಸ್‌ ಆ್ಯಂಡ್‌ ಜುವೆಲರಿ ಕೇಂದ್ರ ಮಂಜೂರಾಗಿ ಕಟ್ಟಡವೂ ನಿರ್ಮಾಣ ವಾಗಿದೆ. ಆಯುಷ್ಮಾನ್‌ ಯೋಜನೆ, ಉಜ್ವಲಾ ಯೋಜನೆಯಡಿ ಜನರಿಗೆ ಸೌಲಭ್ಯ ಸಿಗುತ್ತಿದೆ. ಇದನ್ನೆಲ್ಲಾ ಈ ಹಿಂದೆ ಪ್ರತಿನಿಧಿಸಿದ ಗಂಡಸರು ಯಾಕೆ ಮಾಡಿಲ್ಲ ಎಂದು ಪ್ರಶ್ನಿಸಿದ ಶೋಭಾ “ಟಿಕೆಟ್‌ ಆಸೆಗಾಗಿ ಅವಮಾನ ಮಾಡುವುದು ಸರಿಯಲ್ಲ. ಇದರಿಂದ ಅವರು ಪಕ್ಷಕ್ಕೆ ಏನು ಕೊಡುಗೆ ನೀಡುತ್ತಿದ್ದಾರೆ ಎಂಬುದನ್ನು ಯೋಚಿಸಬೇಕು’ ಎಂದರು.

ಪಕ್ಷ ಸೂಚಿಸಿದರೆ ಸ್ಪರ್ಧೆ 
ಟಿಕೇಟ್‌ ನೀಡುವುದು ಪಕ್ಷಕ್ಕೆ ಬಿಟ್ಟ ವಿಚಾರ. ಪಕ್ಷಕ್ಕಾಗಿ ಮಾಡಿರುವ ಕೆಲಸವನ್ನು ಮಾನದಂಡವಾಗಿರಿಸಿ ಟಿಕೆಟ್‌ ನೀಡಲಾಗುತ್ತದೆ. ಪಕ್ಷ ಸೂಚಿಸಿದರೆ ಸ್ಪರ್ಧೆ ಮಾಡುತ್ತೇನೆ. ಬೇರೆ ಜವಾಬ್ದಾರಿ ನೀಡಿದರೆ ಅದನ್ನು ಕೂಡ ಮಾಡುತ್ತೇನೆ ಎಂದು ಶೋಭಾ ಹೇಳಿದರು.

ರಾಜ್ಯದ ವೈಫ‌ಲ್ಯ
ಬೆಂಗಳೂರಿನಲ್ಲಿ ಏರ್‌ಶೋಗೆ ಆಗಮಿಸುವ ಸಾರ್ವಜನಿಕರಿಗೆ ರಕ್ಷಣೆ ಒದಗಿಸುವ ಜವಾಬ್ದಾರಿ ಯಲ್ಲಿ ರಾಜ್ಯ ಸರಕಾರ ವಿಫ‌ಲ ವಾಗಿದೆ. ಈ ಹಿಂದೊಮ್ಮೆ ಏರ್‌ಶೋವನ್ನು ಬೇರೆ ರಾಜ್ಯಕ್ಕೆ ಸ್ಥಳಾಂತರಿಸುವ ಪ್ರಯತ್ನಗಳು ನಡೆದಾಗ ನಾವು ಒತ್ತಡ ಹಾಕಿ ಏರ್‌ ಶೋ ಬೆಂಗಳೂರಿನಲ್ಲಿಯೇ ಮುಂದುವರಿಯುವಂತೆ ಮಾಡಿದ್ದೆವು. ಆದರೆ ರಾಜ್ಯ ಸರಕಾರ ರಕ್ಷಣೆ ಒದಗಿಸುವಲ್ಲಿ ವೈಫ‌ಲ್ಯ ಕಂಡಿದೆ. ರಾಜ್ಯ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳ ಲಾಗದು. ಈ ಘಟನೆಗೂ ಕಾಶ್ಮೀರದಲ್ಲಿ ನಡೆಯುತ್ತಿರುವ ಘಟನೆಗಳಿಗೂ ಸಂಬಂಧವಿದೆಯೇ ಅಥವಾ ಇದು ಆಕಸ್ಮಿಕವೋ ಎನ್ನುವುದರ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಶೋಭಾ ಹೇಳಿದರು.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.