ಶೋಭಾ ಜಯಕ್ಕೆ ದಾಖಲೆಯ ಮೆರುಗು


Team Udayavani, May 25, 2019, 6:15 AM IST

230519ASTRO75

ಉಡುಪಿ: ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಅತ್ಯಧಿಕ ಮತಗಳ ಅಂತರದಲ್ಲಿ ಜಯ ಗಳಿಸಿದ್ದು, ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿದೆ. ಈ ಕ್ಷೇತ್ರಕ್ಕೆ 1951ರಿಂದ ಇದುವರೆಗೆ ನಡೆದ 17 ಲೋಕಸಭಾ ಚುನಾವಣೆಗಳಲ್ಲಿ ಮತ್ತು ಚಿಕ್ಕಮಗಳೂರು ಕ್ಷೇತ್ರ ಹಾಸನದಿಂದ ಬೇರ್ಪಟ್ಟು 1967ರಿಂದ ಸ್ವತಂತ್ರ ಕ್ಷೇತ್ರವಾಗಿ 2009ರ ವರೆಗೆ ನಡೆದ 13 ಲೋಕಸಭಾ ಚುನಾ ವಣೆಯಲ್ಲಿ ಈ ಬಾರಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆಯವರು ದಾಖಲೆಯ ಅಂತರದಲ್ಲಿ ವಿಜಯ ಸಾಧಿಸಿದ್ದಾರೆ.

ಈ ಮೂಲಕ ಮೋದಿ ಅಲೆ ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲೂ ಬಿಜೆಪಿಯ ಕೈ ಹಿಡಿದಿದೆ. ಬಿಜೆಪಿ ನಾಯಕರ ಒಗ್ಗಟ್ಟು, ಕಾರ್ಯಕರ್ತರ ಹುಮ್ಮಸ್ಸು, ಯುವ ಮತದಾರರು ಮೋದಿ ಪರ ನಿಂತದ್ದು ಈ ಭಾರೀ ಅಂತರದ ಗೆಲುವಿಗೆ ಕಾರಣ ಎಂದು ಹೇಳಬಹುದು.

ಕಳೆದ ಬಾರಿಯ ದಾಖಲೆ ಪತನ
2014ರ ಲೋಕಸಭಾ ಚುನಾವಣೆ ಯಲ್ಲಿ ಶೋಭಾ 5,81,168 ಮತ ಗಳಿಸಿದ್ದು, ಪ್ರತಿಸ್ಪರ್ಧಿ ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್‌ ಹೆಗ್ಡೆ 3,99,525 ಮತಗಳನ್ನು ಗಳಿಸಿದ್ದರು. ಈ ಮೂಲಕ 1,81,643 ಮತ ಅಂತರ ದಲ್ಲಿ ಜಯಭೇರಿ ಬಾರಿಸಿದ್ದರು.

ಕ್ಷೇತ್ರವಾರು ಗಳಿಕೆಯೂ ಹೆಚ್ಚಳ
ಕುಂದಾಪುರ, ಉಡುಪಿ, ಕಾಪು, ಕಾರ್ಕಳ, ಶೃಂಗೇರಿ, ಮೂಡಿಗೆರೆ, ಚಿಕ್ಕಮಗಳೂರು, ತರಿಕೆರೆ ವಿಧಾನಸಭಾ ಕ್ಷೇತ್ರಗಳಲ್ಲೂ ಮತಗಳಿಕೆ ದಾಖಲೆ ಮಟ್ಟಕ್ಕೆ ತಲುಪಿದೆ.

ದಾಖಲೆ ಅಂತರ2014ರ ಲೋಕಸಭಾ ಚುನಾವಣೆ ಯಲ್ಲಿ 1,81,643 ಮತಗಳ ಅಂತರ ದಲ್ಲಿ ಜಯಭೇರಿ ಬಾರಿಸಿದ್ದ ಶೋಭಾ ಅವರ ಗೆಲುವಿನ ಅಂತರ ಈ ಬಾರಿ 3 ಪಟ್ಟು ಹೆಚ್ಚಳವಾಗಿರುವುದು ವಿಶೇಷ. ಪ್ರತಿ ಸ್ಪರ್ಧಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಅವರಿಗಿಂತ ಸುಮಾರು 3.45 ಲಕ್ಷ ಮತ ಅಂತರದಲ್ಲಿ ಜಯಗಳಿಸಿದ್ದಾರೆ.

ಫ‌ಲ ನೀಡದ ಮೈತ್ರಿ ಅಭ್ಯರ್ಥಿ
ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಇಲ್ಲದಿ ರುವುದರಿಂದ ಬಿಜೆಪಿ ಅಭ್ಯರ್ಥಿ ಗೆಲುವು ಖಚಿತವೆಂದೇ ಹೇಳಲಾಗು ತ್ತಿತ್ತು. ಆದರೆ ಇಷ್ಟು ಅಂತರದ ಗೆಲುವು ಬಿಜೆಪಿ ಪಾಳಯದಲ್ಲೂ ಅಚ್ಚರಿ ಮೂಡಿಸಿದೆ. ಈ ಭಾಗದಲ್ಲಿ ಜೆಡಿಎಸ್‌ ಪ್ರಬಲವಾಗಿಲ್ಲದೆ ಇರುವುದು ಕೂಡ ಮೈತ್ರಿ ಅಭ್ಯರ್ಥಿ ಪ್ರಮೋದ್‌ ಸೋಲಿಗೆ ಒಂದು ಕಾರಣ ಎನ್ನಲಾಗುತ್ತಿದೆ.

ಮತಗಳ ಅಂತರ “ಲಕ್ಷಾಂತರ’
ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಅಂದರೆ 5 ಬಾರಿ ಚುನಾಯಿತ ರಾದದ್ದು ಕಾಂಗ್ರೆಸ್‌ ನಾಯಕ ಆಸ್ಕರ್‌ ಫೆರ್ನಾಂಡಿಸ್‌. ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಆಸ್ಕರ್‌ ಮೂರು ಬಾರಿ, ಟಿ.ಎ.ಪೈ ಒಂದು ಬಾರಿ ಗೆಲುವು ಸಾಧಿಸಿ ದ್ದರು. ಚಿಕ್ಕಮಗಳೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಡಿ.ಎಂ. ಪುಟ್ಟೇಗೌಡರು ಎರಡು ಬಾರಿ, ಡಿ.ಕೆ. ತಾರಾದೇವಿಯವರು ಒಂದು ಬಾರಿ ಲಕ್ಷಕ್ಕೂ ಹೆಚ್ಚು ಅಂತರ ದಿಂದ ಗೆಲುವು ಸಾಧಿಸಿದ್ದರು. ಆದರೆ ಈ ದಾಖಲೆಗಳನ್ನು ಶೋಭಾ ಕರಂದ್ಲಾಜೆ ಮುರಿದಿದ್ದಾರೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.