Kapu ಪ್ರಚಾರಕ್ಕಾಗಿ ಶೋಭಾ ಕ್ಷುಲ್ಲಕ ರಾಜಕಾರಣ: ಸೊರಕೆ ಆರೋಪ
Team Udayavani, Dec 2, 2023, 11:20 PM IST
ಕಾಪು: ರಾಜ್ಯದಲ್ಲಿ ಬರಗಾಲದಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಅತಿವೃಷ್ಟಿ, ಅನಾವೃಷ್ಟಿ ಯಿಂದಾಗಿ ಬೆಳೆಗಳು ನಷ್ಟವಾಗಿ ರೈತರ ಬದುಕು ದುಸ್ತರವಾಗಿದೆ. ಆದರೆ ಕೇಂದ್ರ ಸರಕಾರ ಮಾತ್ರ ಇದುವರೆಗೂ ನಯಾಪೈಸೆ ಪರಿಹಾರವನ್ನು ನೀಡಿಲ್ಲ. ಆದರೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯದಲ್ಲಿ ಯಶಸ್ವಿಯಾಗಿ ಜನಪರ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ನೇತೃತ್ವದ ಸರಕಾರವನ್ನು ಟೀಕಿಸುವ ಮೂಲಕ ಅಗ್ಗದ ಪ್ರಚಾರಕ್ಕಾಗಿ ಕ್ಷುಲ್ಲಕ ರಾಜಕಾರಣ ನಡೆಸು ತ್ತಿದ್ದಾರೆ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ವಿನಯಕುಮಾರ್ ಸೊರಕೆ ಆರೋಪಿಸಿದ್ದಾರೆ.
ಚುನಾವಣ ಪ್ರಚಾರಕ್ಕೆ ಸೀಮಿತ ವೆಂಬಂತೆ ಆಗೊಮ್ಮೆ ಈಗೊಮ್ಮೆ ಜಿಲ್ಲೆಯಲ್ಲಿ ಕಾಣಿಸಿಕೊಳ್ಳುತ್ತಿರುವ ಕೇಂದ್ರ ಸಚಿವೆ, ಉಡುಪಿ – ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಈಗ ವಿಕಸಿತ ಭಾರತ ಸಂಕಲ್ಪ ಯಾತ್ರೆ ನೆಪದಲ್ಲಿ ಚುನಾವಣ ಪ್ರಚಾರಕ್ಕಾಗಿ ಕ್ಷೇತ್ರಕ್ಕೆ ಆಗಮಿಸಿದ್ದಾರೆ. ಕರ್ನಾಟಕ ಸರಕಾರವು 4.50 ಲಕ್ಷ ಕೋಟಿ ರೂ. ತೆರಿಗೆ ಸಂಗ್ರಹಿಸಿ ಕೇಂದ್ರ ಸರಕಾರಕ್ಕೆ ನೀಡುತ್ತಿದೆ. ಇದರಲ್ಲಿ ಕೇಂದ್ರ ಸರಕಾರವು ರಾಜ್ಯ ಸರಕಾರಕ್ಕೆ ಎಷ್ಟು ಅನುದಾನ ನೀಡುತ್ತಿದೆ ಎಂದು ಶೋಭಾ ಜನತೆಗೆ ತಿಳಿಸಬೇಕು ಎಂದು ಆಗ್ರಹಿಸಿದರು.
ಕೇಂದ್ರ ಕ್ಯಾಬಿನೆಟ್‌ನಲ್ಲಿ
ಇರುವುದು ಯಾರ ತಂಡ?
ರಾಜ್ಯ ಸರಕಾರದ ಕ್ಯಾಬಿನೆಟ್‌ನಲ್ಲಿರುವುದು ಕಳ್ಳರ ತಂಡ ಎಂದು ಅಸಾಂವಿಧಾನಿಕ ಪದ ಬಳಕೆ ಮಾಡಿ ರುವ ಸಂಸದೆಯ ಹೇಳಿಕೆ ಅವರ ರಾಜಕೀಯ ಆಪ್ರಬುದ್ಧತೆಗೆ ಹಿಡಿದ ಕನ್ನಡಿಯಂತಾಗಿದೆ. ರಾಜ್ಯ ಸರಕಾರದ ಕ್ಯಾಬಿನೆಟ್‌ನಲ್ಲಿರುವುದು ಕಳ್ಳರ ತಂಡವೆಂದಾದರೆ, ಕೇಂದ್ರ ಸರಕಾರದ ಕ್ಯಾಬಿನೆಟ್ ಅನ್ನು ಏನೆಂದು ಕರೆಯ ಬೇಕಿದೆ ಎಂದು ಸೊರಕೆ ಪ್ರಶ್ನಿಸಿ ದ್ದಾರೆ.
ನೇಜಾರು ಘಟನೆ ಕಾಣಿಸಿಲ್ಲವೇಕೆ ?
ಶೋಭಾ ಅವರ ಸಂಸದೀಯ ಕ್ಷೇತ್ರವಾಗಿರುವ ಉಡುಪಿ ನೇಜಾರಿ ನಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ನಡೆದು 20 ದಿನಗಳು ಕಳೆದಿವೆ. ಕ್ಷೇತ್ರದ ಸಂಸದರು ಮಾತ್ರ ಈ ಘಟನೆಯನ್ನು ಖಂಡಿಸದೆ ಮೌನ ತಾಳಿರುವುದು ಅವರ ಸಂಕುಚಿತ ಮನಃ ಸ್ಥಿತಿಯನ್ನು ಬಿಂಬಿಸುತ್ತಿದೆ. ಜಿಲ್ಲೆಗೆ ಆಗಮಿಸಿಯೂ ಮನೆಯವರಿಗೆ ಸಾಂತ್ವನ ಹೇಳದಿರುವುದು ಖಂಡ ನೀಯ ಎಂದು ಸೊರಕೆ ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.